68 ಸಾವಿರ ದಂಡ ಪಾವತಿಸಿ, ಕರೆಂಟ್ ಕಳ್ಳ ಎಂದು ಕರೆಯುವುದನ್ನು ನಿಲ್ಲಿಸಿ ಎಂದ ಕುಮಾರಸ್ವಾಮಿ

Date:

  • 68,526 ರೂ. ದಂಡವನ್ನು ಆನ್​ಲೈನ್ ಮೂಲಕ ಪಾವತಿ
  • ಸುದ್ದಿಗೋಷ್ಠಿ ನಡೆಸಿ ಮಹಜರ್ ಕಾಪಿ ಕೇಳಿದ ಕುಮಾರಸ್ವಾಮಿ

ಮಾಜಿ ಸಿಎಂ ಎಚ್ ​ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಬೆಸ್ಕಾಂ ವಿಧಿಸಿದ್ದ ದಂಡವನ್ನು ಕುಮಾರಸ್ವಾಮಿ ಪಾವತಿ ಮಾಡಿದ್ದಾರೆ.

ಅಕ್ರಮವಾಗಿ ವಿದ್ಯುತ್ ಬಳಸಿಕೊಂಡಿರುವುದಕ್ಕೆ ಬೆಸ್ಕಾಂ 68,526 ರೂ. ದಂಡವನ್ನು ವಿಧಿಸಿತ್ತು.
ದಂಡದ ಮೊತ್ತವನ್ನು ಕುಮಾರಸ್ವಾಮಿ ಅವರು ಆನ್​ಲೈನ್ ಮೂಲಕ ಪಾವತಿಸಿದ್ದಾರೆ. 2.5 ಕಿಲೋ ವ್ಯಾಟ್​ಗೆ 2,526 ರೂ. ನಂತೆ ಒಟ್ಟು 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, “ಬೆಸ್ಕಾಂನವರು 68,526 ರೂಪಾಯಿ ದಂಡ ವಿಧಿಸಿದ್ದಾರೆ. ಆ ಬಿಲ್​ನಲ್ಲಿ ಅವರ ಲೆಕ್ಕಾಚಾರದಲ್ಲಿ 2.5 ಕಿಲೋ ವ್ಯಾಟ್ ಉಪಯೋಗ ಅಂತ ಇದೆ. 2,526 ರೂಪಾಯಿ ಹಾಕಿದ್ದಾರೆ. ನಮ್ಮ ಮನೆಗೆ 33 ಕಿಲೋ ವ್ಯಾಟ್ ಪರ್ಮಿಷನ್ ತಗೊಂಡಿದ್ದೇನೆ. ನಾನು ನಿತ್ಯ ಉಪಯೋಗ ಮಾಡುವ ಕರೆಂಟ್ ಇದು. ಮಹಜರ್ ಕಾಪಿ ಕೇಳಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯೇಂದ್ರ ಬಗ್ಗೆ ಆರೋಪ ಮಾಡಿದ್ದ ಸಿದ್ದರಾಮಯ್ಯ ದೊಡ್ಡ ಪ್ರಾಮಾಣಿಕರಾ : ಕುಮಾರಸ್ವಾಮಿ ಪ್ರಶ್ನೆ

“ಡಿಸಿಎಂ ಡಿಕೆ ಶಿವಕುಮಾರ್‌ಗೆ ಸೇರಿದ ಲುಲು ಮಾಲ್​​​ ಕಾಮಗಾರಿ ವೇಳೆ ಕರೆಂಟ್​ ಬಿಲ್ ನೀಡಿಲ್ಲ. ಲುಲು ಮಾಲ್ ಆರಂಭಕ್ಕೂ ಮುನ್ನ 6 ತಿಂಗಳು ಕರೆಂಟ್ ನೀಡಿಲ್ಲ. ಲುಲು ಮಾಲ್​ ಬಳಕೆ ಮಾಡಿದ ವಿದ್ಯುತ್​​​​​ ಬಿಲ್​ಗೆ ದಂಡ ಹಾಕುತ್ತೀರಾ?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

“ಮನೆಗೆ ತೆಗೆದುಕೊಂಡಿರುವ 33 ಕೆವಿ ಸೇರಿ 68 ಸಾವಿರ ರೂ. ಹಾಕಿದ್ದಾರೆ. ಒಬ್ಬ ಮಾಜಿ ಸಿಎಂಗೆ ಹೀಗೆ ಆದರೆ ಸಾಮಾನ್ಯ ಜನರಿಗೆ ಕಥೆ ಏನು? ನನಗೆ ಕರೆಂಟ್ ಕಳ್ಳ ಅಂತ ಲೇಬಲ್ ಬೇರೆ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ದಂಡ ಕಟ್ಟಿರುವೆ. ಇನ್ಮುಂದೆ ವಿದ್ಯುತ್ ಕಳ್ಳ ಎಂದು ಕರೆಯುವುದನ್ನು ನಿಲ್ಲಿಸಿಬಿಡಿ. ನಾನೇನು ಹಗಲು ದರೋಡೆಕೋರ ಅಲ್ಲ” ಎಂದು ಪರೋಕ್ಷವಾಗಿ ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...