ವಕ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು

Date:

ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಗುರುವಾರ ಜಿಲ್ಲಾ ವಕ್ಫ್ ಅಧಿಕಾರಿಗಳ ಸಭೆ ನಡೆಸಿದ ಅವರು, “ಜಿಲ್ಲಾವಾರು ವಕ್ಫ್ ಆಸ್ತಿ ಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು” ಎಂದು ಸೂಚನೆ ನೀಡಿದರು.

“ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

“ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ. ಇಂಥ ವರ್ತನೆ ಸರಿ ಪಡಿಸಿಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಹಣ ಮಾಡಲು ವಕ್ಫ್ ಇಲಾಖೆಗೆ ಬರಬೇಡಿ. ಇದು ದೇವರ ಕೆಲಸ. ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ವಕ್ಫ್ ಅಸ್ತಿಗಳ ರಕ್ಷಣೆಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಕ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕರೂಪದ ಕಾಪೌಂಡ್ ಹಾಕಬೇಕು” ಎಂದರು.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ನಿರ್ದೇಶಕ ಮೊಕಾಶಿ ಜಿಲಾನಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...