ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್: ನಾಳೆ ಕಾಂಗ್ರೆಸ್ ಸೇರ್ಪಡೆ

Date:

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಸೋಮವಾರ ಬಿಜೆಪಿ ತೊರೆದಿದ್ದು ನಾಳೆ (ಎಪ್ರಿಲ್ 9) ಕಾಂಗ್ರೆಸ್‌ಗೆ ಸೇರುವುದಾಗಿ ಘೋಷಿಸಿದ್ದಾರೆ. ಬಿರೇಂದರ್ ಸಿಂಗ್ ಅವರ ಪುತ್ರ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದಾರೆ.

ಇನ್ನು ಬಿರೇಂದರ್ ಸಿಂಗ್ ಅವರ ಪತ್ನಿ ಹಾಗೂ ಹರಿಯಾಣದ ಬಿಜೆಪಿ ಮಾಜಿ ಶಾಸಕ ಪ್ರೇಮ್ ಲತಾ ಕೂಡ ಬಿಜೆಪಿ ತೊರೆದಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿರೇಂದರ್ ಸಿಂಗ್, “ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನನ್ನ ರಾಜೀನಾಮೆಯನ್ನು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರಿಗೆ ಕಳುಹಿಸಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಜಾರ್ಖಂಡ್ ಬಿಜೆಪಿ ಶಾಸಕ ಜೈ ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ

ಹಾಗೆಯೇ, ” 2014-2019 ರ ಅವಧಿಯಲ್ಲಿ ಶಾಸಕಿಯಾಗಿದ್ದ ನನ್ನ ಪತ್ನಿ ಪ್ರೇಮಲತಾ ಕೂಡ ರಾಜೀನಾಮೆ ನೀಡಿದ್ದಾರೆ. ನಾಳೆ ನಾವಿಬ್ಬರೂ ಕಾಂಗ್ರೆಸ್ ಸೇರುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿರೇಂದರ್ ಸಿಂಗ್ ಅವರು ಸುಮಾರು 10 ವರ್ಷಗಳ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ಅವರು 2014ರಲ್ಲಿ ಬಿಜೆಪಿ ಸೇರಿದ್ದು ಈಗ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್‌ಗೆ ಸೇರಲಿದ್ದಾರೆ. ಮಾರ್ಚ್ 10 ರಂದು ಅವರ ಮಗ ಕಾಂಗ್ರೆಸ್ ಸೇರಿದ ನಂತರ, ಬಿರೇಂದರ್ ಸಿಂಗ್ ಕೂಡಾ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...