ಚುನಾವಣಾ ಬಾಂಡ್ | ಸಿಲ್ಕ್ಯಾರಾ ಸುರಂಗ ಕುಸಿತ; ಗುತ್ತಿಗೆ ಪಡೆದಿದ್ದ ಕಂಪನಿಯಿಂದ ಬಿಜೆಪಿಗೆ ₹55 ಕೋಟಿ

Date:

ಉತ್ತರಾಖಂಡ್‌ನಲ್ಲಿ ನಿರ್ಮಣ ಹಂತದಲ್ಲಿದ್ದ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದ ಒಂದು ಭಾಗ ಕಳೆದ ವರ್ಷ ಕುಸಿದು ಬಿದ್ದಿತ್ತು. ಆ ಸುರಂಗ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಹೈದರಾಬಾದ್ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ (ಎನ್‌ಇಸಿ) ಎಂಬುದು ಇದೀಗ ಬಹಿರಂಗವಾಗಿದೆ. ಚುನಾವಣಾ ಆಯೋಗ ಪ್ರಕಟಿಸಿರುವ ಹೊಸ ಮಾಹಿತಿಯಲ್ಲಿ ಕಂಪನಿ ಮತ್ತು ಬಿಜೆಪಿ ನಡುವಿನ ಸಂಬಂಧ ಬಯಲಾಗಿದೆ.

2023ರ ನವೆಂಬರ್ 12ರಂದು ನಿರ್ಮಾಣ ಹಂತದಲ್ಲಿದ್ದ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದ ಒಂದು ಭಾಗವು ಕುಸಿದು ಬಿದ್ದಿತ್ತು. ಸುರಂಗದ ಅವಶೇಷಗಳಡಿ ಒಟ್ಟು 41 ಕಾರ್ಮಿಕರು ಸಿಕ್ಕಿಬಿದ್ದರು. ಅವರನ್ನು ನವೆಂಬರ್ 28 ರಂದು ರಕ್ಷಿಸಲಾಗಿತ್ತು.

ಸಿಲ್ಕ್ಯಾರಾ-ಬಾರ್ಕೋಟ್ ಸುರಂಗ ಯೋಜನೆಯು 2018ರಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಿಂದ ಅನುಮೋದನೆ ಪಡೆದಿತ್ತು. 2022ರ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ, ಕಾಮಗಾರಿಯ ಅವಧಿಯನ್ನು ವಿಸ್ತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾಮಗಾರಿಯ ಗುತ್ತಿಗೆ ಪಡೆದ ಬಳಿಕ, ನವಯುಗ ಕಂಪನಿಯು 2019ರ ಏಪ್ರಿಲ್ 19 ಮತ್ತು 2022ರ ಅಕ್ಟೋಬರ್ 10ರ ನಡುವೆ ತಲಾ 1 ಕೋಟಿ ರೂ. ಮೌಲ್ಯದ 55 ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಆ ಎಲ್ಲ ಬಾಂಡ್‌ಗಳನ್ನು ಬಿಜೆಪಿಗೆ ನೀಡಿದೆ.

ನವಯುಗ ಗ್ರೂಪ್‌ನಲ್ಲಿ ನವಯುಗ ಇಂಜಿನಿಯರಿಂಗ್ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್‌ ಕಂಪನಿಯು ಪ್ರಮುಖ ಕಂಪನಿಯಾಗಿದೆ. ಈ ಕಂಪನಿಯು ಬ್ರಹ್ಮಪುತ್ರ ನದಿಯ ಮೇಲೆ ದೇಶದ ಅತಿ ಉದ್ದದ (ಒಟ್ಟು 9.15 ಕಿ.ಮೀ.) ನದಿ ಸೇತುವೆಯಾದ ಧೋಲಾ-ಸಾಡಿಯಾ ಸೇತುವೆಯನ್ನು ನಿರ್ಮಿಸಿದೆ ಎಂದು ತನ್ನ ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದೆ.

ಆಂಧ್ರಪ್ರದೇಶ ಸರ್ಕಾರವು ಪೋಲವರಂ ಯೋಜನೆಯನ್ನು ನಿರ್ಮಿಸುವ ಜವಾಬ್ದಾರಿಯನ್ನು ತನಗೆ ನೀಡಿದೆ ಎಂದೂ ಕಂಪನಿ ಹೇಳಿಕೊಂಡಿದೆ.

ಕಂಪನಿಯ ವೆಬ್‌ಸೈಟ್‌ನ ಪ್ರಕಾರ, ಗಂಗಾನದಿಯ ಮೇಲಿನ ಸೇತುವೆಗಳು, ಕ್ವಾಜಿಗುಂಡ್‌ನಿಂದ ಬನಿಹಾಲ್ ಹೆದ್ದಾರಿ ಯೋಜನೆ ಹಾಗೂ ಪಿರ್ ಪಂಜಾಲ್ ಪಾಸ್ ಯೋಜನೆ ಸೇರಿದಂತೆ ಅನೇಕ ಐಕಾನಿಕ್ ಯೋಜನೆಗಳನ್ನು ಪಡೆದಿರುವುದಾಗಿ ಹೇಳಿಕೊಂಡಿದೆ.

ಸಿಲ್ಕ್ಯಾರಾ-ಬಾರ್ಕೋಟ್ ಸುರಂಗವು ಏಕ-ಟ್ಯೂಬ್ ಸುರಂಗವಾಗಿದೆ. 900 ಕಿ.ಮೀ. ಉದ್ದದ ಚಾರ್ ಧಾಮ್ ಯಾತ್ರಾ ಆಲ್ ವೆದರ್ ರಸ್ತೆಯ ಭಾಗವಾಗಿರುವ 45 ಕಿ.ಮೀ ಉದ್ದದ ಈ ಸುರಂಗವು ನಾಲ್ಕು ಯಾತ್ರಾ ಸ್ಥಳಗಳಿಗೆ ಸಂಪರ್ಕ ಸಾಧಿಸುವ ಗುರಿಯನ್ನು ಹೊಂದಿದೆ.

ಹಲವಾರು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ‘ಕ್ವಿಡ್ ಪ್ರೊ ಕ್ವೊ’ (ಕೊಡು-ತೆಗೆದುಕೊ) ಉದ್ದೇಶಕ್ಕೆ ಬಳಸಿಕೊಂಡಿವೆ ಎಂಬುದು ಈಗಲಾಗಲೇ ಬಹಿರಂಗವಾಗಿದೆ. ಹೆಚ್ಚಿನ ಮೊತ್ತದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, ಅವುಗಳನ್ನು ಆಡಳಿತರೂಢ ಬಿಜೆಪಿಗೆ ನೀಡಿ, ತಮಗೆ ಬೇಕಾದ ಯೋಜನೆಗಳ ಗುತ್ತಿಗೆಯನ್ನು ಪಡೆದುಕೊಂಡಿವೆ ಎಂಬುದು ಇತ್ತೀಚಿನ ಚುನಾವಣಾ ಬಾಂಡ್‌ ಮಾಹಿತಿಯನ್ನು ವಿಶ್ಲೇಷಿಸಿದಾಗ ಬಹಿರಂಗವಾಗಿದೆ. ಅಂತಹ ಕಂಪನಿಗಳಲ್ಲಿ ಈ ನವಯುಗ ಕಂಪನಿಯೂ ಒಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...