ಸದನದಿಂದ ರಾಹುಲ್ ಉಚ್ಛಾಟನೆ ನೋಟಿಸ್; ರೈತರ ಹಿತ ಬಿಟ್ಟು ಒಂದು ಹೆಜ್ಜೆಯೂ ಹಿಂದೆ ಸರಿಯಲ್ಲ ಎಂದ ಗಾಂಧಿ

Date:

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದರು ಉಚ್ಛಾಟನೆ ಪ್ರಸ್ತಾವ ಮಂಡಿಸಿದ್ದಾರೆ. ಬಿಜೆಪಿಗರ ಮಲಸತ್ತಿನ ನೋಟಿಸ್‌ಗಳಿಂದ ನಾನು ಕುಗ್ಗುವುದಿಲ್ಲ. ಭಾರತ-ಅಮೆರಿಕ ವಾಣಿಜ್ಯ ಒಪ್ಪಂದವು ರೈತ ಹಿಕ್ಕೆ ವಿರುದ್ಧವಾಗಿದೆ. ರೈತ ರಕ್ಷಣೆಗಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.

ಗುರುವಾರ, ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. “ಮೋದಿ ಸರ್ಕಾರವು ಅಮೆರಿಕಗೆ ಸಂಪೂರ್ಣ ಶರಣಾಗಿದೆ. ಭಾರತದ ಶಕ್ತಿ, ಸುರಕ್ಷತೆಯನ್ನು ಅಮೆರಿಕದ ಕೈಗೆ ಒಪ್ಪಿಸಲಾಗಿದೆ” ಎಂದು ಆರೋಪಿಸಿದರು.

ವಿಶೇಷವಾಗಿ ಕೃಷಿ ಕ್ಷೇತ್ರದ ಕುರಿತು ಮಾತನಾಡಿದ ರಾಹುಲ್ ಗಾಂಧಿ, “ಭಾರತ-ಅಮೆರಿಕ ಒಪ್ಪಂದದಿಂದ ಹತ್ತಿ, ಸೋಯಾಬೀನ್, ಮೆಕ್ಕೆಜೋಳ, ಹಣ್ಣುಗಳು ಹಾಗೂ ಕಾಶ್ಮೀರಿ ಸೇಬು ಬೆಳೆಗಾರರು ಭಾರೀ ನಷ್ಟ ಅನುಭವಿಸುತ್ತಾರೆ. ಭಾರತದ ಆಹಾರ ಸುರಕ್ಷತೆಯನ್ನು ಅಪಾಯಕ್ಕೆ ತಳ್ಳುವ ಒಪ್ಪಂದವಿದು. ರೈತರ ಜೀವನಾಧಾರವನ್ನೇ ಕಿತ್ತುಕೊಳ್ಳುತ್ತದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಅವರ ಮೋದಿ ಸರ್ಕಾರವು ಶರಣಾಗಿದೆ ಎಂದು ಆರೋಪಿಸಿದ್ದಕಾಗಿ, ಅವರ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಉಚ್ಛಾಟನೆ ಪ್ರಸ್ತಾವ ಸಲ್ಲಿಸಿದ್ದಾರೆ. ‘ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸಿ, ಜೀವನಾವಧಿವರೆಗೂ ಅವರು ಚುನಾವಣೆಗೆ ಸ್ಪರ್ಧಿಸಲು ಅಯೋಗ್ಯರೆಂದು ಘೋಷಿಸಬೇಕು. ರಾಹುಲ್ ಅವರು ದೇಶ ವಿರೋಧಿ ಶಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ. ಸಂಸತ್ತಿನ ವೇದಿಕೆಯನ್ನು ಬಳಸಿಕೊಂಡು ಸುಳ್ಳುಗಳನ್ನು ಹರಡುತ್ತಿದ್ದಾರೆ. ಇದು ಖಾಸಗಿ ನಿಲುವಳಿಗಿಂತ ಮಿಗಿಲಾಗಿ, ಸಬ್‌ಸ್ಟ್ಯಾಂಟಿವ್ ಮೋಷನ್ ಆಗಿದೆ” ಎಂದು ಹೇಳಿಕೊಂಡಿದ್ದಾರೆ.

ಬಿಜೆಪಿ ಸಂಸದ ದುಬೆ ಅವರ ನಿಲುವಳಿಗೆ ರಾಹುಲ್‌ ಗಾಂಧಿ ತಕ್ಷಣದ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿರುವ ಅವರು, “FIR ದಾಖಲಾಗಲಿ, ಮೊಕದ್ದಮೆ ದಾಖಲಾಗಲಿ ಅಥವಾ ಖಾಸಗಿ ನಿಲುವಳಿ ತರಲಿ — ನಾನು ರೈತರಿಗಾಗಿ ಹೋರಾಡುತ್ತೇನೆ. ನನ್ನ ವಿರುದ್ಧ ಏನೇ ಮಾಡಿದರೂ ರೈತರ ಹಿತ ಬಿಟ್ಟು ಒಂದಿಂಚು ಕೂಡ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರ ಜೀವನಾಧಾರವನ್ನು ಕಸಿದುಕೊಳ್ಳುವ ಯಾವುದೇ ವಾಣಿಜ್ಯ ಒಪ್ಪಂದವನ್ನೂ ಒಪ್ಪಿಕೊಳ್ಳಲಾಗದು. ಮೋದಿ ಸರ್ಕಾರವು ರೈತ ವಿರೋಧಿಯಾಗಿದೆ. ಅನ್ನದಾತರ ಹಿತಾಸಕ್ತಿಯನ್ನು ರಕ್ಷಿಸಲು ಯಾವುದೇ ಒತ್ತಡಕ್ಕೂ ಒಗ್ಗದೆ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ರಾಹುಲ್‌ ಹೇಳಿಕೆಗೆ ಕಾಂಗ್ರೆಸ್ಸಿಗರು ಬಹುಪರಾಕ್ ಹೇಳಿದ್ದು, ರಾಹುಲ್ ನಿಲುವು ರೈತರ ಹೋರಾಟದ ಬಲವಾದ ಸಂದೇಶವೆಂದು ಬಣ್ಣಿಸಿದ್ದಾರೆ. “ಭಾರತ-ಅಮೆರಿಕ ಒಪ್ಪಂದದಿಂದ ರೈತರಿಗೆ ಆಗುವ ನಷ್ಟವನ್ನು ಮರೆಮಾಚಲು ಬಿಜೆಪಿ ಈ ರೀತಿಯ ಕ್ರಮ ಕೈಗೊಳ್ಳುತ್ತಿದೆ. ರಾಹುಲ್ ಗಾಂಧಿ ಸಂಸತ್ತಿನಲ್ಲಿ ತಮ್ಮ ಹೋರಾಟವನ್ನು ಮುಂದುವರೆಸುತ್ತಾರೆ” ಎಂದು ಕಾಂಗ್ರೆಸ್‌ ಹೇಳಿದೆ.

ಬಿಜೆಪಿ ಸಂಸದ ದುಬೆ ಅವರ ನಿಲುವಳಿ ಕುರಿತು ಮಾತನಾಡಿರುವ  ಬಿಜೆಪಿ  ನಾಯಕ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ಖಾಸಗಿ ನಿಲುವಳಿಯನ್ನು ಸದನದ ಸವಲತ್ತು ಸಮಿತಿ ಅಥವಾ ನೀತಿ ಸಮಿತಿಗೆ ಕಳುಹಿಸಬೇಕೆ, ಇಲ್ಲ ನೇರವಾಗಿ ಲೋಕಸಭೆಗೆ ತರಬೇಕೆ ಎಂಬುದರ ಕುರಿತು ಸ್ಪೀಕರ್ ಅವರೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುತ್ತದೆ. ಸದ್ಯ, ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...