ಚುನಾವಣಾ ಆಯೋಗ ಪ್ರಧಾನಿ ಮೋದಿಯವರ ನಾಯಿ: ಕಾಂಗ್ರೆಸ್‌ ಎಂಎಲ್‌ಸಿ

Date:

ಭಾರತೀಯ ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿಯವರ ನಾಯಿಯಂತೆ ವರ್ತಿಸುತ್ತಿದೆ. ಪ್ರಜಾಪ್ರಭತ್ವವನ್ನು ಬಲಗೊಳಿಸಲು ಸ್ಥಾಪಿಸಲಾಗಿರುವ ಎಲ್ಲ ಸಾಂವಿಧಾನಿಕ ಸಂಸ್ಥೆಗಳು ಮೋದಿ ಅವರ ಸೂಚನೆಯಂತೆ ನಡೆದುಕೊಳ್ಳುತ್ತಿವೆ ಎಂದು ಮಹಾರಾಷ್ಟ್ರ ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ಭಾಯಿ ಜಗತಾಪ್ ಹೇಳಿದ್ದಾರೆ. ಅವರ ಹೇಳಿಕೆ ಮಹಾರಾಷ್ಟ್ರ ರಾಜಕೀಯದಲ್ಲಿ ವಾಗ್ಯುದ್ದಕ್ಕೆ ಎಡೆಮಾಡಿಟ್ಟಿದೆ.

“ಭಾರತೀಯ ಚುನಾವಣಾ ಆಯೋಗದ ಭಟ್ಟಂಗಿತನದಿಂದಾಗಿ ಭಾರತೀಯ ಪ್ರಜಾಸತ್ತೆ ಅವಮಾನಕ್ಕೀಡಾಗಿದೆ. ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಚುನಾವಣೆಗಳಲ್ಲಿ ಮತಯಂತ್ರಗಳ ಬದಲು ಬ್ಯಾಲೆಟ್‌ ಪೇಪರ್‌ ಬಳಕೆಯ ಬಗ್ಗೆ ಮಾತನಾಡಿದ್ದರು. ಈಗ ಅವರೇ ಇವಿಎಂಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ಜಗತಾಪ್ ಹೇಳಿದ್ದಾರೆ.

‘‘ಇವಿಎಮ್ ತಂತ್ರಜ್ಞಾನವನ್ನು ತಂದಿದ್ದು ಕಾಂಗ್ರೆಸ್. ಯಾಕೆಂದರೆ ಅವುಗಳನ್ನು ಫ್ರಾನ್ಸ್, ಅಮೆರಿಕದಲ್ಲಿ ಬಳಸಲಾಗುತ್ತಿತ್ತು. ಆದರೆ, 2009ರ ಬಳಿಕ ಅವುಗಳ ಬಳಕೆಯ ಬಗ್ಗೆ ಸಂಶಯಗಳು ಹುಟ್ಟಿಕೊಂಡಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗವನ್ನು ನಾಯಿ ಎಂದಿದ್ದಕ್ಕೆ, ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಜಗತಾಪ್ ಅವರು ಕ್ಷಮೆ ಕೇಳುವಂತೆ ಒತ್ತಾಯಿಸಿದೆ. ಆದರೆ, ಕ್ಷಮೆ ಕೇಳಲು ಜಗತಾಪ್ ನಿರಾಕರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...