ಚುನಾವಣಾ ಬಾಂಡ್ | ಲಕ್ಷ ಕೋಟಿ ಮೌಲ್ಯದ ಗುತ್ತಿಗೆ ಪಡೆದಿದ್ದ ಕಂಪನಿ ಗರಿಷ್ಠ ಬಾಂಡ್‌ಗಳ ಖರೀದಿದಾರ

Date:

ಚುನಾವಣಾ ಬಾಂಡ್‌ ಕುರಿತು ಎಸ್‌ಬಿಐ ನೀಡಿದ್ದ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಅತೀ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳ ಪಟ್ಟಿಯಲ್ಲಿ ‘ಮೇಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್’ ಎರಡನೇ ಸ್ಥಾನದಲ್ಲಿದೆ. ಈ ಕಂಪನಿ 966 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ.

ವಿಶೇಷ ಅಂದ್ರೆ, ಈ ಕಂಪನಿ ಸರ್ಕಾರಗಳಿಂದ ಲಕ್ಷ ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ಗುತ್ತಿಗೆ ಪಡೆದುಕೊಂಡಿದೆ. ಹೈದರಾಬಾದ್ ಮೂಲದ ಈ ಕಂಪನಿ ಹಲವು ಸರ್ಕಾರಿ ಯೋಜನೆಗಳ ಗುತ್ತಿಗೆ ಪಡೆದಿದೆ. ಗಮನಾರ್ಹ ಸಂಗತಿ ಅಂದ್ರೆ, 2023ರ ಏಪ್ರಿಲ್‌ನಲ್ಲಿ ಕಂಪನಿಯು 140 ಕೋಟಿ ರೂ. ದೇಣಿಗೆ ನೀಡಿದೆ. ಇದಾಗಿ ಒಂದು ತಿಂಗಳ ಬಳಿಕ ಕಂಪನಿಯು ಕೇಂದ್ರ ಸರ್ಕಾರದಿಂದ 14,400 ಕೋಟಿ ರೂ. ವೆಚ್ಚದ ಥಾಣೆ-ಬೊರಿವಲಿ ಅವಳಿ ಸುರಂಗ ಯೋಜನೆಯ ಗುತ್ತಿಗೆ ಪಡೆದಿದೆ.

ಅಂತೆಯೇ, 1.15 ಲಕ್ಷ ಕೋಟಿ ರೂ. ಮೌಲ್ಯದ ತೆಲಂಗಾಣ ಕಾಳೇಶ್ವರಂ ಏತ ನೀರಾವರಿ ಯೋಜನೆ ಸೇರಿದಂತೆ ನಾನಾ ಯೋಜನೆಗಳ ಕಾಮಗಾರಿಗಳನ್ನು ಗುತ್ತಿಗೆ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದಹಾಗೆ, ಮೇಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿಯು ಎಸ್‌ಬಿಐನಲ್ಲಿ ತಲಾ ಒಂದು ಕೋಟಿ ರೂ. ಮೌಲ್ಯದ 966 ಬಾಂಡ್‍ಗಳನ್ನು ಖರೀದಿಸಿ, ರಾಜಕೀಯ ಪಕ್ಷಗಳಿಗೆ ನೀಡಿದೆ. ಆದರೆ, ಎಸ್‌ಬಿಐ ಸರಿಯಾದ ಮಾಹಿತಿಯನ್ನು ಒದಗಿಸದ ಕಾರಣ, ಯಾವ ಪಕ್ಷಕ್ಕೆ ಎಷ್ಟು ಬಾಂಡ್‌ಗಳನ್ನು ನೀಡಿದೆ ಎಂಬುದು ಗೊತ್ತಾಗಿಲ್ಲ.

ಸದ್ಯ, ಸರಿಯಾದ ಮಾಹಿತಿ ಒದಗಿಸದ ಎಸ್‌ಬಿಐಅನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದ್ದು, ಯಾವ ಕಂಪನಿ, ಯಾವ ಪಕ್ಷಕ್ಕೆ ಬಾಂಡ್‌ ನೀಡಿದೆ ಎಂಬ ಮಾಹಿತಿಯನ್ನು ಮಾರ್ಚ್‌ 16ರ ಶನಿವಾರ ಒದಗಿಸಬೇಕು ಎಂದು ತಾಕೀತು ಮಾಡಿದೆ. ಹೀಗಾಗಿ, ಶನಿವಾರ ಯಾವೆಲ್ಲ ಕಂಪನಿಗಳು ಯಾವ ಪಕ್ಷಗಳಿಗೆ ದೇಣಿಗೆ ನೀಡಿವೆ ಎಂಬುದು ಗೊತ್ತಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...