ಕಾಂಗ್ರೆಸ್ಸಿಗರ ಎದೆಬಡಿತ ಹೆಚ್ಚಿಸಿದ ಎಕ್ಸಿಟ್ ಪೋಲ್ ಫಲಿತಾಂಶ: ಬಿ ವೈ ವಿಜಯೇಂದ್ರ

Date:

ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಣ್ಣದಲ್ಲ. ಇದರ ಆಳ ಮತ್ತು ಅಗಲ ಇನ್ನೂ ಹೆಚ್ಚಾಗಿದೆ. ಕೂಡಲೇ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಲು ನಾವು ಆಗ್ರಹಿಸಿದ್ದರೂ ಮುಖ್ಯಮಂತ್ರಿಗಳು ಇನ್ನೂ ಮನಸ್ಸು ಮಾಡಿಲ್ಲ” ಎಂದು ಆಕ್ಷೇಪಿಸಿದರು.

“ತೆಲಂಗಾಣಕ್ಕೆ ಹಣ ವರ್ಗಾವಣೆ, ನಕಲಿ ಕಂಪನಿ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾಯಿಸಿದ್ದು ಬಯಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೋಸ್ಕರ ಈ ಎಸ್‍ಟಿ ಅಭಿವೃದ್ಧಿ ನಿಗಮದ ರೂ. 187 ಕೋಟಿ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಿದ್ದಾರೆ. ಬೇರೆ ಬೇರೆ ಖಾತೆಗಳಿಂದ ಈ ಹಣ ಚುನಾವಣೆಗೆ ದುರುಪಯೋಗ ಆಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಕೂಡ ಪತ್ರ ಬರೆದಿದೆ. ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ತಮ್ಮ ಕೊಳಕನ್ನು ಮುಚ್ಚಿ ಹಾಕಲು ಆತುರಾತುರವಾಗಿ ಎಸ್‍ಐಟಿ ರಚಿಸಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಿದೆ” ಎಂದು ಎಚ್ಚರಿಸಿದರು.

ಹಗರಣದ ಹಿಂದೆ ದೊಡ್ಡ ಹೆಸರು

“ವಾಲ್ಮೀಕಿ ನಿಗಮದ ಹಗರಣವು ಕೇವಲ ಸಚಿವರಿಗೆ ಸೀಮಿತವಾಗಿಲ್ಲ. ಬಹಳ ದೊಡ್ಡ ದೊಡ್ಡ ಹೆಸರುಗಳು ಕೇಳಿಬರುತ್ತಿವೆ. ಮುಂದಿನ ದಿನಗಳಲ್ಲಿ ಸತ್ಯಾಂಶ ಹೊರಬರಲಿದೆ. ಎಸ್‍ಐಟಿಯಿಂದ ನ್ಯಾಯಯುತ ತನಿಖೆ ಅಸಾಧ್ಯ. ಆದ್ದರಿಂದ ಸಿಬಿಐ ತನಿಖೆಗೆ ಒಪ್ಪಿಸಬೇಕು. ಸದ್ಯವೇ ರಾಜ್ಯಪಾಲರನ್ನು ಭೇಟಿ ಮಾಡಿ ಈ ವಿಚಾರದಲ್ಲಿ ಒತ್ತಾಯ ಮಾಡಲಿದ್ದೇವೆ” ಎಂದು ತಿಳಿಸಿದರು.

ಕೇಂದ್ರದ ವರಿಷ್ಠರು, ಹಿರಿಯರಾದ ಸಿ ಟಿ ರವಿ, ಎನ್.ರವಿಕುಮಾರ್, ಮರಾಠ ಸಮಾಜದ ಮುಖಂಡ, ಬಿಜೆಪಿ ಹಿರಿಯರಾದ ಎಂ ಜಿ ಮುಳೆ ಅವರನ್ನು ವಿಧಾನ ಪರಿಷತ್ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದ ಕುರಿತು ಸಂತಸ ಸೂಚಿಸಿದರು. ಇದರಿಂದ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ಧ್ವನಿ ಎತ್ತಿ ಸರಕಾರಕ್ಕೆ ಚಾಟಿ ಬೀಸುವ ಕೆಲಸ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...