ಅಬಕಾರಿ ನೀತಿ ಪ್ರಕರಣ | ತಿಹಾರ್‌ ಜೈಲಿನಲ್ಲಿ ವಿಚಾರಣೆ ನಡೆಸುತ್ತೇವೆಂದ ಸಿಬಿಐ; ಕೋರ್ಟ್‌ ಮೊರೆ ಹೋದ ಕವಿತಾ

Date:

ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ. ಸಿಬಿಐ ನಿರ್ಧಾರವನ್ನು ವಿರೋಧಿಸಿ ಕವಿತಾ ಅವರು ಕೋರ್ಟ್‌ನಲ್ಲಿ ಶನಿವಾರ ಅರ್ಜಿ ಸಲ್ಲಿಸಿದ್ದಾರೆ.

ಕವಿತಾ ಅವರನ್ನು ತಿಹಾರ್‌ ಜೈಲಿನಲ್ಲಿ ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಸಿಬಿಐ ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಕೋರ್ಟ್‌, ಶುಕ್ರವಾರ ಅನುಮತಿ ನೀಡಿದೆ.

ಕವಿತಾ ಪರವಾಗಿ ಅರ್ಜಿ ಸಲ್ಲಿಸಿರುವ ವಕೀಲ ನಿತೇಶ್ ರಾಣಾ, “ಸಿಬಿಐ ಕಾನೂನು ಪ್ರಕ್ರಿಯೆಯನ್ನು ಉಲ್ಲಂಘಿಸುತ್ತಿದೆ. ನ್ಯಾಯಾಲಯದಿಂದ ಅನುಕೂಲಕರ ಆದೇಶವನ್ನು ಪಡೆಯಲು ಸಿಬಿಐ ಸತ್ಯವನ್ನು ಬಹಿರಂಗಪಡಿಸಿಲ್ಲ. ಇದು ನನಗೆ ತೀವ್ರ ಆತಂಕವನ್ನು ಉಂಟುಮಾಡಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕವಿತಾ ಪರವಾದ ವಾದ ಕೇಳುವವರೆಗೂ ಆದೇಶವನ್ನು ಹಿಂಪಡೆಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ನ್ಯಾಯಾಲಯವು ಕವಿತಾ ಅವರ ಮನವಿಯನ್ನು ಶನಿವಾರದ ನಂತರ ಆಲಿಸುವ ಸಾಧ್ಯತೆಯಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 15 ರಂದು ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಕಳೆದ ಮಂಗಳವಾರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಗುರುವಾರ (ಏಪ್ರಿಲ್ 4) ತನ್ನ 16 ವರ್ಷದ ಮಗನ ಪರೀಕ್ಷೆಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ಕವಿತಾ ಮನವಿ ಮಾಡಿದ್ದರು. ಪರೀಕ್ಷೆಯ ವೇಳೆ ಮಗನಿಗೆ ತಾಯಿಯ ನೈತಿಕ ಮತ್ತು ಭಾವನಾತ್ಮಕ ಬೆಂಬಲದ ಅಗತ್ಯ ಇರುತ್ತದೆ ಎಂದು ಅವರು ಮನವಿಯಲ್ಲಿ ಹೇಳಿದ್ದರು.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ‘ಸೌತ್ ಗ್ರೂಪ್’ನ ಪ್ರಮುಖ ಸದಸ್ಯೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...