ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Date:

ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್​ ಕೊನೆ ಕ್ಷಣದಲ್ಲಿ ವೀರಪ್ಪ ಮೊಯ್ಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯ್ಲಿ, ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ರಕ್ಷಾ ರಾಮಯ್ಯಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, “ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆ. ಆದರೆ, ಹೈಕಮಾಂಡ್ ಸ್ಪರ್ಧೆಯಿಂದ ಹಿಂದೆ ಸರಿಯಲು ಮನವಿ ಮಾಡಿತ್ತು. ಹೈಕಮಾಂಡ್​​ಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ನನ್ನ ಬೆಂಬಲಿಗರು ನಮ್ಮ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲಿಸಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ವೀರಪ್ಪ ಮೊಯ್ಲಿ, ಅಂತಿಮವಾಗಿ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ಘೋಷಿಸಿದರು.

1972ರಿಂದ ರಾಜಕೀಯದಲ್ಲಿರುವ ವೀರಪ್ಪ ಮೊಯ್ಲಿಯವರು, 1992ರಿಂದ 1994ರವರೆಗೆ ಕರ್ನಾಟಕದ 13ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರದ ಸಚಿವರಾಗಿಯೂ ಕೆಲಸ ಮಾಡಿದ್ದರು.

ಇದನ್ನು ಓದಿದ್ದೀರಾ? ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರು ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು

ರಾಜಕಾರಣದ ಜೊತೆಗೆ ಸಾಹಿತ್ಯದಲ್ಲೂ ಗುರುತಿಸಿಕೊಂಡಿರುವ ಮೊಯ್ಲಿ, ಹಲವು ಕೃತಿಗಳನ್ನು ಕೂಡ ಬರೆದಿದ್ದಾರೆ. 2020ರಲ್ಲಿ ಶ್ರೀ ಬಾಹುಬಲಿ ಅಹಿಂಸಾದಿಗ್ವಿಜಯ ಮಹಾಕಾವ್ಯಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೂ ಕೂಡ ಭಾಜನರಾಗಿದ್ದರು. ಇವರ ಪತ್ನಿ ಮಾಲತಿ ಮೊಯ್ಲಿ ಕೂಡ ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...