ಚುನಾವಣಾ ಬಾಂಡ್‌ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ ಬಿ ಪಾಟೀಲ್

Date:

ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಟೀಕಿಸಿದರು.

ಬೆಂಗಳೂರಿನಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿಯವರು, “ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ” ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ ಎಂದರು.

“ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ ಬಿಜೆಪಿ ಹೆಸರಲ್ಲಿ ಚುನಾವಣಾ ಬಾಂಡ್ ತೆಗೆದುಕೊಂಡಿರುವುದು ಬಹಿರಂಗಗೊಂಡಿದೆ. ಇದರಿಂದಾಗಿ, ಭ್ರಷ್ಟಾಚಾರ, ನೈತಿಕತೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದ ಮೋದಿ ಅವರ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇ.ಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ” ಎಂದು ಸಮರ್ಥಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

“ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ” ಎಂದು ಒತ್ತಿ ಹೇಳಿದರು.

“ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ” ಎಂದು ಆರೋಪಿಸಿದರು.

“ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. ಹೀಗಾಗಿಯೇ, ರಾಜ್ಯದಲ್ಲಿ ಬರ ಇದ್ದಾಗ ಅವರು ಈ ಕಡೆ ಸುಳಿಯಲಿಲ್ಲ. ಈಗ, ಚುನಾವಣೆ ಎಂದ ತಕ್ಷಣ ಎರಡು ಸಲ ಇಲ್ಲಿಗೆ ಭೇಟಿಕೊಟ್ಟಿದ್ದಾರೆ” ಎಂದು ಕುಟುಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...