ಉಗ್ರರ ದಾಳಿಗೆ ಹತ್ತು ದಿನ: ‘ಹುಡುಕಿ ಹುಡುಕಿ ಬೇಟೆ’ಯಾಡುತ್ತಿರುವುದು ಯಾರನ್ನು?

Date:

ದೇಶದ ಸುದ್ದಿ ಮಾಧ್ಯಮಗಳು ಪಹಲ್ಗಾಮ್ ಉಗ್ರ ದಾಳಿಯ ಹೊಣೆಯನ್ನು, ಭದ್ರತಾ ವೈಫಲ್ಯವನ್ನು ಮೋದಿ ಮತ್ತು ಅಮಿತ್ ಶಾ ತಲೆಗೆ ಕಟ್ಟಲು ತಯಾರಿಲ್ಲ. ಬದಲಿಗೆ ಪ್ರಶ್ನೆ ಮಾಡುವವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ...

‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ನರಮೇಧಗೈದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಗುಡುಗಿದ್ದಾರೆ.

ಗೃಹ ಸಚಿವರ ‘ಹುಡುಕಿ ಹುಡುಕಿ ಬೇಟೆಯಾಡುವ’ ಹೇಳಿಕೆ ಈಗ ಟ್ರೋಲ್‌ಗೆ ಒಳಗಾಗಿದೆ. ವೈರಲ್ ಆಗುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರದ ನಡೆಗಳ ಕುರಿತು ಕಟುವಾಗಿ ಟೀಕಿಸುವ, ತರ್ಕಬದ್ಧವಾಗಿ ವಿಚಾರ ಮಂಡಿಸುವ ತೃಣಮೂಲ ಕಾಂಗ್ರೆಸ್ಸಿನ ಸಂಸದೆ ಮೊಹುವಾ ಮೊಯಿತ್ರಾ ಅವರು, ‘ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಾಗಿ ಇಂದಿಗೆ ಹತ್ತು ದಿನಗಳು ಕಳೆದವು. ಈ ಹತ್ತು ದಿನಗಳಲ್ಲಿ ಕೇಂದ್ರ ಸರ್ಕಾರ, ಸೋಷಿಯಲ್ ಮೀಡಿಯಾದಲ್ಲಿ ಸರ್ಕಾರವನ್ನು ಪ್ರಶ್ನೆ ಮಾಡುವವರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತಿದೆ’ ಎಂದು ಲೇವಡಿ ಮಾಡಿದ್ದಾರೆ.

ಅದಕ್ಕೆ ಪೂರಕವಾಗಿ ಅವರು, ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯವಾಗಿರುವ, ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುವ ನೇಹಾ ಸಿಂಗ್ ರಾಥೋಡ್ ಮತ್ತು ಡಾ. ಮೆಡುಸಾರ ಮೇಲೆ ಕೇಸು ದಾಖಲಿಸಿರುವುದನ್ನು ಉಲ್ಲೇಖಿಸಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಆಧಾರದ ಮೇರೆಗೆ; ಕವಯಿತ್ರಿ, ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಹಾಗೂ ಲಕ್ನೋ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಮಾದ್ರಿ ಕಟೋಕಿ ಯಾನೆ ಡಾ. ಮೆಡುಸಾ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ?: ಪಹಲ್ಗಾಮ್‌ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಏತನ್ಮಧ್ಯೆ, ಕೆಲವು ರಾಜಕೀಯ ನಾಯಕರು, ಅದರಲ್ಲೂ ವಿಶೇಷವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪಹಲ್ಗಾಮ್ ಉಗ್ರ ದಾಳಿಗೆ ಕೇಂದ್ರ ಗುಪ್ತಚರ ಸಂಸ್ಥೆಗಳ ಲೋಪ ಮತ್ತು ಭದ್ರತಾ ವೈಫಲ್ಯವೇ ಕಾರಣ ಎಂದು ಟೀಕಿಸಿದ್ದಾರೆ. ಮುಂದುವರೆದು, ಇದು ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಕಾರಣಕ್ಕೆ ದಾಳಿಯ ಹೊಣೆಯನ್ನು ಗೃಹ ಸಚಿವರಾದ ಅಮಿತ್ ಶಾ ಹೊತ್ತುಕೊಳ್ಳಬೇಕು ಎಂದಿದ್ದಾರೆ.

ಹಾಗೆಯೇ ಮಹಾರಾಷ್ಟ್ರದ ಶಿವಸೇನೆ ನಾಯಕ ಸಂಜಯ್ ರಾವತ್, ಜಮ್ಮು ಮತ್ತು ಕಾಶ್ಮೀರದ ಭದ್ರತೆಯ ಜವಾಬ್ದಾರಿಯನ್ನು ಸೇನೆ ಹೊತ್ತುಕೊಂಡಿದ್ದರೂ, ಕಾರ್ಯಾಚರಣೆಯಲ್ಲಿದ್ದರೂ ದಾಳಿ ನಡೆದಿದೆ. ಈ ಬಗ್ಗೆ ಮೊದಲು ಕ್ರಮ ಕೈಗೊಳ್ಳಬೇಕಾದ್ದು ಕೇಂದ್ರ ಗೃಹ ಸಚಿವಾಲಯ. ಭದ್ರತೆಯ ವಿಷಯದಲ್ಲಿ ಕೇಂದ್ರ ಸರ್ಕಾರ ಪದೇ ಪದೇ ತಪ್ಪೆಸಗುತ್ತಿದೆ. ಪ್ರಧಾನಮಂತ್ರಿಗಳು ಗೃಹ ಸಚಿವರ ರಾಜೀನಾಮೆ ಸ್ವೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದುವರೆದು, ದೇಶ ಉಗ್ರರ ದಾಳಿಯಂತಹ ಆತಂಕದ ಸ್ಥಿತಿಯಲ್ಲಿರುವಾಗಲೇ ಕೇಂದ್ರ ಸರ್ಕಾರ 60 ಸಾವಿರ ಕೋಟಿ ಕೊಟ್ಟು 27 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಿದೆ. ಪ್ರಧಾನಿ ಮೋದಿಯವರು ಭಾರತೀಯ ಸೇನೆಗೆ ಶಕ್ತಿ ತುಂಬಿ ಸಂಪೂರ್ಣ ಅಧಿಕಾರ ಕೊಟ್ಟಿದ್ದೇವೆ ಎನ್ನುತ್ತಾರೆ. ಆದರೂ ದಾಳಿಗಳು ನಡೆಯುತ್ತಲೇ ಇವೆ. ಇದರಲ್ಲಿ ರಾಜಕೀಯ ನಾಯಕರ ಪಾತ್ರವೇನು ಎನ್ನುವುದನ್ನು ದೇಶಕ್ಕೆ ತಿಳಿಸಬೇಕಾಗಿದೆ. ಹಾಗೆಯೇ ನಾಲ್ಕು ಯೂ ಟ್ಯೂಬ್ ಚಾನಲ್‌ಗಳ ಮೇಲೆ ನಿಷೇಧ ಹೇರುವುದು ಪ್ರತೀಕಾರವಾಗುವುದಿಲ್ಲ, ನಾಟಕ ಎನಿಸಿಕೊಳ್ಳುತ್ತದೆ ಎಂದು ಲೇವಡಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಆಗಸ್ಟ್ 5, 2019ರಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತು. ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರವು ಅನೇಕ ರೀತಿಯಲ್ಲಿ ದೋಷಪೂರಿತವಾಗಿತ್ತು. ಈ ಕ್ರಮವು ಇತಿಹಾಸದ ನಿರಾಕರಣೆಯಾಗಿತ್ತು ಮತ್ತು ಜಮ್ಮು- ಕಾಶ್ಮೀರದ ಜನರು ಭಾರತದೊಂದಿಗೆ ಹೊಂದಿದ್ದ ಸಾಮಾಜಿಕ ಒಪ್ಪಂದವನ್ನು ಉಲ್ಲಂಘಿಸಿತ್ತು.

ಆದರೆ ಕೇಂದ್ರ ಸರ್ಕಾರ, ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮತ್ತು ವಿಶಿಷ್ಟ ರಾಜಕೀಯ ಗುರುತನ್ನು ನೀಡಲಾಗಿದೆ; ಮುಖ್ಯವಾಹಿನಿಗೆ ತಂದಿರುವುದರಿಂದ ಅಲ್ಲಿ ಉಗ್ರರ ಸಮಸ್ಯೆ ಕಡಿಮೆಯಾಗಿದೆ ಎಂದು ವಾದಿಸಿತ್ತು. ಈಗ ಜಮ್ಮು – ಕಾಶ್ಮೀರದ ಹೊರಗಿನ ಜನರು ಮತ್ತು ಹೂಡಿಕೆದಾರರು ಕೇಂದ್ರಾಡಳಿತ ಪ್ರದೇಶದಲ್ಲಿ ಮನೆ, ಭೂಮಿಯನ್ನು ಖರೀದಿಸಬಹುದು. ಇದಲ್ಲದೆ ಕಾಶ್ಮೀರದಿಂದ ಪಲಾಯನ ಮಾಡಿದ ಅನೇಕ ಮಂದಿ ಕಾಶ್ಮೀರಿ ಪಂಡಿತರು, ತಮ್ಮ ನಾಡಿಗೆ ವಾಪಸಾಗಬಹುದು, ವ್ಯಾಪಾರ-ವ್ಯವಹಾರ ಆರಂಭಿಸಬಹುದು ಎಂದಿತ್ತು. ಮೋದಿಯವರ ಮಾತಿನಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿದ್ದರೂ, ಸೇನೆ, ಗುಪ್ತಚರ ಮತ್ತು ಪೊಲೀಸ್ ವ್ಯವಸ್ಥೆ ಕೇಂದ್ರದ ಸುಪರ್ದಿಯಲ್ಲಿತ್ತು. ಗವರ್ನರ್ ಮೂಲಕ ರಾಜ್ಯ ಸರ್ಕಾರವನ್ನು ನಿಯಂತ್ರಿಸುತ್ತಿತ್ತು. ಇಂತಹ ಇಕ್ಕಟ್ಟಿನ ಸಂದರ್ಭದಲ್ಲಿಯೇ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದಿದೆ. 26 ಅಮಾಯಕರ ಪ್ರಾಣಪಕ್ಷಿ ಹಾರಿಹೋಗಿದೆ.

ಇದನ್ನು ಓದಿದ್ದೀರಾ?: ಪಹಲ್ಗಾಮ್‌ ದಾಳಿ | ಸೇನೆಗೆ ಮಹಾಬಲ; ಭಾರತದ ಭವಿಷ್ಯ ಹೇಗಿರಬೇಕು?

ಪಹಲ್ಗಾಮ್ ದಾಳಿಯಾದ ನಂತರ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ದಾಳಿಯ ಹಿಂದಿನ ಸಂಚು ಮತ್ತು ಗುಪ್ತಚರ ಇಲಾಖೆಯ ವೈಫಲ್ಯ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತನಿಖೆ ನಡೆಸುತ್ತಿದೆ. ಉಗ್ರರ ದಾಳಿಗೆ ಗೃಹ ಸಚಿವರನ್ನು ನೇರವಾಗಿ ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಖಚಿತ ಮಾಹಿತಿಗಳಿಲ್ಲದಿದ್ದರೂ, ಗುಪ್ತಚರ ವೈಫಲ್ಯದ ಆರೋಪಗಳು ಗೃಹ ಸಚಿವಾಲಯದ ಕಾರ್ಯನಿರ್ವಹಣೆಯ ಮೇಲೆ ಪರೋಕ್ಷವಾಗಿ ಪ್ರಶ್ನೆಗಳನ್ನು ಎತ್ತುವಂತೆ ಮಾಡಿದೆ. ದಾಳಿಯ ನಂತರ ನಡೆದ ಸರ್ವಪಕ್ಷ ಸಭೆಯಲ್ಲಿ, ಸಿಕ್ಕ ಅವಕಾಶವನ್ನು ಬಳಸಿಕೊಂಡ ವಿರೋಧ ಪಕ್ಷಗಳು, ಸರ್ಕಾರದ ನಿಲುವಿಗೆ ಬೆಂಬಲ ವ್ಯಕ್ತಪಡಿಸುತ್ತಲೇ, ಭದ್ರತಾ ವೈಫಲ್ಯದ ಪ್ರಶ್ನೆಯನ್ನೂ ಎತ್ತಿವೆ. ಇಕ್ಕಟ್ಟಿಗೆ ಸಿಲುಕಿದ ಕೇಂದ್ರ ಸರ್ಕಾರ, ತನ್ನ ಕಡೆಯಿಂದಾದ ವೈಫಲ್ಯವನ್ನು ಒಪ್ಪಿಕೊಂಡಿದೆ. ಅದು ಮಾಧ್ಯಮಗಳಲ್ಲಿ ‘ಪುಟ್ಟ’ದಾಗಿ ವರದಿಯಾಗಿದೆ.

ವಿಪರ್ಯಾಸಕರ ಸಂಗತಿ ಎಂದರೆ, ಮೋದಿಯವರ ಕೃಪಾಕಟಾಕ್ಷಕ್ಕೆ ಒಳಗಾಗಿರುವ, ದೇಶದ ಸುದ್ದಿ ಮಾಧ್ಯಮಗಳು ಪಹಲ್ಗಾಮ್ ಉಗ್ರ ದಾಳಿಯ ಹೊಣೆಯನ್ನು, ಭದ್ರತಾ ವೈಫಲ್ಯವನ್ನು ಮೋದಿ ಮತ್ತು ಅಮಿತ್ ಶಾ ತಲೆಗೆ ಕಟ್ಟಲು ತಯಾರಿಲ್ಲ. ಬದಲಿಗೆ ಪ್ರಶ್ನೆ ಮಾಡುವವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ, ಮೊಕದ್ದಮೆ ಹೂಡಲಾಗುತ್ತಿದೆ, ಬಾಯಿ ಮುಚ್ಚಿಸಲಾಗುತ್ತಿದೆ.

ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ಮಾಡಿ ಇವತ್ತಿಗೆ ಹತ್ತು ದಿನಗಳಾದವು. ಹತ್ತು ದಿನಗಳಿಂದ ‘ಹುಡುಕಿ ಹುಡುಕಿ ಬೇಟೆ’ಯಾಡುತ್ತಿರುವುದು ಯಾರನ್ನು?

Basavaraju Megalkeri
+ posts

ಲೇಖಕ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಬಸವರಾಜು ಮೇಗಲಕೇರಿ
ಬಸವರಾಜು ಮೇಗಲಕೇರಿ
ಲೇಖಕ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...