344 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

Date:

ಸಕ್ರಿಯವಾಗಿಲ್ಲದ ರಾಜಕೀಯ ಪಕ್ಷಗಳಿಗೆ ಭಾರತದ ಚುನಾವಣಾ ಆಯೋಗವು (ECI) ಇತ್ತೀಚೆಗೆ ನೋಟಿಸ್‌ ನೀಡಿತ್ತು. ಇದೀಗ, ಸಕ್ರಿಯವಾಗಿಲ್ಲದ 344 ರಾಜಕೀಯ ಪಕ್ಷಗಳನ್ನು ನೋಂದಾಯಿತ ಪಟ್ಟಿಯಿಂದ ಕೈಬಿಟ್ಟಿರುವಾಗಿ ಮಾಹಿತಿ ನೀಡಿದೆ.

2019ರಿಂದ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸದೆ, ಚುನಾವಣಾ ಪ್ರಕ್ರಿಯೆಗಳಿಂದ ಹೊರಗುಳಿದಿರುವ ಪಕ್ಷಗಳನ್ನು ನೋಂದಾಯಿತ ಗುರುತಿಸಿಕೊಳ್ಳದ ರಾಜಕೀಯ ಪಕ್ಷಗಳು (Registered Unrecognized Political Parties – RUPP) ಎಂದು ಆಯೋಗವು ಹೆಸರಿಸಿದೆ. ಇದರ ಅಡಿಯಲ್ಲಿ ದೇಶಾದ್ಯಂತ 345 ಪಕ್ಷಗಳನ್ನು ಆಯೋಗವು ಗುರುತಿಸಿದ್ದು, ಅವುಗಳಲ್ಲಿ 344 ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಈ ಪಟ್ಟಿಯನ್ನು ಚುನಾವಣಾ ಆಯೋಗವು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿರದ ಪಕ್ಷಗಳ ರದ್ದತಿಯ ತನ್ನ ಕ್ರಮವು ಚುನಾವಣಾ ವ್ಯವಸ್ಥೆಯ ಶುದ್ಧೀಕರಣ, ಆದಾಯ ತೆರಿಗೆ ವಿನಾಯಿತಿಯ ದುರ್ಬಳಕೆ ತಡೆಗಟ್ಟುವಿಕೆ ಹಾಗೂ ಚುನಾವಣೆಯ ಪಾರದರ್ಶಕತೆಯನ್ನು ಖಾತ್ರಿಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಆಯೋಗ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮತಗಳ್ಳತನ | ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಕೈಬಿಡಲಾದ ಈ ಪಕ್ಷಗಳು ಕಳೆದ ಆರು ವರ್ಷಗಳಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಭೌತಿಕವಾಗಿ ಎಲ್ಲಿಯೂ ಕಚೇರಿಗಳನ್ನು ಕೂಡ ಹೊಂದಿಲ್ಲ ಎಂದು ಆಯೋಗ ಹೇಳಿದೆ. 334 ಪಕ್ಷಗಳ ಪೈಕಿ ಕರ್ನಾಟಕದ 12 ಪಕ್ಷಗಳೂ ಇವೆ. ದೇಶಾದ್ಯಂತ ಒಟ್ಟು 2,520 ರಾಜಕೀಯ ಪಕ್ಷಗಳಿವೆ. ಅವುಗಳಲ್ಲಿ 6 ರಾಷ್ಟ್ರೀಯ ಪಕ್ಷ ಎಂಬ ಸ್ಥಾನಮಾನ ಪಡೆದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...