ಎಕ್ಸ್ ಪ್ರೆಸ್ ವೇ | ₹158 ಕೋಟಿ ವೆಚ್ಚದ ಹೆಚ್ಚುವರಿ ಕಾಮಗಾರಿಗೆ ಪ್ರಸ್ತಾವನೆ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದರು.

“ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು, ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ

ಟೋಲ್ ಸಂಗ್ರಹ: ಕೇಂದ್ರ ಹೆದ್ದಾರಿ ಸಚಿವರೊಂದಿಗೆ ಚರ್ಚೆ

ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿ, ನಾವು ಟೋಲ್‌ ಸಂಗ್ರಹ ಮಾಡುವುದಿಲ್ಲ ಅದನ್ನು ಎನ್.ಎಚ್.ಎ.ಐ ಅವರು ಸಂಗ್ರಹ ಮಾಡುವುದು. ದೆಹಲಿಗೆ ತೆರಳಿದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಈ ವಿಷಯವಾಗಿ ಮಾತನಾಡಲಾಗುವುದು ಎಂದು ಭರವಸೆ ನೀಡಿದರು.

ಉಡುಪಿ ಪ್ರಕರಣ: ಕಾನೂನಿನ ಪ್ರಕಾರ ಕ್ರಮ

ಉಡುಪಿ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್.ಐ.ಆರ್. ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...