ಚುನಾವಣಾ ಬಾಂಡ್ ಒಂದು ಪ್ರಯೋಗ: ಆರ್‌ಎಸ್‌ಎಸ್‌

Date:

ದೇಶದಲ್ಲಿ ಚುನಾವಣಾ ಬಾಂಡ್ ಮೂಲಕ ಅತೀ ಅಧಿಕ ದೇಣಿಗೆಯನ್ನು ಪಡೆದ ಆಡಾಳಿತರೂಢ ಬಿಜೆಪಿ, ಚುನಾವಣಾ ಬಾಂಡ್‌ ಹೆಸರಿನಲ್ಲಿ ಹಗರಣ ನಡಸಿದೆ ಎಂದು ಆರೋಪಿಸಲಾಗುತ್ತಿದೆ. ಇದೇ ಸಮಯದಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ “ಚುನಾವಣಾ ಬಾಂಡ್ ಒಂದು ಪ್ರಯೋಗ” ಎಂದಿದ್ದಾರೆ.

ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಭಾನುವಾರ ದತ್ತಾತ್ರೇಯ ಹೊಸಬಾಳೆ ಅವರನ್ನು ಮೂರು ವರ್ಷಗಳ ಅವಧಿಗೆ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಆಯ್ಕೆ ಮಾಡಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡಾ ಈ ಸಭೆಯಲ್ಲಿ ಭಾಗಿಯಾಗಿದ್ದರು. ಇದಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ದತ್ತಾತ್ರೇಯ, “ಚುನಾವಣಾ ಬಾಂಡ್ ಒಂದು ಪ್ರಯೋಗ. ಅದು ಎಷ್ಟು ಪರಿಣಾಮಕಾರಿ ಎಂಬುವುದು ನಿಮಗೆ ಮುಂದಿನ ದಿನಗಳಲ್ಲಿ ತಿಳಿಯುತ್ತದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ | ಬಿಜೆಪಿ-ಮೋದಿ ಭದ್ರಕೋಟೆ ಛಿದ್ರಗೊಳಿಸಲು ವಿಪಕ್ಷಗಳಿಗೆ ಸುವರ್ಣಾವಕಾಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಬಾಂಡ್ ಏನು ಹೊಸತಲ್ಲ, ಇಂತಹ ಯೋಜನೆಗಳನ್ನು ಈ ಹಿಂದೆಯೂ ಜಾರಿ ಮಾಡಲಾಗಿದೆ. ಬದಲಾವಣೆಯನ್ನು ನಾವು ಪರಿಚಯಿಸಿದಾಗ ಅಲ್ಲಿ ಪ್ರಶ್ನೆಗಳು ಏಳುವುದು ಸಹಜ. ಇವಿಎಂ ಆರಂಭಿಸಿದಾಗಲೂ ಪ್ರಶ್ನೆ ಮಾಡಲಾಗಿತ್ತು” ಎಂದರು.

“ಹೊಸದಾಗಿ ಯಾವುದೇ ಯೋಜನೆ, ಕಾರ್ಯ ಆರಂಭಿಸಿದರೂ ಪ್ರಶ್ನೆಗಳು ಸಹಜ. ಆದರೆ ಅದು ಎಷ್ಟು ಪರಿಣಾಮಕಾರಿ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯುತ್ತದೆ. ಅದರಿಂದಾಗಿ ಚುನಾವಣಾ ಬಾಂಡ್‌ ಅನ್ನು ಈಗ ಪ್ರಯೋಗ ಮಾಡಬೇಕು ಎಂದು ಸಂಘದ ಅಭಿಪ್ರಾಯ” ಎಂದು ದತ್ತಾತ್ರೇಯ ತಿಳಿಸಿದರು.

ಚುನಾವಣಾ ಆಯೋಗವು ಗುರುವಾರ ಚುನಾವಣಾ ಬಾಂಡ್‌ನ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಹಲವಾರು ಬಿಲಿಯನೇರ್‌ಗಳು, ಚಿರಪರಿಚಿತವಲ್ಲದ ಸಂಸ್ಥೆಗಳು ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿರುವ ಬಹಿರಂಗವಾಗಿದೆ. ದೇಶದಲ್ಲೇ ಅತೀ ಅಧಿಕ ದೇಣಿಗೆ ಪಡೆದ ಪಕ್ಷ ಬಿಜೆಪಿಯಾಗಿದೆ. ಭಾನುವಾರ ಆಯೋಗ ಹೆಚ್ಚುವರಿ ಡೇಟಾ ಬಿಡುಗಡೆ ಮಾಡಿದ್ದು ಸಿಪಿಐಎಂ, ಸಿಪಿಐ ಸೇರಿದಂತೆ ಎಡಪಕ್ಷಗಳು ಬಾಂಡ್ ಮೂಲಕ ಯಾವುದೇ ದೇಣಿಗೆ ಪಡೆಯದ ಪಕ್ಷಗಳಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...