66 ಶಾಲೆಗಳಿಗೆ ಈವರೆಗೂ ಮೊಟ್ಟೆಯೇ ವಿತರಣೆಯಾಗಿಲ್ಲ!

Date:

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯ ಅನುಷ್ಠಾನ ಕ್ರಮ ಕುರಿತು ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಇತ್ತೀಚೆಗೆ ಮೌಲ್ಯಮಾಪನ ನಡೆಸಿದ್ದು, 357 ಶಾಲೆಗಳಿಗೆ ಭೇಟಿ ನೀಡಿದಾಗ 66 ಶಾಲೆಗಳಿಗೆ ಈವರೆಗೂ ಮೊಟ್ಟೆಯೇ ವಿತರಣೆಯಾಗಿಲ್ಲ ಎಂಬುದು ಬೆಳಕಿಗೆ ಬಂದಿದೆ.

ಪಿ.ಎಂ. ಪೋಷಣ್ ಯೋಜನೆ ಅಡಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ನಾಲ್ಕು ಸೇರಿ ವಾರಕ್ಕೆ ಆರು ಮೊಟ್ಟೆಗಳನ್ನು 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ.

ಆದರೆ, ಶಾಲಾ ಮಕ್ಕಳಿಗೆ ವಾರಕ್ಕೆ ಆರು ದಿನ ಬೇಯಿಸಿದ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ 98 ಅಧಿಕಾರಿಗಳು ವಿಫಲರಾಗಿದ್ದು, ಶಾಲಾ ಶಿಕ್ಷಣ ಇಲಾಖೆ ಈಗ ಆ ಅಧಿಕಾರಿಗಳಿಗೆ ನೋಟಿಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೌಂಡೇಷನ್ ಪ್ರತಿನಿಧಿಗಳು ಸಿದ್ದಪಡಿಸಿದ ಅಧ್ಯಯನ ವರದಿ ಆಧರಿಸಿ ಅನುಷ್ಠಾನದ ಹೊಣೆ ಸಮರ್ಪಕವಾಗಿ ನಿಭಾಯಿಸದ 50 ಬಿಇಒಗಳು ಹಾಗೂ ಪಿ.ಎಂ. ಪೋಷಣ್ ಅಭಿಯಾನದ 48 ಸಹಾಯಕ ನಿರ್ದೇಶಕರೂ ಸೇರಿ 98 ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್;‌ ಭವಿಷ್ಯದ‌ ಯುವ ಭಾರತಕ್ಕೂ ಮಾರಕ

ಅಜೀಂ ಪ್ರೇಮ್‌ಜಿ ಫೌಂಡೇಷನ್ ಮೊಟ್ಟೆ ವಿತರಣೆಗೆ ಕೈಜೋಡಿಸಿದ್ದು, ₹1,500 ಕೋಟಿ ನೆರವು ನೀಡಿದೆ. ಸೆ.25ರಿಂದ ಮೊಟ್ಟೆ ವಿತರಣೆ ಕಾರ್ಯಕ್ರಮ ಆರಂಭವಾಗಿದೆ. ಮೊಟ್ಟೆ ತಿನ್ನುವುದಿಲ್ಲ ಎಂದು ಬೇಡಿಕೆ ಸಲ್ಲಿಸುವ ಮಕ್ಕಳಿಗೆ ನಿಯಮದಂತೆ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುತ್ತಿದೆ.

ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಈ ಬಗ್ಗೆ ಮಾತನಾಡಿದ್ದು, “ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಲು, ದೈಹಿಕ ಆರೋಗ್ಯದ ಬೆಳವಣಿಗೆಗೆ ಉತ್ತೇಜಿಸಲು ಮಧ್ಯಾಹ್ನದ ಬಿಸಿಯೂಟ ಯೋಜನೆ ಆರಂಭಿಸಲಾಗಿದೆ. ಅಜೀಂ ಪ್ರೇಮ್‌ಜಿ ಫೌಂಡೇಷನ್ ನೆರವು ನೀಡುತ್ತಿದೆ. ಇಂತಹ ಮಹತ್ವಕಾಂಕ್ಷಿ ಯೋಜನೆ ಯಶಸ್ಸಿಗೆ ಶ್ರಮಿಸಬೇಕಾದ ಅಧಿಕಾರಿಗಳಿಂದ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ. ಅಂಥವರ ವಿರುದ್ದ ಶಿಸ್ತುಕ್ರಮ ಅನಿವಾರ್ಯ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...