ಕನ್ನಡಿಗರಿಗೆ ಉದ್ಯೋಗ | ಕಾರ್ಪೊರೇಟ್ ಲಾಬಿಗೆ ಮಣಿದ ಸರ್ಕಾರ: ಕರವೇ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆರೋಪ

Date:

“ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ ವಿಧೇಯಕವನ್ನು ಸರ್ಕಾರ ತಡೆಹಿಡಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರ ಕನ್ನಡಿಗರ ಪಾಲಿಗೆ ಅತ್ಯಂತ ಕರಾಳ ಮತ್ತು ಆತ್ಮಘಾತಕಾರಿ ನಿರ್ಧಾರವಾಗಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಕಳೆದ ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈಗ ತಡೆ ಹಿಡಿದರುವುದು ಕನ್ನಡಿಗರಿಗೆ ಮಾಡುವ ಅವಮಾನ” ಎಂದಿದ್ದಾರೆ.

“ಸೋಮವಾರವಷ್ಟೆ ಸಂಪುಟ‌ ಸಭೆಯ ಅನುಮೋದನೆ ಪಡೆದಿದ್ದ ವಿಧೇಯಕವನ್ನು ಈಗ ತಡೆಹಿಡಿದಿರುವುದಕ್ಕೆ ಕರ್ನಾಟಕದಲ್ಲಿ ನೆಲೆನಿಂತಿರುವ ಕಾರ್ಪೊರೇಟ್ ಶಕ್ತಿಗಳು ಕಾರಣ ಎಂಬುದು ಈಗ ಸ್ಪಷ್ಟವಾಗಿದೆ. ಸರ್ಕಾರ ವಿಧೇಯಕ ತರುತ್ತಿರುವುದು ಗೊತ್ತಾಗುತ್ತಿದ್ದಂತೆ ಹಲವಾರು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಾಡಿನ ಮಕ್ಕಳು ಕನ್ನಡದ ನೆಲದಲ್ಲೇ ಉದ್ಯೋಗ ವಂಚಿತರಾಗುವುದನ್ನು ತಡೆಯುವ ಪ್ರಯತ್ನವನ್ನು ಈ ಪಟ್ಟಭದ್ರ ಹಿತಾಸಕ್ತಿಗಳು ತಡೆದಿವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೋಚನೀಯ ಸ್ಥಿತಿ

“ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಿರುವುದು ಕೋಟ್ಯಂತರ ಸಂಖ್ಯೆಯ ಸಾಮಾನ್ಯ ಜನರೇ ಹೊರತು ಈಗ ವಿಧೇಯಕವನ್ನು ವಿರೋಧಿಸುತ್ತಿರುವ ಬೆರಳೆಣಿಕೆಯಷ್ಟು ಸ್ವಾರ್ಥ ಉದ್ಯಮಿಗಳಲ್ಲ. ರಾಜ್ಯ ಸರ್ಕಾರ ತಮ್ಮನ್ನು ಕಾಪಾಡುತ್ತದೆ‌ ಎಂದು ಆಸೆಗಣ್ಣಿನಿಂದ ಕಾಯುತ್ತಿರುವ ಸಾಮಾನ್ಯ ಜನರ ಪರವಾಗಿ ನಿಲ್ಲಬೇಕಿತ್ತೇ ಹೊರತು, ಸರ್ಕಾರವನ್ನು ಬೆದರಿಸುವ ಕುತಂತ್ರ ಮಾಡುತ್ತಿರುವ ಉದ್ಯಮಿಗಳ ಪರವಾಗಿ ಅಲ್ಲ. ಎಂಥದ್ದೇ ಒತ್ತಡ ಬಂದರೂ ಅದನ್ನು ಎದುರಿಸಿ ನಿಲ್ಲುವ ಬದಲು ಸರ್ಕಾರ ಇಂಥ ಶಕ್ತಿಗಳ ಎದುರು ಮಂಡಿಯೂರಿ ನಿಲ್ಲುವುದು ಶೋಚನೀಯವಾಗಿದೆ, ದುರದೃಷ್ಟಕರವಾಗಿದೆ. ಇದನ್ನು ನಾವು ಯಾರೂ ನಿರೀಕ್ಷಿಸಿರಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇದೇ ವಿಷಯ ಸಂಬಂಧ ಮುಖ್ಯಮಂತ್ರಿ‌ ಸಿದ್ಧರಾಮಯ್ಯನವರನ್ನು ಎರಡು ಬಾರಿ ಭೇಟಿ ಮಾಡಿದಾಗಲೂ ಕನ್ನಡಿಗರ ಹಿತರಕ್ಷಣೆ ವಿಷಯದಲ್ಲಿ ಯಾವುದೇ ರಾಜಿ‌ ಇಲ್ಲ ಎಂದೇ ಅವರು ಹೇಳಿದ್ದರು. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಅವರ ಕೈಕಟ್ಟಿಹಾಕಿರುವಂತೆ ಕಂಡುಬರುತ್ತಿದೆ. ಇಂಥ ಶಕ್ತಿಗಳಿಗೆ ಮುಖ್ಯಮಂತ್ರಿಗಳು ಅಂಜಬಾರದು, ಇಟ್ಟ‌ಹೆಜ್ಜೆಯನ್ನು ಹಿಂದಕ್ಕೆ ಇಡಬಾರದು” ಎಂದು ಆಗ್ರಹಿಸಿದ್ದಾರೆ.

ಕನ್ನಡಿಗರು ಯಾವ ತಪ್ಪು ಮಾಡಿದ್ದಾರೆ?

“ಕನ್ನಡಿಗರು ಯಾವ ತಪ್ಪು ಮಾಡಿದ್ದಾರೆಂದು ಈ ಶಿಕ್ಷೆ? ನಾವು ಭಾರತ ಒಕ್ಕೂಟದಲ್ಲಿ ಸೇರಿ, ದೇಶದ ಪ್ರಗತಿಗೆ ಕಾರಣರಾಗಿರುವುದೇ ನಾವು ಮಾಡಿದ ತಪ್ಪೇ? ನಮ್ಮ ನೆಲದಲ್ಲಿ‌ ನಮ್ಮ ಮಕ್ಕಳಿಗೆ ಉದ್ಯೋಗ ಸಿಗಬೇಕು ಎಂದು 40 ವರ್ಷಗಳಿಂದ ಹೋರಾಡುತ್ತ ಬಂದರೂ‌ ನಮ್ಮ ಬೇಡಿಕೆ ಈಡೇರುತ್ತಿಲ್ಲ. ಇದೆಂಥ ದುಸ್ಥಿತಿ? ನಮ್ಮ ನೆಲದಲ್ಲೇ ನಮ್ಮ ಮಕ್ಕಳಿಗೆ‌ ಉದ್ಯೋಗವಿಲ್ಲದಿದ್ದರೆ ಅವರು ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

“ಮಹಾರಾಷ್ಟ್ರದಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಇದೇ ರೀತಿಯ ಕಾನೂನು ಜಾರಿಯಾಗಿ, ಅಲ್ಲಿನ ಯುವಜನತೆಗೆ ಉದ್ಯೋಗ ದೊರೆಯುತ್ತಿದೆ. ಇದೇ ರೀತಿ ಹಲವು ರಾಜ್ಯಗಳಲ್ಲಿ ಆಗಿದೆ. ಅಲ್ಲಿ ಇಂಥ ಕಾನೂನುಗಳಿಗೆ ಯಾವುದೇ ವಿರೋಧ ವ್ಯಕ್ತಪಡಿಸದ ಉದ್ಯಮಿಗಳು, ಉದ್ಯಮಿಗಳ ಸಂಘಟನೆಗಳು ಕರ್ನಾಟಕದಲ್ಲಿ ಮಾತ್ರ ಯಾಕೆ ವಿರೋಧ ವ್ಯಕ್ತಪಡಿಸುತ್ತವೆ? ಮಹಾರಾಷ್ಟ್ರದ ಜನರನ್ನು ಎದುರುಹಾಕಿಕೊಂಡು ಅಲ್ಲಿ ಉದ್ಯಮ ನಡೆಸುವ ಶಕ್ತಿ ಅವರಿಗಿಲ್ಲ. ಆದರೆ ಕರ್ನಾಟಕದ ಕನ್ನಡಿಗರು ಎಂದರೆ ಇವರಿಗೆ ಯಾವ ಭಯವೂ ಇಲ್ಲ” ಎಂದು ಹರಿಹಾಯ್ದಿದ್ದಾರೆ.

ಯಾವುದೇ ಉದ್ಯಮಿಗಳು, ಉದ್ಯಮಗಳ‌ ವಿರುದ್ಧ ಇಲ್ಲ

“ಕರ್ನಾಟಕ ರಕ್ಷಣಾ‌ ವೇದಿಕೆ‌ ಯಾವುದೇ ಉದ್ಯಮಿಗಳು, ಉದ್ಯಮಗಳ‌ ವಿರುದ್ಧ ಇಲ್ಲ. ಅವರು ಉದ್ಯಮ ನಡೆಸಲು ಯಾವ ತಕರಾರೂ ಇಲ್ಲ. ನಾವು ಅವರ ಬಳಿ ಯಾವ ಪಾಲೂ ಕೇಳುತ್ತಿಲ್ಲ. ಕೇಳುತ್ತಿರುವುದು ಕೇವಲ ಉದ್ಯೋಗವನ್ನಷ್ಟೆ. ಕರ್ನಾಟಕದ ನೆಲ ಬೇಕು, ಜಲ ಬೇಕು, ಸಂಪನ್ಮೂಲಗಳೆಲ್ಲ ಬೇಕು, ಸರ್ಕಾರ ನೀಡುವ ವಿನಾಯಿತಿಗಳೆಲ್ಲ ಬೇಕು, ಆದರೆ ಇಲ್ಲಿನ ಜನರು ಬೇಡವೆಂದರೆ ಹೇಗೆ? ಈ ಜನರಿಗೆ ಕನಿಷ್ಠ ನಿಯತ್ತಾದರೂ ಬೇಡವೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯ ಸಚಿವ ಸಂಪುಟದ ಕೆಲವು ಸಚಿವರುಗಳೇ ವಿಧೇಯಕದ ಕುರಿತು ಅಪಸ್ವರ ಎತ್ತಿದ್ದಾರೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಈ ಸಚಿವರುಗಳು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಬೆನ್ನಿಗೆ ನಿಂತು ವಿಧೇಯಕವನ್ನು ಸಮರ್ಥಿಸಿಕೊಳ್ಳಬೇಕಿತ್ತು. ಇಂಥವರು ನಿಜವಾಗಿಯೂ ಕನ್ನಡದ ಹಿತಶತ್ರುಗಳು. ಕನ್ನಡದ ಜನತೆ ಅವರಿಗೆ ತಕ್ಕಪಾಠ ಕಲಿಸುತ್ತಾರೆ. ಹೇಡಿಗಳಂತೆ ಹಿಂದಿನಿಂದ ಸಂಚು ನಡೆಸುವ ಬದಲು ನೇರವಾಗಿ ಕನ್ನಡಿಗರನ್ನು ಎದುರುಹಾಕಿಕೊಂಡು ರಾಜಕಾರಣ ನಡೆಸಲಿ” ಎಂದು ಸವಾಲು ಹಾಕಿದ್ದಾರೆ.

ವಿರೋಧಿಸುವವರು ಕರ್ನಾಟಕ ಬಿಟ್ಟು ತೊಲಗಲಿ

“ವಿಧೇಯಕವನ್ನು‌ ವಿರೋಧಿಸುವ ನೆಪದಲ್ಲಿ ಕೆಲ ಉದ್ಯಮಿಗಳು ಕನ್ನಡಿಗರಿಗೆ ಕೌಶಲ್ಯ ಇಲ್ಲ, ಉದ್ಯೋಗಗಳಿಗೆ ಅರ್ಹತೆ ಇಲ್ಲ, ಕರ್ನಾಟಕ ಭ್ರಷ್ಟ ರಾಜ್ಯ ಎಂದೆಲ್ಲ ಹೇಳಿಕೆ ನೀಡಿದ್ದಾರೆ. ಇಂಥವರು ತಮ್ಮ ನಾಲಿಗೆ ಬಿಗಿಹಿಡಿದು ಮಾತಾಡುವುದು ಒಳ್ಳೆಯದು. ಕನ್ನಡಿಗರನ್ನು ಹೀಗೆ ಪ್ರಚೋದಿಸಿದರೆ ಏನಾಗುತ್ತದೆ ಎಂಬ ಇತಿಹಾಸವನ್ನು ಅವರು ಮರೆಯಬಾರದು. ಕನ್ನಡಿಗರನ್ನು‌ ನಿಂದಿಸುವವರಿಗೆ ಕರ್ನಾಟಕದಲ್ಲಿ ಇರುವ ಯೋಗ್ಯತೆಯೂ ಇಲ್ಲ, ಅರ್ಹತೆಯೂ ಇಲ್ಲ. ಅಂಥವರು ಕರ್ನಾಟಕ ಬಿಟ್ಟು ತೊಲಗಲಿ” ಎಂದು ಆಗ್ರಹಿಸಿದ್ದಾರೆ.

“ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರಿಗೆ ದಕ್ಕಲೇಬೇಕಾದ ಉದ್ಯೋಗ ಮೀಸಲಾತಿಯ ಚಳವಳಿಯನ್ನು ಜಾರಿಯಲ್ಲಿಡುತ್ತದೆ. ಭಿನ್ನ ಭಿನ್ನ‌ ರೀತಿಯ ಪ್ರತಿಭಟನೆಗಳನ್ನು ನಾವು ಮುಂದುವರೆಸಿಕೊಂಡು‌ ಹೋಗುತ್ತೇವೆ”ಎಂದು ಸ್ಪಷ್ಟಪಡಿಸಿದ್ದಾರೆ.

“ಕಾಯ್ದೆ ಮತ್ತೆ‌ ನೆನೆಗುದಿಗೆ ಬಿದ್ದರೆ ರಾಜ್ಯಸರ್ಕಾರ ಮತ್ತು ಕಾಯ್ದೆಗೆ‌ ಅಡ್ಡಿಯಾಗಿರುವ ದುಷ್ಟಶಕ್ತಿಗಳ ವಿರುದ್ಧ ತೀವ್ರ ಸ್ವರೂಪದ ಹೋರಾಟ ಸಂಘಟಿಸುತ್ತಿವೆ. ಈ ಸಂಬಂಧ ಹೋರಾಟದ ರೂಪುರೇಷೆ ತೀರ್ಮಾನಿಸಲು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪದಾಧಿಕಾರಿಗಳು, ಜಿಲ್ಲಾ-ತಾಲ್ಲೂಕು ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಕರೆಯಲಿದ್ದೇವೆ” ಎಂದು ತಿಳಿಸಿದ್ದಾರೆ.

“ಕರ್ನಾಟಕದ ಉದ್ಯೋಗಗಳು ಕನ್ನಡಿಗರ ಹಕ್ಕು, ನಾವು ಕೇಳುತ್ತಿರುವ ಭಿಕ್ಷೆಯಲ್ಲ. ನಮ್ಮ ಹಕ್ಕನ್ನು ಕಸಿಯಲು‌ ಯಾರಿಗೂ ಬಿಡುವುದಿಲ್ಲ. ಈ ಹಾದಿಯಲ್ಲಿ ಅಡ್ಡ ಬರುವ ಶಕ್ತಿಗಳು ಎಷ್ಟೇ ಪ್ರಬಲವಾಗಿದ್ದರೂ ನಾವು ಹೋರಾಟ ಕೈಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...