ಈ ವರ್ಷವೇ ಜಿಬಿಎ ಪಾಲಿಕೆಗಳು ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

Date:

“ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಪ್ರತಿಕ್ರಿಯಿಸಿದರು.

ಹೊಸ ವರ್ಷದ ಸಂಕಲ್ಪದ ಬಗ್ಗೆ ಕೇಳಿದಾಗ, “2026ರ ವರ್ಷ ಶುಭ ಲಗ್ನದಲ್ಲಿ ಆರಂಭವಾಗಿದೆ. 2025ರ ವರ್ಷದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೇವೆ. ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಟೆಕ್ ಸಮ್ಮೇಳನ ಮೂಲಕ ನಾವು ಕರ್ನಾಟಕವನ್ನು ಮುನ್ನಡೆಸಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರಾವರಿ ಇಲಾಖೆಯಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ಯುಕೆಪಿ, ತುಂಗಾಭದ್ರ ಯೋಜನೆಯಲ್ಲಿ ನಾವು ಕೈಗೊಂಡ ತೀರ್ಮಾನ, ಮೇಕೆದಾಟು ಯೋಜನೆಯಲ್ಲಿ ನ್ಯಾಯಾಲಯದ ತೀರ್ಮಾನ ಇತಿಹಾಸದ ಪುಟ ಸೇರಿವೆ. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಅವರ ನಂಬಿಕೆ ಉಳಿಸಿಕೊಳ್ಳಲು, ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ನನ್ನ 35 ವರ್ಷಗಳ ರಾಜಕಾರಣದಲ್ಲಿ ಬೆಂಗಳೂರಿಗೆ ಇಷ್ಟು ದೊಡ್ಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರಲಿಲ್ಲ. ಪ್ರಧಾನಮಂತ್ರಿಗಳು ಕೂಡ ಬೆಂಗಳೂರಿಗೆ ಬಂದಾಗ ಈ ನಗರವನ್ನು ಕೊಂಡಾಡಿದರು. ಅವರು ನಮ್ಮ ನಗರಕ್ಕೆ ಅನುದಾನ ನೀಡದಿದ್ದರೂ ನಾವು ಈ ನಗರಕ್ಕೆ ಹೊಸ ರೂಪ ನೀಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

“ಗೃಹ ಇಲಾಖೆ ಭದ್ರತೆಯಿಂದ ಬೆಂಗಳೂರಿನಲ್ಲಿ ಜನ 2025ಕ್ಕೆ ಬೀಳ್ಕೊಡುಗೆ ನೀಡಿ, 2026ರ ವರ್ಷವನ್ನು ಸ್ವಾಗತಿಸಿದೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡ ಗೃಹ ಸಚಿವ ಪರಮೇಶ್ವರ್ ಅವರ ನೇತೃತ್ವದ ಇಡೀ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

“ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ದೂರು ಹೇಳುತ್ತಿದರು. ಹೀಗಾಗಿ ನಾವು ತ್ವರಿತ ಗತಿಯಲ್ಲಿ ಪರಿಹಾರ ಕಂಡು ಹಿಡಿದಿದ್ದೇವೆ. ಆಮೂಲಕ ಸಂಚಾರ ದಟ್ಟಣೆ ನಿವಾರಿಸಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಹೋಗಿ ಬಂದವರಿಗೆ ಸಂಭ್ರಮದ ಸ್ವಾಗತ; ಕರ್ನಾಟಕ ಹೀಗೇಕಾಯಿತು?

“ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈ ವರ್ಷ ಐವತ್ತನೇ ವಸಂತಕ್ಕೆ ಕಾಲಿಟ್ಟಿದ್ದು, ನನ್ನ ರಾಜಕೀಯ ಜೀವನದಲ್ಲಿ ಹಿಂದೆಂದೂ ಮಾಡಲಾಗದ ಐತಿಹಾಸಿಕ ಯೋಜನೆಗಳನ್ನು ಹಮ್ಮಿಕೊಂಡಿದೆ. 120 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಬಿಬಿಸಿ) ಅನ್ನು ಕಾರ್ಯರೂಪಕ್ಕೆ ತರಲು ರೈತರ ಬಳಿ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ 35% ವಾಣಿಜ್ಯ ಭೂಮಿಯನ್ನು ರೈತರಿಗೆ ಪರಿಹಾರವಾಗಿ ನೀಡಲಾಗುತ್ತಿದೆ. ಜತೆಗೆ ಸಣ್ಣ ಟೌನ್ ಶಿಪ್ ನಿರ್ಮಾಣಕ್ಕೆ ರೈತರಿಗೆ ಉತ್ತಮ ಪರಿಹಾರ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಒಂದೂವರೇ ಕಿ.ಮೀ ಟನಲ್ ರಸ್ತೆ ಬರಲಿದೆ. ಮೇಕ್ರಿ ವೃತ್ತದ ಬಳಿ ಮೇಲ್ಸೇತುವೆ ಸಾಗಲಿದೆ. ಇದನ್ನು ಮೂರು ಭಾಗವಾಗಿ ಕಟ್ಟಲಾಗುವುದು. ಇನ್ನು ತುಮಕೂರು ರಸ್ತೆಯಿಂದ ಕೆ.ಆರ್ ಪುರದ ವರೆಗೆ ಮೇಲ್ಸೇತುವೆ ಮೂಲಕ ಹೊರ ವರ್ತುಲ ರಸ್ತೆ (ಒಆರ್ ಆರ್) ಮಾಡಲು ಮುಂದಾಗಿದ್ದೇವೆ” ಎಂದು ವಿವರಿಸಿದರು.

“ನೈಸ್ ಸಂಸ್ಥೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆ ಅವರು ತಕರಾರು ಎತ್ತಿದ್ದಾರೆ. ನೈಸ್ ನವರು ತಾವು ಸರ್ಕಾರಕ್ಕಿಂತ ದೊಡ್ಡವರು ಎಂದು ಭಾವಿಸಿದ್ದಾರೆ. ಹೀಗಾಗಿ ಬೇರೆ ದಾರಿ ಹುಡುಕುತ್ತೇವೆ. ಅವರಿಗೆ ಹೇಗೆ ಪಾಠ ಕಲಿಸಬೇಕು ಎಂಬುದು ಗೊತ್ತಿದೆ. ಹೀಗಾಗಿ ಸ್ಕೈಡೆಕ್‌ಗಾಗಿ ನಾವು ಬೇರೆ ಕಡೆ ಬಿಡಿಎ ಜಾಗ ಗುರುತಿಸಿದ್ದೇವೆ. ವಿಮಾನ ಹಾರಾಟದ ಟವರ್ ಸಮಸ್ಯೆ ಇರುವ ಕಾರಣ, ಇದನ್ನು ಸೂಕ್ತ ಜಾಗದಲ್ಲಿ ನಿರ್ಮಿಸುತ್ತೇವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...