ಭಾರತದ ಪ್ರಧಾನಿ ‘ಕೊನೆಯ ಪತ್ರಿಕಾಗೋಷ್ಠಿ’ ನಡೆಸಿ ಇಂದಿಗೆ ಬರೋಬ್ಬರಿ 10 ವರ್ಷ

Date:

ಭಾರತದ ಪ್ರಧಾನಿಯೊಬ್ಬರು ‘ಕೊನೆಯ ಪತ್ರಿಕಾಗೋಷ್ಠಿ’ ನಡೆಸಿ ಇಂದಿಗೆ ಸರಿಯಾಗಿ ಒಂದು ದಶಕ ಕಳೆದಿದೆ. ಅಂದರೆ, 10 ವರ್ಷಗಳ ಹಿಂದೆ ಜನವರಿ 3ರಂದು ಪ್ರಧಾನಿ ಕಡೆಯ ಪ್ರೆಸ್‌ಮೀಟ್‌ ನಡೆಸಿದ್ದರು. ಅದು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಎಂದು ಪತ್ರಕರ್ತ ಪಂಕಜ್ ಪಚೌರಿ ಟ್ವಿಟರ್‌ನಲ್ಲಿ ಗಮನ ಸೆಳೆದಿದ್ದಾರೆ.

“ಭಾರತದ ಪ್ರಧಾನಿಯ ಕೊನೆಯ ಪತ್ರಿಕಾಗೋಷ್ಠಿ ಸರಿಯಾಗಿ 10 ವರ್ಷಗಳ ಹಿಂದೆ ನಡೆದಿದೆ. ಅಂದು, 100ಕ್ಕೂ ಹೆಚ್ಚು ಪತ್ರಕರ್ತರಿದ್ದ ಪ್ರೆಸ್‌ಮೀಟ್‌ನಲ್ಲಿ 62 ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದರು” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪಚೌರಿ ಪ್ರಸ್ತಾಪಿಸಿದಂತೆ, ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು 100ಕ್ಕೂ ಹೆಚ್ಚು ಪತ್ರಕರ್ತರಿಗೆ ಆತಿಥ್ಯ ನೀಡಿದ್ದರು. ಪತ್ರಕರ್ತರು ಸುಮಾರು 62 ಪ್ರಶ್ನೆಗಳನ್ನು ಕೇಳಿದ್ದರು. ಆಗ, ಪಚೌರಿ ಸಿಂಗ್ ಅವರು ಮನಮೋಹನ್ ಸಿಂಗ್ ಅವರ ಮಾಹಿತಿ ಮತ್ತು ಸಂವಹನ ಸಲಹೆಗಾರರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014ರಲ್ಲಿ ಸರ್ಕಾರ ಬದಲಾಯಿತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇದೂವರೆಗೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ಕರೆದಿಲ್ಲ. ಅಮಿತ್ ಶಾ ಅವರು ಕರೆದಿದ್ದ ಪತ್ರಿಕಾಗೋಷ್ಠಿಯೊಂದರಲ್ಲಿ, ಮೋದಿ ಅವರು ಮೂಕ ಪ್ರೇಕ್ಷಕರಂತೆ ಕುಳಿತುಹೋಗಿದ್ದರು ಅಷ್ಟೇ. ಅದು ಬಿಟ್ಟರೆ, ಮೋದಿ ಅವರು 2023ರ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದಾಗ, ಶ್ವೇತಭವನದಲ್ಲಿ ಪತ್ರಕರ್ತರ ಎರಡು ಪ್ರಶ್ನೆಗಳಿಗೆ ಉತ್ತರಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಉತ್ತರ ಪ್ರದೇಶ | ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಪೊಲೀಸ್

ಆ ಸಂದರ್ಭದಲ್ಲಿ ವರದಿ ಮಾಡಿದ್ದ ನ್ಯೂಯಾರ್ಕ್‌ ಟೈಮ್ಸ್‌, “ಮೋದಿ ಅವರು ಸಾರ್ವಜನಿಕ ಸಮಾರಂಭಗಳಲ್ಲಿ ಭಾಷಣ ಮಾಡುವುದನ್ನು ಇಷ್ಟಪಡುತ್ತಾರೆ. ರಾಷ್ಟ್ರಕ್ಕೆ ತಮ್ಮ ಸಂದೇಶಗಳನ್ನು ನೀಡಲು ಮಾಸಿಕ ‘ಮನ್‌ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ” ಎಂದು ಹೇಳಿತ್ತು.

ಭಾರತದಲ್ಲಿ ಪ್ರಧಾನಿಯಾಗಿ ಕೊನೆಯ ಪತ್ರಿಕಾಗೋಷ್ಠಿ ನಡೆಸಿದ್ದ ಮನ್‌ಮೋಹನ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳಿಗೂ ಮುನ್ನ ಭಾಷಣ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಧನೆಗಳು ಮತ್ತು ವೈಫಲ್ಯಗಳ ಕುರಿತು ಪ್ರಾಮಾಣಿಕ ಮಾತುಗಳನ್ನಾಡಿದ್ದರು. ಉತ್ಪಾದನಾ ವಲಯದಲ್ಲಿ ಉದ್ಯೋಗ ಸೃಷ್ಟಿಯು ಸರ್ಕಾರದ ಗುರಿಗಳಿಗಿಂತ ಹೇಗೆ ಕಡಿಮೆಯಾಯಿತು ಎಂಬುದರ ಕುರಿತು ಅವರು ಗಮನ ಹರಿಸಿದ್ದರು.

ಪಚೌರಿ ಅವರ ಪೋಸ್ಟ್ಅನ್ನು ಹಂಚಿಕೊಂಡಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, “ಮನಮೋಹನ್ ಸಿಂಗ್ ಅವರು ತಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ 117 ಬಾರಿ ಪತ್ರಿಕಾಗೋಷ್ಠಿ ನಡೆಸಿದ್ದರು” ಎಂದು ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...