ಉಪರಾಷ್ಟ್ರಪತಿ ಚುನಾವಣೆ: ನಿವೃತ್ತ ನ್ಯಾ. ಸುದರ್ಶನ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

Date:

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿಯಾ ಒಕ್ಕೂಟವು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಗೋವಾದ ಮೊದಲ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ತಮ್ಮ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ರೆಡ್ಡಿ ಅವರು ಎನ್‌ಡಿಎ ಒಕ್ಕೂಟದ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಮತ್ತು ಬಿಜೆಪಿಯ ಹಿರಿಯ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರನ್ನು ಚುನಾವಣೆಯಲ್ಲಿ ಎದುರಿಸಲಿದ್ದಾರೆ.

ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆಯಲ್ಲಿ ಜನಿಸಿದ ರೆಡ್ಡಿ ಅವರು 1971ರಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದರು. 1995ರಲ್ಲಿ ಅವರು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.

ಇದನ್ನು ಓದಿದ್ದೀರಾ? ಉಪರಾಷ್ಟ್ರಪತಿ ರಾಜೀನಾಮೆಗೆ ಕಾರಣಗಳೇನು?; ಮೋದಿ-ಶಾ v/s ಧನಕರ್ – ಗುದ್ದಾಟವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2005ರಲ್ಲಿ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದರು. 2007ರ ಜನವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು. 2011ರ ಜುಲೈನಲ್ಲಿ ನಿವೃತ್ತರಾದರು. ಬಳಿಕ ಗೋವಾದ ಮೊದಲ ಲೋಕಾಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಇಂಡಿಯಾ ಒಕ್ಕೂಟವು ಹಲವು ಸುತ್ತಿನ ಚರ್ಚೆ ನಡೆಸಿದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಧಾರವನ್ನು ಘೋಷಿಸಿದ್ದಾರೆ. ಮಾಜಿ ಇಸ್ರೋ ವಿಜ್ಞಾನಿ ಮೈಲ್ಸ್ವಾಮಿ ಅಣ್ಣಾದೊರೈ ಮತ್ತು ಮಹಾತ್ಮ ಗಾಂಧಿಯವರ ಮೊಮ್ಮಗ ಮತ್ತು ಲೇಖಕ ತುಷಾರ್ ಗಾಂಧಿ ಅವರ ಹೆಸರುಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...