ಶಿವಮೊಗ್ಗ | ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ, ಗೆದ್ದ ಬಳಿಕ ಭೇಟಿಯಾಗುತ್ತೇನೆ: ಕೆ ಎಸ್ ಈಶ್ವರಪ್ಪ

Date:

ಶಿವಮೊಗ್ಗದಲ್ಲಿ ಬಿಜೆಪಿ ಎದುರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ, ಸೋಮವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಭಾನುವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ವೇಳೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 18ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ. ನಾನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶಿವಮೊಗ್ಗ | ಕೆ ಎಸ್ ಈಶ್ವರಪ್ಪ ಮನವೊಲಿಸಲು ಬಿಜೆಪಿ ನಾಯಕರ ಹರಸಾಹಸ: ಸಂಧಾನ ವಿಫಲ

“ಪ್ರಧಾನಿ ಮೋದಿ ನನ್ನ ದೇವರು” ಎಂದು ಪುನರುಚ್ಛರಿಸಿದ ಈಶ್ವರಪ್ಪ, “ನನ್ನ ಪ್ರಾಣ ಹೋದರೂ ಕೂಡಾ ನಾನು ಮೋದಿ ಹೆಸರು ಹೇಳುವುದನ್ನು ನಿಲ್ಲಿಸಲಾರೆ. ಆದರೆ ಈಗ ಒಂದು ಕುಟುಂಬದ ಕಪಿಮುಷ್ಠಿಯಲ್ಲಿರುವ ಪಕ್ಷವನ್ನು ಬಿಡುಗಡೆ ಮಾಡಬೇಕೆಂಬ ಕಾರಣಕ್ಕೆ ನಾನು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಗೆದ್ದ ಬಳಿಕ ಮೋದಿಯವರ ಬಳಿ ಹೋಗುತ್ತೇನೆ, ಅವರನ್ನು ಭೇಟಿಯಾಗುತ್ತೇನೆ” ಎಂದರು.

“ಸ್ಪರ್ಧೆಯಿಂದ ಹಿಂಜರಿಯುವ ಮಾತೇ ಇಲ್ಲ”

ತನ್ನ ಪುತ್ರ ಕೆ ಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿರುವ ಈಶ್ವರಪ್ಪ ಅವರ ಮನವೊಲಿಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಲ್ಲಿದ್ದು, ಇಂದು ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದರೆ ಈಶ್ವರಪ್ಪ ತನಗೆ ಬೇರೆ ಕೆಲಸವಿದೆ ಎಂದು ಮನೆಯಿಂದ ತೆರಳಿದ್ದರು ಎಂಬ ಮಾಹಿತಿಯಿದೆ. ಇದಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿರುವ ಈಶ್ವರಪ್ಪ ಅವರು “ಸ್ಪರ್ಧೆಯಿಂದ ಹಿಂಜರಿಯುವ ಮಾತೇ ಇಲ್ಲ” ಎಂದಿದ್ದಾರೆ.

“ಏನೇ ಆದರೂ ಲೋಕಸಭೆ ಚುನಾವಣೆಯಿಂದ ಹಿಂಜರಿಯುವ ಮಾತಿಲ್ಲ. ಸಂಸದೀಯ ಮಂಡಳಿ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ಸಂಧಾನಕ್ಕೆ ಶಾಸಕ ಆರಗ ಜ್ಞಾನೇಂದ್ರರನ್ನು ಕಳುಹಿಸಿದ್ದರು. ಆದರೆ ನಾನು ಸಂಧಾನಕ್ಕೆ ಒಪ್ಪಿಲ್ಲ” ಎಂದ ಈಶ್ವರಪ್ಪ, “ಯಡಿಯೂರಪ್ಪ ಕುಟುಂಬದವರು ಮೋಸ ಮಾಡಿದ್ದಾರೆ” ಎಂದು ಮತ್ತೊಮ್ಮೆ ಪುನರುಚ್ಛರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...