ಅಬಕಾರಿ ನೀತಿ ಪ್ರಕರಣ | ಸಿಸೋಡಿಯಾ ಇಲ್ಲದೆ ಅಪರಾಧ ನಡೆದಿರಲು ಸಾಧ್ಯವಿಲ್ಲ; ಇಡಿ ವಾದ

Date:

ಅಬಕಾರಿ ನೀತಿಯನ್ನು ರೂಪಿಸಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಾರಣ. ಅವರಿಲ್ಲದೆ ಈ ಪ್ರಕರಣ ನಡೆದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ವಾದಿಸಿದೆ. ಸಿಸೋಡಿಯಾ ಅವರ ಎರಡನೇ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ.

ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆಗ, ಮುಂದಿನ ಆರರಿಂದ ಎಂಟು ತಿಂಗಳಲ್ಲಿ ವಿಚಾರಣೆಯನ್ನು ಮುಕ್ತಾಯಗೊಳಿಸುವುದಾಗಿ ಇಡಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಸುಮಾರು ಆರು ತಿಂಗಳುಗಳು ಕಳೆದಿವೆ. ಆದರೆ, ಪ್ರಕರಣದಲ್ಲಿ ಅವರ ವಿಚಾರಣೆ ಪೂರ್ಣಗೊಂಡಿಲ್ಲ. ಹೀಗಾಗಿ, ಅವರ ಪರ ವಕೀಲರು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಎರಡನೇ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇಡಿ ಪರ ವಾದ ಮಂಡಿಸಿದ ವಿಶೇಷ ವಕೀಲ ಜೊಹೆಬ್ ಹೊಸೈನ್, “ಆರೋಪಿ ಪರ ವಕೀಲರು ಜಾಮೀನು ಕೋರಲು ವಿಚಾರಣೆಯ ವಿಳಂಬವನ್ನು ಕಾರಣವಾಗಿ ಬಳಸಿಕೊಳ್ಳುತ್ತಿದ್ದಾರೆ. ವಿಳಂಬವು ಆರೋಪಿಗಳಿಂದ ಉಂಟಾಗುತ್ತಿದೆಯೇ ಹೊರತು, ಪ್ರಾಸಿಕ್ಯೂಷನ್‌ನಿಂದ ಅಲ್ಲ” ಎಂದು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಅಪರಾಧವು ಸಿಸೋಡಿಯಾ ಇಲ್ಲದೆ ನಡೆದಿರಲು ಸಾಧ್ಯವಿಲ್ಲ. ಇಡಿ ಪ್ರಕಾರ, ಸಗಟು ಮದ್ಯ ವಿತರಕರು 581 ಕೋಟಿ ರೂಪಾಯಿಗಳ ನಿಗದಿತ ಶುಲ್ಕವನ್ನು ಗಳಿಸಿದ್ದಾರೆ. ಯಾಕೆಂದರೆ, ನೀತಿಯಲ್ಲಿ ಕಮಿಷನ್ಅನ್ನು (ವಿತರಣಾ ಶುಲ್ಕ) 5%ನಿಂದ 12%ಗೆ ಹೆಚ್ಚಿಸಲಾಗಿತ್ತು. ನಂತರ, ಆ ನೀತಿಯನ್ನು ರದ್ದುಗೊಳಿಸಲಾಯಿತು. ಹೊಸ ನೀತಿಯಿಂದಾಗಿ 338 ಕೋಟಿ ರೂ. ಹೆಚ್ಚುವರಿ ಲಾಭವಾಗಿದೆ” ಎಂದು ಹೇಳಿದ್ದಾರೆ.

ಈ ಆದಾಯದ ಆಧಾರದ ಮೇಲೆ ಇಡಿ ಮತ್ತೊಮ್ಮೆ ಸಿಸೋಡಿಯಾ ಜಾಮೀನು ಅರ್ಜಿಯನ್ನು ವಿರೋಧಿಸಿದೆ. ಪ್ರಕರಣದಲ್ಲಿ ಸಾಕ್ಷಿ ನಾಶವಾಗಿದೆ ಎಂದು ಹೊಸೈನ್‌ ವಾದಿಸಿದ್ದಾರೆ. “ಸಿಸೋಡಿಯಾ ಅವರ ನಿರ್ದೇಶನ ಮತ್ತು ವಿಶ್ವಾಸದೊಂದಿಗೆ ವಿಜಯ್ ನಾಯರ್ ಅವರು ಸೌತ್ ಗ್ರೂಪ್ ಮತ್ತು ಎಎಪಿ ನಡುವಿನ ಮಧ್ಯಮ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು” ಎಂದು ಹೊಸೈನ್ ಆರೋಪಿಸಿದ್ದಾರೆ.

“ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಾಗ ಹೆಚ್ಚುವರಿ ಕಾರ್ಯವಿಧಾನದಲ್ಲಿ ಹಸ್ತಕ್ಷೇಪ, ನಿರ್ದಿಷ್ಟ ಮದ್ಯದ ಘಟಕಗಳ ಲಾಭಕ್ಕಾಗಿ ನೀತಿಯ ತಿರುಚುವಿಕೆ ಹಾಗೂ ರಾಜ್ಯದ ಬೊಕ್ಕಸಕ್ಕೆ ಹಲವಾರು ನೂರು ಕೋಟಿಗಳಷ್ಟು ನಷ್ಟ ಉಂಟುಮಾಡುವಲ್ಲಿ ಸಿಸೋಡಿಯಾ ಅವರ ಪಾತ್ರವಿದೆ” ಎಂದು ಇಡಿ ವಾದಿಸಿದ್ದಾರೆ.

ಶನಿವಾರ ಬೆಳಗ್ಗೆ ನ್ಯಾಯಾಲಯವು ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿದೆ. ಏಪ್ರಿಲ್ 10 ರಂದು ಅವರ ಜಾಮೀನು ಅರ್ಜಿಯ ಕುರಿತು ಹೆಚ್ಚಿನ ವಿಚಾರಣೆ ನಡೆಸಲಿದೆ.

ಸಿಸೋಡಿಯಾ ಅವರನ್ನು 2023ರ ಫೆಬ್ರವರಿಯಲ್ಲಿ ಸಿಬಿಐ ಬಂಧಿಸಿತು. ನಂತರ, ಅದೇ ವರ್ಷದ ಮಾರ್ಚ್‌ನಲ್ಲಿ ಇಡಿ ಅವರನ್ನು ತನ್ನ ವಶಕ್ಕೆ ಪಡೆದುಕೊಂಡಿತು. ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ, ಸಿಸೋಡಿಯಾ ಅವರನ್ನು ‘ಪ್ರಮುಖ ಆರೋಪಿ’ಯೆಂದು ಹೆಸರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...