ಚುನಾವಣೆ 2023 | ಕಾಂಗ್ರೆಸ್‌ನ ಎರಡನೇ ಪಟ್ಟಿ ಬಿಡುಗಡೆ: ಘೋಷಣೆಯಾಗದ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರು

Date:

  • ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ
  • ಗುಬ್ಬಿಯಿಂದ ಶ್ರೀನಿವಾಸ್, ಗುರುಮಿಠಕಲ್ ನಿಂದ ಬಾಬುರಾವ್‌ಗೆ ಟಿಕೆಟ್

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಮೊದಲು ಪಕ್ಷ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಇದೀಗ 42 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. 

ಧಾರವಾಡ ವಿಧಾನಸಭಾ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಅವರನ್ನು ಅಖಾಡಕ್ಕಿಳಿಸಿದರೆ, ಕಲಘಟಗಿಯಿಂದ ಸಂತೋಷ್ ಲಾಡ್‌, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಗುಬ್ಬಿ ಕ್ಷೇತ್ರದಿಂದ ಎಸ್‌ ಆರ್  ಶ್ರೀನಿವಾಸ್‌, ಕಡೂರ್‌ನಿಂದ ಆನಂದ, ನಿಪ್ಪಾಣಿ ಕಾಕಾ ಸಾಹೇಬ್ ಪಾಟೀಲ್‌, ಗೋಕಾಕ್‌ನಿಂದ ಮಹಾಂತೇಶ್ ಕಡಾಡಿ, ಬೀಳಗಿಯಿಂದ ಜೆ ಟಿ ಪಾಟೀಲ್‌, ಮುಧೋಳ್‌ದಿಂದ ರಾಮಪ್ಪ ತಿಮ್ಮಾಪುರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಬಾಬುರಾವ್ ಚಿಂಚನಸೂರು ಅವರಿಗೆ ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಮಡಿಕೇರಿಯಲ್ಲಿ ಎ ಮಂಜು ಪುತ್ರ ಮಂಥರ್ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಹೊಳಲ್ಕೆರೆ ಮೀಸಲು ಕ್ಷೇತ್ರದಿಂದ ಎಚ್‌ ಆಂಜನೇಯ ಅವರಿಗೆ ಟಿಕೆಟ್ ನೀಡಲಾಗಿದೆ.

ಪುಲಿಕೇಶಿ ನಗರ ಮತ್ತು ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢವಾಗಿ ಉಳಿದಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಅಧಿಕೃತ ಬೆಂಬಲ ಘೋಷಿಸಿದೆ.

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ವೈಎಸ್‌ವಿ ದತ್ತಾ ಅವರಿಗೆ ಟಿಕೆಟ್ ನಿರಾಕರಿಸಿ ಆನಂದ ಅವರಿಗೆ ಮಣೆ ಹಾಕಲಾಗಿದೆ. ದತ್ತಾ ಮತ್ತು ಆನಂದ ಅವರ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಬಾದಾಮಿ ವಿಧಾನಸಭಾ ಕ್ಷೇತ್ರ ಟಿಕೆಟ್ ಘೊಷಣೆಯಾಗಿದೆ. ಭೀಮಾಸೇನ್‌ ಬಿ ಚಿಮ್ಮಣಕಟ್ಟಿ ಅವರಿಗೆ ಬಾದಾಮಿ ಟಿಕೆಟ್‌ ನೀಡಿದರೆ, ಕಲಬುರಗಿ ದಕ್ಷಿಣ ಕ್ಷೇತ್ರದಿಂದ ಅಲ್ಲಮಪ್ರಭು ಪಾಟೀಲ್‌ ಅವರಿಗೆ ಕಾಂಗ್ರೆಸ್‌ನಿಂದ ಅಖಾಡಕ್ಕಿಳಿದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಇಲ್ಲಿದೆ…WhatsApp Image 2023 04 06 at 11.01.26 AM 1WhatsApp Image 2023 04 06 at 11.01.26 AM

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...