ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ವ್ಯರ್ಥ: ಸರ್ಕಾರದ ವಿರುದ್ಧ ಆರ್‌.ಅಶೋಕ್‌ ಆಕ್ರೋಶ

Date:

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ಹೊರಹಾಕಿದರು.

‌ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಬದಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ತಾಯಂದಿರು ಸತ್ತಿದ್ದಾರೆ. ಹತ್ತು ತಿಂಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ” ಎಂದು ಆಗ್ರಹಿಸಿದರು.

“ಕೋವಿಡ್‌ ಸಮಯದಲ್ಲಿ ರಾಹುಲ್‌ ಗಾಂಧಿ, ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ, ಜನರ ಬಳಿಗೆ ಹೋಗಿ ಟವೆಲ್‌ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಸತ್ತಿರುವಾಗ ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಆ ಸಮಾವೇಶದಲ್ಲಿ ರಾಜಕೀಯ ಮಾತಾಡುವುದು ಬಿಟ್ಟರೆ, ಜನರ ಪರವಾಗಿ ಮಾತಾಡಿಲ್ಲ. 28 ಔಷಧಿಗಳು ಕಳಪೆ ಎಂದ ಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ. ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ನೂರು ಸಮಾವೇಶ ಮಾಡಿದರೂ ಶಾಪ ಹಾಗೂ ಪಾಪ ತಟ್ಟಲಿದೆ” ಎಂದು ಕಿಡಿಕಾರಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಸಕರಿಗೆ ಸರ್ಕಾರಿ ಶಾಲೆಗಳ ಉಸ್ತುವಾರಿ ಕೂಡದು; ಶಾಲೆಗಳನ್ನು ಏನು ಮಾಡಲು ಹೊರಟಿದೆ ಸರ್ಕಾರ?

“ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಕಾಂಗ್ರೆಸ್‌ ನಾಯಕರು ಜನರ ಹಿತ ಕಡೆಗಣಿಸಿ ವಿರೋಧ ಪಕ್ಷಗಳನ್ನು ಬಗ್ಗುಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ದೂರಿದರು.

“ಈಗಾಗಲೇ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದೇನೆ. ಈ ಕುರಿತು ಲೋಕಾಯುಕ್ತಕ್ಕೆ ಪತ್ರ ಕೂಡ ಬರೆಯುತ್ತೇನೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೆ ಬಿಡುವುದಿಲ್ಲ. ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಜಿಡಿಪಿಯಲ್ಲಿ ನಂಬರ್‌ 1 ಎನ್ನುವ ಸಿಎಂ ಸಿದ್ದರಾಮಯ್ಯ ಬಾಣಂತಿಯರ ಸಾವಿನಲ್ಲೂ ನಂಬರ್‌ 1 ಎಂದು ಹೇಳಲಿ” ಎಂದು ಲೇಔಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...