ಮತ ಕಳವು: ಭಾನುವಾರ ಪತ್ರಿಕಾಗೋಷ್ಠಿ ನಡೆಸಲಿರುವ ಚುನಾವಣಾ ಆಯೋಗ

Date:

ಮತ ಕಳವು ಆರೋಪದ ಬಗ್ಗೆ ನಡುವೆ ಭಾರತೀಯ ಚುನಾವಣಾ ಆಯೋಗವು (ECI) ಆಗಸ್ಟ್ 17ರ ಭಾನುವಾರದಂದು(ಇಂದು) ಪತ್ರಿಕಾಗೋಷ್ಠಿ ನಡೆಸಲಿದೆ. “ಭಾರತೀಯ ಚುನಾವಣಾ ಆಯೋಗವು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ” ಎಂದು ಇಸಿಐ ತಿಳಿಸಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ಕೆಲವು ಕ್ಷೇತ್ರಗಳ ಸಾಕ್ಷಿ ಸಹಿತ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ ಬಳಿಕ ಚುನಾವಣಾ ಆಯೋಗ ನಡೆಸುತ್ತಿರುವ ಮೊದಲ ಪತ್ರಿಕಾಗೋಷ್ಠಿ ಇದಾಗಿದೆ. ಪತ್ರಿಕಾ ಮಾಹಿತಿ ಬ್ಯೂರೋ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಸ್ಟಿಲ್ ಅಥವಾ ಟಿವಿ ಕ್ಯಾಮೆರಾಮನ್‌ಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.

ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

SIR ಅನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ‘ಮತದಾರ ಅಧಿಕಾರ ಯಾತ್ರೆ’ ನಡೆಸಲಿದ್ದಾರೆ. ಇದಕ್ಕೂ ಮುನ್ನವೇ ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ.

ಆಗಸ್ಟ್ 1ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದರು. ಮತ ಕಳವು ನಡೆದಿದೆ, ಇದರ ಬಗ್ಗೆ ಪುರಾವೆಯೂ ಇದೆ ಎಂದು ಹೇಳಿದ್ದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರದಲ್ಲಿ ಮತ ಕಳವು ಬಗ್ಗೆ ಪುರಾವೆಯನ್ನೂ ಬಹಿರಂಗಪಡಿಸಿದ್ದರು.

ಹಾಗೆಯೇ ಬಿಹಾರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯೂ ಕೂಡಾ ಬಿಜೆಪಿಗೆ ಲಾಭ ನೀಡುವ ಉದ್ದೇಶವನ್ನು ಹೊಂದಿದೆ ಎಂದು ಆರೋಪಿಸಿದ್ದರು. ಈ ಎಲ್ಲಾ ಬೆಳವಣಿಗೆ ಬಳಿಕ ಮೊದಲ ಬಾರಿಗೆ ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...