ಈಶ್ವರಪ್ಪನವರೇ, ನಾನೇ ನಿಮ್ಮ ಮುಂದೆ ಬರುವೆ, ನನ್ನ ಕೊಂದು ಬಿಡಿ: ಡಿ ಕೆ ಸುರೇಶ್‌ ಆಹ್ವಾನ

Date:

“ಈಶ್ವರಪ್ಪನವರೇ, ನಾನೇ ನಿಮ್ಮ ಮುಂದೆ ಬಂದು ನಿಲ್ಲುವೆ, ನನ್ನ ಕೊಂದು ಬಿಡಿ. ನಿಮ್ಮ ಆಸೆ ಈಡೇರಿಸಿಕೊಳ್ಳಿ” ಎಂದು ಸಂಸದ ಡಿ ಕೆ ಸುರೇಶ್‌ ಆಹ್ವಾನ ನೀಡಿದರು.

“ಡಿ ಕೆ ಸುರೇಶ್‌ ಅವರಂತೆ ದೇಶ ಒಡೆಯುವ ಹೇಳಿಕೆ ಕೊಡುವವರನ್ನು ಗುಂಡಿಟ್ಟು ಕೊಲ್ಲಬೇಕು” ಎಂದು ಹೇಳಿಕೆ ನೀಡಿದ್ದ ಕೆ ಎಸ್ ಈಶ್ವರಪ್ಪ ಅವರ ಮಾತಿಗೆ ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದರು.

“ನಾವು ಭಾರತ ಒಕ್ಕೂಟದಲ್ಲೇ ಇರುವವರು. ನಾನು ಭಾರತ ವಿರೋಧಿ ಅಲ್ಲ. ಎಲ್ಲ ವಿಷಯಗಳಲ್ಲಿ ಕರ್ನಾಟಕದ ಮೇಲೆ ಆಗುತ್ತಿರುವ ಅನ್ಯಾಯ ತಡೆಯಲಾಗದೆ ಹಾಗೇ ಮಾತನಾಡಿರುವೆ. ಅದಕ್ಕಾಗಿ ನನ್ನನ್ನು ಕೊಲ್ಲಬೇಕು ಎಂದರೆ ಏನು ಮಾಡುವುದು. ಈಶ್ವರಪ್ಪ ಮುಂದೆ ಹೋಗಿ ನಿಲ್ಲುವೆ. ಕೊಂದು ತಮ್ಮ ಆಸೆ ಈಡೇರಿಸಿಕೊಳ್ಳಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಶ್ವರಪ್ಪ ವಿರುದ್ಧ ಈಗಾಗಲೇ ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯಲ್ಲಿ ಎನ್‌ ಎಸ್‌ ಯುಐ ಕಾರ್ಯಕರ್ತರು ದೂರು ಸಲ್ಲಿಸಿದ್ದು, ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಆಯೋಗಕ್ಕೆ ಅಧ್ಯಕ್ಷರಿಲ್ಲ; ಶೋಷಿತ ಹೆಣ್ಣುಮಕ್ಕಳ ನೋವು ಕೇಳುವವರಿಲ್ಲ

ಮತ್ತೊಂದು ದೂರು ದಾಖಲು

ದೇಶವನ್ನು ಇಬ್ಭಾಗ ಮಾಡುವ ಹೇಳಿಕೆ ನೀಡುವ ಡಿ.ಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕೆಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ವಿರುದ್ದ ಮತ್ತೊಂದು ದೂರು ದಾಖಲಾಗಿದೆ.

ಶುಕ್ರವಾರ ದಾವಣಗೆರೆಯ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದೀಗ, ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಆರ್‌ಆರ್‌ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...