ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

Date:

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31 ಕಡೆ ಶುಕ್ರವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಇಂದು ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂ ರಾಜ್ಯದ ಗ್ಯಾಂಗ್ಟಕ್‌ನಲ್ಲೇ ಬಂಧಿಸಿರುವುದಾಗಿ ವರದಿಯಾಗಿದೆ.

ಗ್ಯಾಂಗ್ಟಕ್‌ನಲ್ಲಿಂದಲೇ ಟ್ರಾನ್ಸಿಟ್ ರಿಮ್ಯಾಂಡ್ ಪಡೆದು, ಬೆಂಗಳೂರು ಕೋರ್ಟ್‌ಗೆ ಹಾಜರುಪಡಿಸಲು ಕರೆ ತರುತ್ತಿರುವುದಾಗಿ ತಿಳಿದುಬಂದಿದೆ. ಶಾಸಕ ಕೆ ಸಿ ವೀರೇಂದ್ರ ಪಪ್ಪಿಯ ಬೆಂಗಳೂರು, ಚಿತ್ರದುರ್ಗದ ಮನೆ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಗದು ಹಣ ಪತ್ತೆಯಾಗಿದ್ದು, ಅವುಗಳೆಲ್ಲವನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ವೀರೇಂದ್ರ ಪಪ್ಪಿ ಮನೆಯಲ್ಲಿ ಬರೋಬ್ಬರಿ 12 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ. ಇದರಲ್ಲಿ 1 ಕೋಟಿ ರೂಪಾಯಿ ವಿದೇಶಿ ಕರೆನ್ಸಿ ಕೂಡ ಸೇರಿದೆ. 6 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ಜೊತೆಗೆ 10 ಕೆಜಿ ಬೆಳ್ಳಿ ಕೂಡ ಪತ್ತೆಯಾಗಿದೆ. ಇವೆಲ್ಲವನ್ನೂ ಜಪ್ತಿ ಮಾಡಿಕೊಂಡಿರುವುದಾಗಿ ಇಡಿ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪಪ್ಪಿ

ಪಿಎಂಎಲ್‌ಎ ಕಾಯಿದೆ 2002 ರಡಿ ಶಾಸಕರಿಗೆ ಸೇರಿದ್ದ ನಾಲ್ಕು ವಾಹನಗಳನ್ನು ಜಫ್ತಿ ಮಾಡಲಾಗಿದೆ. ವೀರೇಂದ್ರ ಪಪ್ಪಿ ಹಾಗೂ ಸೋದರರಿಗೆ ಸೇರಿದ 17 ಬ್ಯಾಂಕ್ ಖಾತೆ, 2 ಬ್ಯಾಂಕ್ ಲಾಕರ್‌ಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಸೋದರ ಕೆ.ಸಿ.ನಾಗರಾಜ್, ಸೋದರನ ಮಗ ಪೃಥ್ವಿ ದುಬೈನಲ್ಲಿ ಆನ್ ಲೈನ್ ಗೇಮಿಂಗ್ ಬ್ಯುಸಿನೆಸ್ ಅನ್ನು ನಿರ್ವಹಿಸುತ್ತಿದ್ದರು ಎಂದು ಇ.ಡಿ. ಹೇಳಿದೆ. ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಕ್ಯಾಸಿನೋಗಾಗಿ ಜಾಗ ಲೀಸ್ ಗೆ ಪಡೆಯಲು ವೀರೇಂದ್ರ ಪಪ್ಪಿ ಸಿಕ್ಕಿಂಗೆ ಹೋಗಿದ್ದರು. ಇದೇ ವೇಳೆ ಅಲ್ಲಿಯೇ ಬಂಧಿಸಿದ್ದು, ತನಿಖೆ ನಡೆಸಲು ಬೆಂಗಳೂರಿಗೆ ತರೆತರುತ್ತಿದ್ದಾರೆ.

ಪಪ್ಪಿ1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...