ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ: ಸಚಿವ ಎಂ ಬಿ ಪಾಟೀಲ್

Date:

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡುತ್ತಿರುವ ಆರೋಪಗಳೆಲ್ಲವೂ ಸತ್ಯ. ಹಾಗಾಗಿಯೇ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೆದರಿಕೊಂಡಿದೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ತಮ್ಮ ಪಕ್ಷದ ಪ್ರಮುಖ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಆರೋಪ ಮಾಡುತ್ತಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಸಚಿವ ಎಂ.ಬಿ.ಪಾಟೀಲ್, ಯತ್ನಾಳ್ ಅವರು ನಮ್ಮ ಸರ್ಕಾರದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿಲ್ಲ. ಕಾಂಗ್ರೆಸ್‌ಗೂ ಯತ್ನಾಳ್‌ಗೂ ಸಂಬಂಧವಿಲ್ಲ. ಆದರೆ ಕಳೆದ ಐದೂವರೆ ವರ್ಷಗಳಿಂದ ಯತ್ನಾಳ್ ಅವರು ಒಂದೊಂದೇ ಮಾತಿನ ಬಾಂಬ್ ಹಾಕುತ್ತಲೇ ಇದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ಬಿಜೆಪಿಯವರಿಗೆ ಧೈರ್ಯವಿಲ್ಲ. ಯಾಕೆಂದರೆ ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ. ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ ಎಂದು ತಿಳಿಸಿದರು.

“ನಿನ್ನೆ ಕೂಡ ಬಿಜೆಪಿಯವರು ಕೋರ್ ಕಮಿಟಿ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದು ಬಿಜೆಪಿಯ ದೌರ್ಬಲ್ಯ. ಯತ್ನಾಳ್ ಅವರು ಬಿಜೆಪಿಯೊಳಗಡೆ ನಡೆಯುತ್ತಿರುವ ಬೆಳವಣಿಗೆಗಳನ್ನು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಅವರು ಮಾಡಿದ ಆರೋಪಗಳೆಲ್ಲವೂ ಸತ್ಯವಿರಬಹುದು. ಹಾಗಾಗಿಯೇ ಬಿಜೆಪಿಯವರು ಹೆದರಿಕೊಂಡಿದ್ದಾರೆ. ಇಷ್ಟೆಲ್ಲ ಬೆಳವಣಿಗೆ ನಡೆಯುತ್ತಿದ್ದರೂ ಅವರ ವಿರುದ್ಧ ಬಿಜೆಪಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಎಂ ಬಿ ಪಾಟೀಲ್ ಪ್ರಶ್ನಿಸಿದ್ದಾರೆ.

Basana Gowda Patil Yatnal

“ಬಿಜೆಪಿಯವರ ದೌರ್ಬಲ್ಯವೆಲ್ಲವೂ ಯತ್ನಾಳ್ ಅವರ ಬಳಿಯಲ್ಲಿರಬಹುದು. ಅದು ನನಗೆ ಗೊತ್ತಿಲ್ಲ. ಯತ್ನಾಳ್ ಅವರು ಕಾಂಗ್ರೆಸ್ ಏಜೆಂಟ್ ಅಲ್ಲ. ಒಂದು ವೇಳೆ ಆಗಿದ್ದಿದ್ದರೆ ಅದಕ್ಕೂ ಕ್ರಮ ಕೈಗೊಳ್ಳಬಹುದಲ್ಲವೇ? ಕಾಂಗ್ರೆಸ್‌ಗೂ ಯತ್ನಾಳ್‌ಗೂ ಯಾವುದೇ ಸಂಬಂಧವಿಲ್ಲ” ಎಂದು ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.

“ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಗಳ ಬಗ್ಗೆ ಈಗಾಗಲೇ ಸರ್ಕಾರ ತನಿಖೆ ನಡೆಸಲು ಆದೇಶಿಸಿದೆ. ನಮ್ಮ ಸರ್ಕಾರ ಸುಮ್ಮನೆ ಕೂತಿಲ್ಲ. ಬಿಜೆಪಿಯ ಅವಧಿಯಲ್ಲಿ ಏನೇನೆಲ್ಲ ಹಗರಣಗಳು ಆಗಿದ್ದವೋ ಅವೆಲ್ಲವನ್ನೂ ಕಾಂಗ್ರೆಸ್ ಸರ್ಕಾರ ಬಯಲಿಗೆಳೆಯಲಿದೆ. ತನಿಖೆಯಲ್ಲಿ ಎಲ್ಲವೂ ಸತ್ಯಾಂಶ ತಿಳಿದುಬರಲಿದೆ” ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

“ಹೆಚ್ಚುವರಿ ಡಿಸಿಎಂ ಹುದ್ದೆಗಳ ಬಗ್ಗೆ ಬಹಿರಂಗವಾಗಿ ಏನೂ ಹೇಳುವುದಿಲ್ಲ. ಹೈಕಮಾಂಡ್ ಮುಂದೆ ನಮ್ಮ ಅಭಿಪ್ರಾಯ ಹೇಳುತ್ತೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಕೂಡ ಅಭಿಪ್ರಾಯ ಹೇಳುತ್ತೇವೆ” ಎಂದು ಇದೇ ವೇಳೆ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...