ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

Date:

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ ಚುನಾವಣಾ ಬಾಂಡ್‌ ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ.

ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್‌ನೊಂದಿಗೆ ಮಾತನಾಡಿದ ಅವರು, “ನಾವು ಇನ್ನೂ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ಮಾಡಬೇಕಿದೆ. ಎಲ್ಲರಿಗೂ ಸ್ವೀಕಾರಾರ್ಹವಾದ ಯೋಜನೆ ತಯಾರಿಗೆ ನಾವು ಏನು ಮಾಡಬೇಕು ನೋಡೋಣ. ಪ್ರಾಥಮಿಕವಾಗಿ ಪಾರದರ್ಶಕತೆ ಉಳಿಸಿಕೊಳ್ಳಬೇಕು” ಎಂದು ಹೇಳಿದರು.

“ಕಪ್ಪುಹಣದ ಸಾಧ್ಯತೆಯನ್ನು ಇದು (ಚುನಾವಣಾ ಬಾಂಡ್) ಸಂಪೂರ್ಣವಾಗಿ ತೆಗೆದುಹಾಕುತ್ತದೆ. ಆದರೆ ಸುಪ್ರೀಂ ಕೋರ್ಟ್ (ಎಸ್‌ಸಿ) ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆ ಎಂದು ಕೇಂದ್ರ ಸರ್ಕಾರ ಇನ್ನೂ ನಿರ್ಧರಿಸಿಲ್ಲ. ಸುಪ್ರೀಂಕೋರ್ಟ್‌ ರದ್ದು ಮಾಡಿದ ಪ್ರಸ್ತುತ ಯೋಜನೆಯು ಪಾರದರ್ಶಕತೆ ಹೊಂದಿದೆ” ಎಂದೂ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

ಇನ್ನು ಈ ಸಂದರ್ಭದಲ್ಲೇ ಯೋಜನೆಯ ಕೆಲವು ಅಂಶಗಳು ಸುಧಾರಣೆಯ ಅಗತ್ಯವಿದೆ ಎಂದು ಹೇಳಿದ ಸಚಿವೆ ಸೀತಾರಾಮನ್ ಅವರು “ಉತ್ತಮ ಸಮಾಲೋಚನೆಯ” ನಂತರ ಚುನಾವಣಾ ಬಾಂಡ್ ಯೋಜನೆಯನ್ನು ಯಾವುದಾದರೂ ರೂಪದಲ್ಲಿ ಮತ್ತೆ ಆರಂಭಿಸಬಹುದು ಎಂದು ಹೇಳಿದ್ದಾರೆ.

ಇನ್ನು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಹಣಕಾಸು ಸಚಿವರು ಸಮರ್ಥಿಸಿಕೊಂಡಿರುವುದು ಇದೇ ಮೊದಲಲ್ಲ. ಈ ಹಿಂದೆ “ಈ ಯೋಜನೆಯು ಹಿಂದಿದ್ದ ಯೋಜನೆಗಿಂತ ಒಂದು ಹೆಜ್ಜೆ ಉತ್ತಮವಾಗಿದೆ, ಪಾರದರ್ಶಕತೆಯಿದೆ” ಎಂದಿದ್ದರು.

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ -ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

ಬಾಂಡ್‌ ಮೂಲಕ ದೇಣಿಗೆ ನೀಡಿದವರ ಮತ್ತು ಬಾಂಡ್ ಮೂಲಕ ದೇಣಿಗೆ ಪಡೆದ ಪಕ್ಷದ ಮಾಹಿತಿಯನ್ನು ಗೌಪ್ಯವಾಗಿ ಉಳಿಸಿಕೊಳ್ಳುವ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರ್ಕಾರವು ಜನವರಿ 2, 2018 ರಂದು ಆರಂಭಿಸಿದೆ. ಆದರೆ ಇದು ಪಾರದರ್ಶಕತೆ ಹೊಂದಿಲ್ಲ ಎಂದು ಫೆಬ್ರವರಿ 2024 ರಲ್ಲಿ, ಐದು ನ್ಯಾಯಾಧೀಶರ ಸಂವಿಧಾನ ಪೀಠವು ಈ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...