ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಕೂಡ ಗುಂಡಿ ಮುಚ್ಚಲಾಗಲಿಲ್ಲ: ಸಿಎಂ ಸಿದ್ದರಾಮಯ್ಯ

Date:

“ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಕೂಡ ಅವರಿಗೆ ಗುಂಡಿ ಮುಚ್ಚಲಾಗಲಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ‘ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ’ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ, “ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ?” ಎಂದು ಕೇಳಿದರು.

“ಉಚ್ಚ ನ್ಯಾಯಾಲಯ ಅವರಿಗೆ ಗುಂಡಿ ಮುಚ್ಚಿಲ್ಲ ಎಂದು ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ’ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ. ರಾಜಕೀಯವನ್ನೂ ಮಾಡಬೇಕಲ್ಲ” ಎಂದರು.

ಇದನ್ನು ಓದಿದ್ದೀರಾ? ಅಂಧ ಮುಸ್ಲಿಂ ವೃದ್ಧನ ಗಡ್ಡಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಕಿಡಿಗೇಡಿಗಳಿಬ್ಬರ ಬಂಧನ

“ಝಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ. ಬಹುತೇಕ ಜನ ವಾಪಸ್ ಬಂದಿದ್ದಾರೆ” ಎಂದರು.

‘ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ’ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...