ವಿದ್ಯುತ್ ಕಳವು ಪ್ರಕರಣ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂನಿಂದ ಎಫ್‌ಐಆರ್

Date:

ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದ ಹಿನ್ನೆಲೆಯಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಪಿ ನಗರ ನಿವಾಸಕ್ಕೆ ವಿದ್ಯುತ್ ಅಲಂಕಾರ ಮಾಡಿಸಿದ್ದರು. ಇದಕ್ಕೆ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಟೀಕಿಸಿ, ಕಾಂಗ್ರೆಸ್ ವಿಡಿಯೋ ದಾಖಲೆಯೊಂದಿಗೆ ಟ್ವೀಟ್ ಮಾಡಿತ್ತು. ಇದರ ಬೆನ್ನಲ್ಲೇ ಎಚ್‌ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ‘ಅಚಾತುರ್ಯ ನಡೆದಿದೆ. ದಂಡ ಕಟ್ಟಲು ಸಿದ್ಧ’ ಎನ್ನುವ ಮೂಲಕ ಕಳ್ಳತನ ನಡೆದಿರುವುದನ್ನು ಒಪ್ಪಿಕೊಂಡಿದ್ದರು.

kumaraswami 1

ಇದು ರಾಜಕೀಯ ಚರ್ಚೆಗೆ ವೇದಿಕೆಯೊದಗಿಸಿದ ಬೆನ್ನಲ್ಲೇ ಬೆಸ್ಕಾಂ ಎಇಇ ನೇತೃತ್ವದ ಅಧಿಕಾರಿಗಳ ತಂಡ ಮನೆಗೆ ಆಗಮಿಸಿ, ಪರಿಶೀಲನೆ ನಡೆಸಿತ್ತು. ಮನೆಯ ಯಜಮಾನನಾಗಿರುವ ಎಚ್‌ ಡಿ ಕುಮಾರಸ್ವಾಮಿ ಅವರು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ.

ಅಕ್ರಮವಾಗಿ ಕಂಬದಿಂದಲೇ ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ 2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135ರ ಅಡಿಯಲ್ಲಿ ಕುಮಾರಸ್ವಾಮಿಯವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಈ ಕಾಯ್ದೆಯ ಪ್ರಕಾರ ಮೂರು ದಿನಗಳಲ್ಲಿ ಬೆಸ್ಕಾಂ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಎಷ್ಟು ಮೊತ್ತದ ದಂಡ ಎಂದು ಇನ್ನೂ ವರದಿಯಾಗಿಲ್ಲ. ಅಧಿಕಾರಿಗಳು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಬಳಿಕವಷ್ಟೇ ತಿಳಿದುಬರಲಿದೆ.

ಸರ್ಕಾರದ ಗೃಹ ಜ್ಯೋತಿ ಗ್ಯಾರಂಟಿಯ ಬಗ್ಗೆ ‘ಕತ್ತಲೆ ಭಾಗ್ಯ’ ಎನ್ನುವ ಮೂಲಕ ಕುಮಾರಸ್ವಾಮಿ ಟೀಕಿಸಿದ್ದ ಬೆನ್ನಲ್ಲೇ, ಈ ರೀತಿಯ ಬೆಳವಣಿಗೆ ನಡೆದಿರುವುದು ಮುಜುಗರ ಸೃಷ್ಟಿಸಿತ್ತು. ಅಲ್ಲದೇ, ಇದು ಸೋಷಿಯಲ್ ಮೀಡಿಯಾಗಳಲ್ಲಿ ಕುಮಾರಸ್ವಾಮಿಯವರನ್ನು ಟ್ರೋಲ್‌ ಮಾಡುವವರಿಗೆ ಸರಕಾಗಿಯೂ ಲಭಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...