ಯಡಿಯೂರಪ್ಪ ಹೇಳಿರುವುದೆಲ್ಲ ಹಸಿ ಸುಳ್ಳು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ‘ಗೃಹಲಕ್ಷ್ಮಿ ಯೋಜನೆ ಪ್ರತಿ ಅರ್ಹ ಕುಟುಂಬಕ್ಕೆ ತಲುಪಿಸಲು ಸರ್ಕಾರ ಬದ್ಧ’
  • ‘ಕೆಲವು ಕಾರಣಗಳಿಂದಾಗಿ 9.44 ಲಕ್ಷ ಮಹಿಳೆಯರಿಗೆ ಹಣ ಜಮೆಯಾಗಿಲ್ಲ’

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದ್ದು. ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ ಎಂಬುದು ಮಹಾ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಅಕ್ಟೋಬರ್‌ ತಿಂಗಳಲ್ಲಿ ಯಶಸ್ವಿಯಾಗಿ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಫಲಾನುಭವಿಗಳ ಆಧಾರ್‌ ಸಂಖ್ಯೆ ಬ್ಯಾಂಕ್‌ ಖಾತೆಗೆ ಜೋಡಣೆಯಾಗದಿರುವುದು, ಅರ್ಜಿದಾರರು ಹೆಸರು ಮತ್ತು ವಿಳಾಸದಲ್ಲಿನ ವ್ಯತ್ಯಾಸ ಮುಂತಾದ ಕಾರಣಗಳಿಂದಾಗಿ 9.44 ಲಕ್ಷ ಮಹಿಳೆಯರಿಗೆ ಹಣ ಜಮೆಯಾಗಿರುವುದಿಲ್ಲ” ಎಂದಿದ್ದಾರೆ.

“ಮೊದಲ ತಿಂಗಳ ಕಂತಿನ ಹಣ ಶೇ.88 ರಷ್ಟು ನೋಂದಣಿಯಾದ ಫಲಾನುಭವಿಗಳ ಖಾತೆಗೆ ಜಮೆ ಆಗಿರುತ್ತದೆ. ಈಗಾಗಲೇ ಜಮೆ ಆಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ದೋಷ ಸರಿಪಡಿಸುವ ಕಾರ್ಯವನ್ನು ಇಲಾಖೆಯು ಕೈಗೊಂಡಿದ್ದು, ಬರುವ ತಿಂಗಳು ಶೇ.100 ಅರ್ಜಿದಾರ ಯಜಮಾನಿಯರ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ದೇಶದಲ್ಲೇ ಅತಿ ದೊಡ್ಡ ಮೊತ್ತದ ಮಹಿಳಾ ಸಬಲೀಕರಣ ಯೋಜನೆಯನ್ನು ಯಶಸ್ವಿಯಾಗಿ ಪ್ರತಿ ಮನೆಗೆ ತಲುಪಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್‌ ದರ ಹೆಚ್ಚಳವಾಗಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಹಿಂದಿನ ಬಿಜೆಪಿ ಸರ್ಕಾರವನ್ನು ಕುರಿತು ಟೀಕೆ ಮಾಡಿದಂತಿದೆ. ಕೆಇಆರ್‌ಸಿ ಮಾರ್ಚ್‌ ತಿಂಗಳಿನಲ್ಲಿ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಮುಂದೆ ಮಂಡಿಸಿತ್ತು, ಈ ಪ್ರಸ್ತಾವನೆಗೆ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದರಿಂದ ಮೇ 12 ಅಂದರೆ ಚುನಾವಣೆಯ ಫಲಿತಾಂಶ ಬರುವ ಹಿಂದಿನ ದಿನವೇ ಹೊಸ ದರವು ಏಪ್ರಿಲ್‌ 1 ರಿಂದ ಪೂರ್ವಾನ್ವಯ ಆಗುವಂತೆ ಕೆಇಆರ್‌ಸಿ ಜಾರಿಗೊಳಿಸಿತು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ: ‌ಡಿಸಿಎಂ ಡಿಕೆ ಶಿವಕುಮಾರ್

“ವಿದ್ಯುತ್‌ ದರ ಏರಿಕೆ ಬಗ್ಗೆ ಇನ್ನೊಂದು ಸ್ಪಷ್ಟನೆಯನ್ನೂ ನಾನು ನೀಡುತ್ತಿದ್ದೇನೆ. ಈ ಹಿಂದೆ ದರ ನಿಗದಿ ಸಂಬಂಧ ನಾಲ್ಕು ಸ್ಲ್ಯಾಬ್‌ ಗಳು ಇದ್ದವು, ಈಗ ಅದನ್ನು 2 ಸ್ಲ್ಯಾಬ್‌ ಗಳಿಗೆ ಇಳಿಕೆ ಮಾಡಲಾಗಿದೆ. 0 ಇಂದ 50 ಯುನಿಟ್‌ ವರೆಗೆ ರೂ.4.15, 50 ರಿಂದ 100 ಯುನಿಟ್‌ ವರೆಗೆ ರೂ.5.60, 100 ರಿಂದ 200 ಯುನಿಟ್‌ ವರೆಗೆ ರೂ.7.15 ಹಾಗೂ 250 ಯುನಿಟ್‌ ಗಳಿಗಿಂತ ಹೆಚ್ಚಿನ ಬಳಕೆಗೆ ಯುನಿಟ್‌ ಗೆ ರೂ.8.20 ವಿಧಿಸಲಾಗುತ್ತಿತ್ತು. ಇದನ್ನು ಪರಿಷ್ಕರಿಸಿ ಈಗ ಶೂನ್ಯದಿಂದ 100 ಯುನಿಟ್‌ ಗೆ ರೂ.4.75 ಹಾಗೂ 101 ಗಿಂತ ಮೇಲ್ಪಟ್ಟು ಎಷ್ಟೇ ವಿದ್ಯುತ್‌ ಬಳಕೆ ಮಾಡಿದರೂ ಯುನಿಟ್‌ ಗೆ ರೂ.7 ದರ ವಿಧಿಸಲಾಗುತ್ತಿದೆ. ನಮ್ಮ ಸರ್ಕಾರವು ಬಳಕೆದಾರರ ಹಿಂದಿನ ಒಂದು ವರ್ಷದ ಸರಾಸರಿ ವಿದ್ಯುತ್‌ ಬಳಕೆ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅದಕ್ಕೆ ಶೇ.10 ಹೆಚ್ಚುವರಿಯಾಗಿ ಸೇರಿಸಿ ಗರಿಷ್ಠ 200 ಯುನಿಟ್‌ ವರೆಗೆ ಉಚಿತ್‌ ವಿದ್ಯುತ್‌ ನೀಡುತ್ತಿರುವುದರಿಂದ ನಿಮ್ಮದೇ ಸರ್ಕಾರ ದರ ಏರಿಕೆ ಮಾಡಿದ್ದರೂ ಆ ಹೊರೆ ನಾಡಿನ 1.58 ಕೋಟಿ ನೋಂದಾಯಿತ ಕುಟುಂಬಗಳನ್ನು ಬಾಧಿಸದಂತೆ ತಡೆದಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ.

“ವಿದ್ಯುತ್‌ ಕೊರತೆಯಿದ್ದು, ಇದನ್ನು ನೀಗಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ ಎಂದು ಯಡಿಯೂರಪ್ಪ ಅವರು ಆರೋಪ ಮಾಡಿದ್ದಾರೆ. ರೈತರಿಗೆ ಮೂರು ಪಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಉತ್ತರ ಪ್ರದೇಶದಿಂದ 300 ಮೆ.ವ್ಯಾ ಮತ್ತು ಪಂಜಾಬ್‌ ನಿಂದ 600 ಮೆ.ವ್ಯಾ ವಿದ್ಯುತ್‌ ಖರೀದಿಗೆ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11 ಜಾರಿ, ರಾಜ್ಯದ ಎಲ್ಲಾ ವಿದ್ಯುತ್‌ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್‌ ಉತ್ಪಾದಿಸಿ ರಾಜ್ಯದ ಗ್ರಿಡ್‌ ಗೆ ಪೂರೈಸುವಂತೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.

“2013ರಲ್ಲಿ ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದಾಗ ರಾಜ್ಯದ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯವು 14,825 ಮೆ.ವ್ಯಾ ಇತ್ತು, 2018ರ ವೇಳೆಗೆ ಇದನ್ನು 26,025 ಮೆ.ವ್ಯಾ ಗೆ ಏರಿಕೆ ಮಾಡಿದ್ದೆವು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಾದಿಯಾಗಿ ಸಚಿವರು, ಶಾಸಕರು ಎಲ್ಲರೂ 40% ಕಮಿಷನ್‌ ಹಿಂದೆ ಬಿದ್ದಿದ್ದರಿಂದ ಉತ್ಪಾದನಾ ಸಾಮರ್ಥ್ಯ ಹೆಚ್ಚಳವಾಗುವ ಬದಲಿಗೆ, ಹಿಂದಿಗಿಂತಲೂ ಕಡಿಮೆಯಾಗಿತ್ತು” ಎಂದಿದ್ದಾರೆ.

“ಬರ ಪರಿಸ್ಥಿತಿಯ ಕುರಿತು ನಮ್ಮ ಸರ್ಕಾರದ ಸಚಿವರುಗಳಾದ ಎನ್.ಚಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ ಮತ್ತು ಕೃಷ್ಣಬೈರೇಗೌಡ ಅವರು ಕೇಂದ್ರದ ಕೃಷಿ ಕಾರ್ಯದರ್ಶಿಯವರನ್ನು ಪ್ರತ್ಯೇಕವಾಗಿ ಭೇಟಿಮಾಡಿ ರಾಜ್ಯದ ಬರಪರಿಸ್ಥಿತಿಯ ಮಾಹಿತಿಯನ್ನು ನೀಡಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯಾಗಲೇ, ಅನುದಾನವಾಗಲೀ ಯಾವುದು ಬಂದಿಲ್ಲ. ಎನ್.ಡಿ.ಆರ್.ಎಫ್‌ ನಿಯಮಾನುಸಾರ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದ ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದ್ದು, ಈ ಸಂಬಂಧ ತಾವೇ ಸರ್ವಪಕ್ಷ ನಿಯೋಗ ಕೊಂಡೊಯ್ಯುವುದಾದರೆ ನಾನು ನಿಮ್ಮ ಜೊತೆ ಬರುವುದಾಗಿ ಹೇಳಿದ್ದೆ. ಈಗಲೂ ಕಾಲ ಮಿಂಚಿಲ್ಲ ತಾವು ರಾಜ್ಯದಲ್ಲಿ ಬರ ಅಧ್ಯಯನಕ್ಕಾಗಿ ಪ್ರವಾಸ ಹೋಗುವ ಬದಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯುವುದೇ ಸೂಕ್ತ ಮತ್ತು ಈ ಹೊತ್ತಿನ ಅಗತ್ಯ ನಿರ್ಧಾರವಾಗಿದೆ ಎಂಬುದನ್ನು ಮತ್ತೊಮ್ಮೆ ತಿಳಿಸಬಯಸುತ್ತೇನೆ” ಎಂದು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಪ್ರತ್ಯುತ್ತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...