ಚುನಾವಣಾ ಬಾಂಡ್‌ | ನಿರ್ಮಲಾ ಸೀತಾರಾಮನ್‌​ ವಿರುದ್ಧದ ಎಫ್‌ಐಆರ್ ರದ್ದು

Date:

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಿಸಲಾಗಿದ್ದ ಎಫ್‌ಐಆರ್‌ಅನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಜಾರಿ ನಿರ್ದೇಶನಾಲಯದಿಂದ (ಇ.ಡಿ) ದಾಳಿ ಮಾಡಿಸುವುದಾಗಿ ಬೆದರಿಕೆಯೊಡ್ಡಿ ಪ್ರತಿಷ್ಠಿತ ಕಂಪೆನಿಗಳಿಂದ ಸುಮಾರು 8,000 ಕೋಟಿ ರೂ.ಗಳನ್ನು ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್‌ ಸೂಚನೆಯಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾರ್ಪೊರೇಟ್‌ ಕಂಪೆನಿಗಳ ಮೇಲೆ ದಾಳಿ ನಡೆಸಿದ್ದರು. ಅಲ್ಲದೆ, ಹಲವರನ್ನು ಬಂಧಿಸಿದ್ದರು. ಇಂತಹ ದಾಳಿಗಳಿಗೆ ಹೆದರಿ ಕೆಲ ಕಂಪೆನಿಗಳ ಸಿಇಒಗಳು, ವ್ಯವಸ್ಥಾಪಕ ನಿರ್ದೇಶಕರುಗಳು ನೂರಾರು ಕೋಟಿ ರೂ.ಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆದರ್ಶ್ ಅಯ್ಯರ್‌ ಅವರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಕೋರ್ಟ್‌ ಸೂಚನೆ ಮೇರೆಗೆ ಬೆಂಗಳೂರಿನ ತಿಲಕ್‌ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್‌ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ವಿರುದ್ದ ದಾಖಲಾಗಿರುವ ಎಫ್‌ಐಆರ್‌ಅನ್ನು ರದ್ದುಪಡಿಸುವಂತೆ ಕೋರಿ ನಿರ್ಮಲಾ ಸೀತಾರಾಮನ್ ಮತ್ತು ಕಟೀಲ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ನಾಗಮಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಎಫ್‌ಐಆರ್‌ಅನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...