ಈಡೇರದ ಆಸೆಗಳಿಗೆ ನಮ್ಮನ್ನು ದೂಷಿಸುವುದು ಸರಿಯಲ್ಲ; ಇವಿಎಂ ಕುರಿತ ಪ್ರಶ್ನೆಗೆ ಚುನಾವಣಾ ಆಯುಕ್ತರ ಉತ್ತರ

Date:

ದೇಶದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಬರಲಿದೆ.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಇವಿಎಂಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿದ್ದು, ಪ್ರಶ್ನೆಗೆ ಕವಿತೆಯ ಮೂಲಕ ರಾಜೀವ್ ಉತ್ತರಿಸಿದ್ದಾರೆ.

“ಇವಿಎಂಗಳನ್ನು ಕೆಲವು ಪಕ್ಷಗಳು ದೂಷಿಸುತ್ತವೆ. ಆದರೆ, ಚುನಾವಣಾ ಫಲಿತಾಂಶಗಳು ಅವರ ಪರವಾಗಿ ಬಂದಾಗ, ತಮ್ಮ ಆರೋಪಗಳನ್ನು ಹಿಂತೆಗೆದುಕೊಂಡು, ಅದೇ ಇವಿಎಂಗಳಿಗೆ ಅಂಟಿಕೊಳ್ಳುತ್ತಾರೆ. ಇವಿಎಂ 100 ಶೇ. ಸುರಕ್ಷಿತವಿದೆ” ಎಂದು ಹೇಳುವ ಮೂಲಕ ಇವಿಎಂಗಳನ್ನು ದೂಷಿಸುವವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವಿಎಂ ಬಗ್ಗೆ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಬರಲಿದೆ ಎಂಬುದು ನನಗೆ ಚೆನ್ನಾಗಿ ಅರಿವಿತ್ತು. ಹಾಗಾಗಿ, ನಿನ್ನೆ ರಾತ್ರಿ ನಾನೇ ಖುದ್ದಾಗಿ ಕವಿತೆಯೊಂದನ್ನು ಬರೆದಿದ್ದಾಗಿ ಹೇಳುತ್ತಾ, ಹಿಂದಿಯಲ್ಲಿ ಕವಿತೆ ಓದಿದ್ದು, ಇದು ಇವಿಎಂ ಹೀಗೆ ಹೇಳುತ್ತಿದೆ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯು ಏಪ್ರಿಲ್ 19ರಿಂದ ಜೂನ್‌ 1ರವರೆಗೆ 7 ಹಂತಗಳಲ್ಲಿ ನಡೆಯಲಿದೆ, ಕರ್ನಾಟಕದಲ್ಲಿ 2 ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 26ರಂದು ಮೊದಲ ಹಂತದ ಮತದಾನ, ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...