ಚುನಾವಣಾ ಬಾಂಡ್‌ | ಬಿಜೆಪಿಗೆ 6 ಸಾವಿರ ಕೋಟಿ ದೇಣಿಗೆ, ತನಿಖೆಯಾಗಲಿ ದೇಶಕ್ಕೆ ಸತ್ಯ ತಿಳಿಯಲಿ: ಮಲ್ಲಿಕಾರ್ಜುನ ಖರ್ಗೆ

Date:

ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಚುನಾವಣಾ ಬಾಂಡ್‌ ವಿವರ ಬಹಿರಂಗವಾಗಿದೆ. ಭಾರತೀಯ ಜನತಾ ಪಾರ್ಟಿಗೆ ಸುಮಾರು ಆರು ಸಾವಿರ ಕೋಟಿ ರೂ. ದೇಣಿಗೆ ಸಂದಾಯವಾಗಿದೆ. ಇದರಲ್ಲಿ ದೇಣಿಗೆದಾರರು ಇಡಿ ಪ್ರಕರಣದಲ್ಲಿ ಸಿಲುಕಿದವರೇ ಹೆಚ್ಚಿದ್ದಾರೆ. ಅಂತವರನ್ನು ಹೆದರಿಸಿ ಮೋದಿ ಸರ್ಕಾರ ಹಣ ಪಡೆದಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ಸತ್ಯ ಹರಿಶ್ಚಂದ್ರ ತರ ಮಾತನಾಡುತ್ತಿದ್ದರು. ‘ನಾ ಖಾವುಂಗಾ, ನಾ ಖಾನೆದೂಂಗಾ’ ಎನ್ನುತ್ತಿದ್ದ ಮೋದಿ ಈ ಹಣದ ಬಗ್ಗೆ ದೇಶಕ್ಕೆ ಉತ್ತರಿಸಬೇಕು” ಎಂದರು.

“ಸದ್ಯದ ಮಾಹಿತಿ ಪ್ರಕಾರ ಬಿಜೆಪಿಗೆ ಶೇ.50ರಷ್ಟು ದೇಣಿಗೆ ಸಂದಾಯ ಆಗಿದೆ. ಕಾಂಗ್ರೆ‌ಸ್‌ಗೆ ಶೇ.11 ರಷ್ಟು ಚುನಾವಣೆ ಬಾಂಡ್‌ ಮೂಲಕ ಹಣ ಸಂದಾಯವಾಗಿದೆ. ಇತ್ತೀಚೆಗೆ ನಮ್ಮ ಪಕ್ಷದ ಅಕೌಂಟ್‌ಗಳನ್ನು ಸೀಸ್‌ ಮಾಡಲಾಗಿದೆ. ಹೀಗಾದ್ರೆ ನಾವು ಚುನಾವಣೆಗೆ ಹೋಗುವುದು ಹೇಗೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

“6 ಸಾವಿರ ಕೋಟಿ ಬಿಜೆಪಿ ಮಡಿಲು ಸೇರಿದೆ. ವಿರೋಧ ಪಕ್ಷಗಳ ಬ್ಯಾಂಕ್‌ ಅಕೌಂಟ್‌ ಸೀಸ್‌ ಮಾಡಿದ್ರೆ ನಾವು ಹೇಗೆ ಚುನಾವಣಾ ಖರ್ಚುಗಳನ್ನು ಮಾಡಬೇಕು? ಮೋದಿ ಉದ್ದೇಶ ಸ್ಪಷ್ಟವಾಗಿದೆ, ವಿರೋಧ ಪಕ್ಷಳಿಗೆ ಹಣ ಸಿಗಬಾರದು ಎಂಬುದು. ಹೀಗಾಗಿಯೇ ನಮ್ಮ ಅಕೌಂಟ್‌ಗಳನ್ನು ಬ್ಲಾಕ್‌ ಮಾಡಲಾಗಿದೆ. ಈ ಬಗ್ಗೆಯೂ ತನಿಖೆ ನಡೆಯಬೇಕು” ಎಂದರು.

“ಕಾಂಗ್ರೆಸ್‌ ಪಕ್ಷ ಚುನಾವಣೆಯನ್ನೇ ಎದುರಿಸಬಾರದು ಎಂಬ ಷಡ್ಯಂತ್ರವನ್ನು ಬಿಜೆಪಿ ಹೂಡಿದೆ. ಈಗಲಾದರೂ ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗವಾಗಿದೆ. ದೇಶದ ಮುಂದೆ ಇದರ ಸತ್ಯಾಸತ್ಯತೆ ತಿಳಿಯಬೇಕು. ಈ ಬಗ್ಗೆ ಪಾರದರ್ಶಕ ತನಿಖೆಯಾಗಬೇಕು” ಎಂದು ಖರ್ಗೆ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...