ತೇಜಸ್ವಿ ಯಾದವ್‌ರ ಎರಡನೇ ಮತದಾರರ ಗುರುತಿನ ಚೀಟಿ ನಕಲಿ: ಸ್ಪಷ್ಟೀಕರಣ ಕೋರಿದ ಚುನಾವಣಾ ಆಯೋಗ

Date:

ಬಿಹಾರ ವಿಧಾನಸಭೆಯ ವಿಪಕ್ಷ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ಮತದಾರರ ಗುರುತಿನ ಚೀಟಿ ಸಂಖ್ಯೆ ನಕಲಿ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿದೆ. ಹಾಗೆಯೇ 2025ರ ಆಗಸ್ಟ್ 16ರ ಸಂಜೆ ಐದು ಗಂಟೆಯೊಳಗೆ ಪರಿಶೀಲನೆಗಾಗಿ ತಮ್ಮ ಮೂಲ ಮತದಾರರ ಫೋಟೋ ಗುರುತಿನ ಚೀಟಿ (EPIC) ಯನ್ನು ಸಲ್ಲಿಸುವಂತೆ ಇಸಿಐ ತಿಳಿಸಿದೆ.

ಈ ಸಂಬಂಧ ಪಟನಾ ಸದರ್‌ನ ಉಪ-ವಿಭಾಗಾಧಿಕಾರಿ (ಎಸ್‌ಡಿಒ) ಆಗಿರುವ ದಿಘಾ ವಿಧಾನಸಭಾ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ತೇಜಸ್ವಿಗೆ ನೋಟಿಸ್ ನೀಡಿದ್ದಾರೆ. ತೇಜಸ್ವಿ ಯಾದವ್ ಪತ್ರಿಕಾಗೋಷ್ಠಿಯಲ್ಲಿ ತೋರಿಸಿದ EPIC ಸಂಖ್ಯೆ – RAB2916120 – ಚುನಾವಣಾ ಆಯೋಗದ ಡೇಟಾಬೇಸ್‌ ಜೊತೆ ಹೊಂದಿಕೆಯಾಗದ ಕಾರಣ ಆ ಮತದಾರರ ಗುರುತಿನ ಚೀಟಿ ನಕಲಿ, ಅನಧಿಕೃತ ಎಂದು ಇಆರ್‌ಒ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ತೇಜಸ್ವಿ ಯಾದವ್‌ಗೆ ಎರಡು ಮತದಾರರ ಗುರುತಿನ ಚೀಟಿ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಲಿ ಸರ್ಕಾರಿ ದಾಖಲೆಗಳನ್ನು ರಚಿಸುವುದು ಅಥವಾ ಬಳಸುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಹಾಗೆಯೇ ಈ ನಕಲಿ ಕಾರ್ಡ್‌ ಅನ್ನು ನಿಗದಿತ ದಿನದೊಳಗೆ ಇಆರ್‌ಒ ಕಚೇರಿಗೆ ಸಲ್ಲಿಸುವಂತೆ ತೇಜಸ್ವಿ ಅವರಿಗೆ ಹೇಳಲಾಗಿದೆ.

2015 ಮತ್ತು 2020ರಲ್ಲಿ ರಾಘೋಪುರ ವಿಧಾನಸಭಾ ಸ್ಥಾನಕ್ಕೆ ತೇಜಸ್ವಿ ಸಲ್ಲಿಸಿದ ನಾಮಪತ್ರಗಳಲ್ಲಿ ಅವರ EPIC ಸಂಖ್ಯೆ RAB0456228 ಎಂದು ದಾಖಲಾಗಿದೆ. ವಿಶೇಷ ತೀವ್ರ ಪರಿಷ್ಕರಣೆ ವೇಳೆಯೂ ಇದೇ ಸಂಖ್ಯೆ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಆದರೆ ಆಗಸ್ಟ್ 2ರ ಪತ್ರಿಕಾಗೋಷ್ಠಿಯಲ್ಲಿ (RAB2916120) ಅವರು ಪ್ರದರ್ಶಿಸಿದ EPIC ಸಂಖ್ಯೆ ಬೇರೆಯೇ ಆಗಿದೆ. ಇದು ನಕಲಿ ಕಾರ್ಡ್ ಎಂಬ ಅನುಮಾನವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಈ ಹಿಂದೆ, ಆಗಸ್ಟ್ 1ರಂದು ಬಿಡುಗಡೆಯಾದ ಹೊಸ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಾಣೆಯಾಗಿದೆ ಎಂದು ತೇಜಸ್ವಿ ಆರೋಪಿಸಿದ್ದಾರೆ. ಹಾಗೆಯೇ ತಮ್ಮ EPIC ಸಂಖ್ಯೆಯನ್ನು ಬದಲಾಯಿಸಲಾಗಿದೆ ಎಂದೂ ದೂರಿದ್ದಾರೆ. ಬೇರೆ ಮತದಾರರ ಗುರುತಿನ ಚೀಟಿ ನೀಡಿದ ಕಾರಣಕ್ಕೆ ಚುನಾವಣಾ ಆಯೋಗವನ್ನು ದೂಷಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...