ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಮಾಜಿ ಸಚಿವ ಸುಧಾಕರ್‌

Date:

  • ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು
  • ಕ್ರಿಮಿನಲ್‌, ಮಾನಹಾನಿ ಪ್ರಕರಣ ದಾಖಲಿಸಲು ಅರ್ಜಿ

ತನ್ನ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಡಾ. ಕೆ. ಸುಧಾಕರ್‌ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ತನ್ನ ವಿರುದ್ಧ ಸಾರ್ವಜನಿಕವಾಗಿ ಇಲ್ಲಸಲ್ಲದ, ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಮಾನಹಾನಿ ಮಾಡುತ್ತಿರುವ ಬಗ್ಗೆ ಪ್ರದೀಪ್‌ ಈಶ್ವರ್‌ ವಿರುದ್ದ ಕ್ರಿಮಿನಲ್‌ ಮಾನಹಾನಿ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವುದಾಗಿ ವರದಿಯಾಗಿದೆ. ಅರ್ಜಿಯ ವಿಚಾರಣೆ ಇನ್ನಷ್ಟೇ ನಿಗದಿಯಾಗಬೇಕಿದೆ.

ಚಿಕ್ಕಬಳ್ಳಾಪುರದ ಶಾಸಕರು, ಪದೇಪದೇ ಸಾರ್ವಜನಿಕವಾಗಿ ತನ್ನ ವಿರುದ್ಧ ಹಗೆತನದಿಂದ ಕೂಡಿದ, ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ದಂಗೆ ಎಬ್ಬಿಸಿ ತನ್ನ ಬದುಕು, ವ್ಯಕ್ತಿತ್ವಕ್ಕೆ ಹಾನಿ ಮಾಡುವ ಉದ್ದೇಶ ಹೊಂದಿದ್ದಾರೆ. ಇದು ಕಾನೂನಿನ ಪ್ರಕಾರ ಅಪರಾಧ ಎಂದು ಸುಧಾಕರ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧಾರರಹಿತ ಮತ್ತು ದೋಷಪೂರಿತ ಆರೋಪಗಳನ್ನು ಮಾಡಿ, ದುರುದ್ದೇಶಪೂರ್ವಕವಾಗಿ ತಮ್ಮ ವ್ಯಕ್ತಿತ್ವವನ್ನು ಧ್ವಂಸ ಮಾಡುತ್ತಿದ್ದಾರೆ. ತಮ್ಮ ಶೈಕ್ಷಣಿಕ ಅರ್ಹತೆ, ಬೌದ್ಧಿಕ ಸಾಮರ್ಥ್ಯದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ. ತನ್ನನ್ನು ಭ್ರಷ್ಟ ಎಂದು ಸಾರ್ವಜನಿಕರೆದುರೇ ಜರೆದಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ ಎಂದು ಪ್ರದೀಪ್ ಈಶ್ವರ್ ಅವರ ಹಲವು ಆರೋಪಗಳನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಟಾಪಟಿ ಬಡ ರೈತರ ಬೆನ್ನಿಗೆ ಚೂರಿಯಾಗದಿರಲಿ

ಪ್ರದೀಪ್‌ ಈಶ್ವರ್‌ ಅವರು ತಮ್ಮ ವಿರುದ್ಧ ದ್ವೇಷಕಾರುತ್ತಿರುವುದಲ್ಲದೇ, ಯುವಜನರ ಮನಸ್ಸನ್ನು ಹಾಳು ಮಾಡುತ್ತಿದ್ದಾರೆ. ಇದು ದುರುದ್ದೇಶಪೂರ್ವಕ ಮತ್ತು ಇದರ ಹಿಂದೆ ತನ್ನ ವರ್ಚಸ್ಸಿಗೆ ಧಕ್ಕೆ ಮಾಡಿ, ರಾಜಕೀಯ ಲಾಭ ಪಡೆಯುವ ಉದ್ದೇಶ ಇದೆ ಎಂದು ಆಕ್ಷೇಪಿಸಿದ್ದಾರೆ.

ಪ್ರದೀಪ್‌ ಈಶ್ವರ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 36, 37, 109, 112, 113, 114, 117, 120ಬಿ, 388, 500, 501. 504, 505, 506 ಅಡಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಮಾಜಿ ಸಚಿವ ಡಾ.ಕೆ. ಸುಧಾಕರ್‌ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...