ಮೋದಿ ಮುಟ್ಟಿದ್ದೆಲ್ಲ ಮಟಾಷ್ : ಕಾಂಗ್ರೆಸ್ ಲೇವಡಿ

Date:

  • ರಾಮದಾಸ್‌, ಈಶ್ವರಪ್ಪ ಹೆಸರು ಉಲ್ಲೇಖಿಸಿ ಟೀಕೆ
  • ಟ್ವೀಟ್ ಮಾಡಿ ಇದೇನು ಕಾಕತಾಳೀಯ ಎಂದ ಕಾಂಗ್ರೆಸ್

ಪ್ರಧಾನಿ ಮೋದಿ ಅವರಿಂದ ರಾಜ್ಯದಲ್ಲಿ ಉದ್ಘಾಟನೆಯಾಗಿದ್ದ ಅನೇಕ ಯೋಜನೆಗಳ ವೈಫಲ್ಯ ಕಂಡಿವೆ. ಅವುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮೋದಿ ಮುಟ್ಟಿದ್ದೆಲ್ಲ ಮಟಾಷ್’ ಎಂದು ಲೇವಡಿ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಯಾಗಿದ್ದೆ ತಡ ಪ್ರಧಾನಿ ಮೋದಿ ಸಾಲು ಸಾಲು ಯೋಜನೆಗಳನ್ನು ಉದ್ಘಾಟಿಸಿದ್ದರು. ಬೆನ್ನಲ್ಲೇ ಆ ಯೋಜನೆಗಳು ಕಳಪೆ ಎಂಬುದು ಬಯಲಾಗಿದ್ದವು.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಮೋದಿ ಉದ್ಘಾಟಿಸಿದ ಹೈವೆ ಮಳೆಯಲ್ಲಿ ಮುಳುಗಿತು. ಟೇಪ್ ಕಟ್ ಮಾಡಿದ ಮೆಟ್ರೋ ನಿಲ್ದಾಣಕ್ಕೆ ನೀರು ನುಗ್ಗಿತು. ರೋಡ್ ಶೋ ಮಾಡಿದ ರಸ್ತೆ ಕಿತ್ತುಬಂತು. ಶಿವಮೊಗ್ಗ ಏರ್ಪೋರ್ಟ್ ಬಾಗಿಲು ಮುಚ್ಚಿತು” ಎಂದು ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರೀ ಯೋಜನೆಗಳಿಗೆ ಸೀಮಿತವಾಗದ ಕಾಂಗ್ರೆಸ್ ಟೀಕೆ ರಾಜ್ಯ ನಾಯಕರನ್ನು ಉಲ್ಲೇಖಿಸಿದೆ. “ಬೆನ್ನಿಗೆ ಗುದ್ದಿದ ರಾಮದಾಸ್ ಮನೆಯಲ್ಲಿ ಕೂರುವಂತಾಯ್ತು. ಕರೆ ಮಾಡಿದ ಈಶ್ವರಪ್ಪರ ರಾಜಕೀಯ ಜೀವನ ಮುಗಿಯಿತು. ಇದೇನು ಕಾಕತಾಳೀಯ” ಎಂದು ಟ್ವೀಟ್ ಮಾಡಿದೆ.

ಪ್ರಧಾನಿ ಮೋದಿ ಉದ್ಘಾಟಿಸಿದ್ದ ಬೆಂಗಳೂರು ಮೈಸೂರು ಹೆದ್ದಾರಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದರ ಕಳಪೆ ಕಾಮಗಾರಿಯಿಂದ ಹಿಡಿದು ಟೋಲ್‌ ಸಂಗ್ರಹದವರೆಗೆ ಜನಾಕ್ರೋಶ ವ್ಯಕ್ತವಾಗಿತ್ತು.

ಇನ್ನೂ ಪೂರ್ಣವಾಗದ ಕೆ ಆರ್‌ ಪುರ – ವೈಟ್‌ಫೀಲ್ಡ್‌ ಮೆಟ್ರೋಗೆ ಸಹ ಮೋದಿ ತರಾತುರಿಯಲ್ಲಿ ಹಸಿರು ಬಾವುಟ ತೋರಿಸಿದ್ದರು. ಅದಾದ ವಾರದ ಬಳಿಕವಷ್ಟೇ ಸಣ್ಣ ಮಳೆಗೆ ನೀರು ಮೆಟ್ರೊ ನಿಲ್ದಾಣಕ್ಕೆ ನುಗ್ಗಿದ್ದವು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಮಪತ್ರಗಳ ತಿರಸ್ಕರಿಸದಂತೆ ಸಿಎಂ ಕಚೇರಿಯಿಂದ ಒತ್ತಡ; ಡಿಕೆಶಿ ಆರೋಪ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜನ್ಮದಿನದಂದು ಪ್ರಧಾನಿ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ್ದರು. ಆದರೆ, ಈವರೆಗೆ ಒಂದೇ ಒಂದು ವಿಮಾನವೂ ಅಲ್ಲಿ ಹಾರಾಟ ನಡೆಸಿಲ್ಲ.

ಈ ವಿಷಯಗಳನ್ನೇ ಕಾಂಗ್ರೆಸ್ ಉಲ್ಲೇಖಿಸಿ, ಮೋದಿ ಅವರ ಕಾಲೆಳೆದಿದೆ. ಕೆಲ ತಿಂಗಳ ಹಿಂದೆಯಷ್ಟೇ ರಾಜ್ಯಕ್ಕೆ ಬಂದಿದ್ದ ಮೋದಿ ಮಾಜಿ ಶಾಸಕ ರಾಮದಾಸ್ ಅವರ ಬೆನ್ನಿಗೆ ಗುದ್ದಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರಾಮದಾಸ್‌ ಅವರಿಗೆ ಟಿಕೆಟ್ ಕೈತಪ್ಪಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...