ಎಲ್ಲವೂ ಸುಖಾಂತ್ಯ, ರಾಜ್ಯಸಭೆ ಸ್ಥಾನ ಕೇಳಿದ್ದೇನೆ: ವಿ. ಸೋಮಣ್ಣ

Date:

ಎಲ್ಲವೂ ಸುಖಾಂತ್ಯವಾಗಿದೆ. ನಮ್ಮ ಒಳ್ಳೇತನ ಒಳ್ಳೇ ನಡವಳಿಕೆಗೆ ಸಹಾಯ ಆಗುತ್ತದೆ. ಇದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್​ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಭೇಟಿ ಮಾಡಿದ ವಿಚಾರವಾಗಿ ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, “ಕೆಲಸ ಮಾಡಿ ಬಳಿಕ ಮುಂದಿನದ್ದನ್ನು ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ” ಎಂದರು.

“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನಗೆ ಮೂರು ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ ಮೂರು ಕ್ಷೇತ್ರಗಳನ್ನು ಕೊಟ್ಟರೂ ಗೆಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ ಎಂದು ಹೇಳಿರುವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಾಶಾಸನಕ್ಕಾಗಿ 5 ಕಿ.ಮೀ. ತೆವಳಿಕೊಂಡು ಬಂದ ಅಜ್ಜಿ; ಸರ್ಕಾರದ ಕ್ಷಮತೆ ಪ್ರಶ್ನಿಸಿದೆ: ಕುಮಾರಸ್ವಾಮಿ ಕಿಡಿ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅನಿವಾರ್ಯವಾಗಿ ಒಪ್ಪಿಕೊಂಡು ಸೋತ ನಂತರ ಸೋಮಣ್ಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಹಲವು ನಾಯಕರ ವಿರುದ್ಧ ಬಹಿರಂಗ ಟೀಕೆಗಳನ್ನೂ ಮಾಡಿದ್ದರು. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...