ಉಪಸಮರ ಫಲಿತಾಂಶ | ರಾಜ್ಯದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆ

Date:

ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು (ಶನಿವಾರ) ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಎಂಟು ಸುತ್ತಿನ ಮತ ಎಣಿಕೆಯೂ ಮುಗಿದಿದೆ. ಈವರೆಗಿನ ಮತ ಎಣಿಕೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮೂರೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದೆ.

ಉಪಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಪ್ರತಿನಿಧಿಸಿದ್ದ ಕ್ಷೇತ್ರಗಳು. ಆ ಎರಡೂ ಕ್ಷೇತ್ರಗಳಲ್ಲಿಯೂ ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಈ ಇಬ್ಬರಿಗೂ ಕ್ಷೇತ್ರವನ್ನು ಗೆದ್ದು ಉಳಿಸಿಕೊಳ್ಳುವುದು ಪ್ರತಿಷ್ಠೆಯಾಗಿದೆ. ಆದರೆ, ಸದ್ಯದ ಮತ ಎಣಿಕೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಇಬ್ಬರ ಮಕ್ಕಳೂ ಹಿನ್ನಡೆ ಅನುಭವಿಸಿದ್ದಾರೆ. ಇನ್ನು, ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 18,440 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಗ್ಗಾಂವಿಯಲ್ಲಿ  ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಯಾಸಿನ್ ಮಹಮ್ಮದ್ ಪಠಾಣ್ ನಡುವೆ ಭಾರೀ ಪೈಪೋಟಿ ಇದ್ದು, ಪಠಾಣ್ ಅವರು ಮುನ್ನಡೆಯಲ್ಲಿದ್ದಾರೆ.

ಇನ್ನು, ಸಂಡೂರಿನಲ್ಲಿ ಕಾಂಗ್ರೆಸ್‌ ಸಂಸದ ಇ ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ಹಿಂದಿಕ್ಕಿದ್ದಾರೆ. ಅನ್ನಪೂರ್ಣ ಅವರು 5,600 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...