ಸತ್ಯ ಶೋಧ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಮತ್ತೆ ರಾಜೀನಾಮೆ ಕೊಟ್ಟಿಲ್ಲ; ವೈರಲ್ ಪೋಸ್ಟ್‌ ಸುಳ್ಳು

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ರಾಜಕೀಯ ನಿಷ್ಠೆಯನ್ನು ಬದಲಾಯಿಸಿದ್ದಾರೆ. ಅವರು ಬಿಜೆಪಿ ಜೊತೆಗಿನ ಮೈತ್ರಿ ತೊರೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ಅದನ್ನೇ ಸತ್ಯವೆಂದು ಹಲವರು ಹಂಚಿಕೊಳ್ಳುತ್ತಿದ್ದಾರೆ. ಆದರೆ, ನಿತೀಶ್ ಅವರು ಮತ್ತೆ ರಾಜೀನಾಮೆ ನೀಡಿಲ್ಲ. ಆ ಪೋಸ್ಟ್‌ ಸಂಪೂರ್ಣ ಸುಳ್ಳು ಮಾಹಿತಿಯಿಂದ ಕೂಡಿದೆ ಎಂಬುದು ಸ್ಪಷ್ಟವಾಗಿದೆ.

ವೈರಲ್‌ ಆದ ಪೋಸ್ಟ್‌ ವಾಸ್ತವಾಂಶವನ್ನು ಹುಡುಕಿದಾಗ, ವೈರಲ್ ಆಗುತ್ತಿರುವ ವಿಡಿಯೋ ಒಂದು ವರ್ಷ ಹಿಂದಿನದ್ದು ಎಂದು ಕಂಡುಬಂದಿದೆ. ಆ ವಿಡಿಯೋ ನಿತೀಶ್ ಅವರು ಮಹಾಘಟಬಂಧನ್‌ ಮೈತ್ರಿಯನ್ನು ತೊರೆದ ಸಂದರ್ಭದ್ದಾಗಿದೆ.

ಈ ಹಿಂದೆ, ನಿತೀಶ್ ಕುಮಾರ್ ಅವರು ಕಾಂಗ್ರೆಸ್, ಜೆಡಿಯು ಹಾಗೂ ಆರ್‌ಜೆಡಿ ಒಳಗೊಂಡ ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಬಿಹಾರ ಮುಖ್ಯಮಂತ್ರಿಯಾಗಿದ್ದರು. ಆದರೆ, 2024ರ ಜನವರಿಯಲ್ಲಿ ಮೈತ್ರಿಕೂಟವನ್ನು ತೊರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 36 2

ಮಹಾಘಟಬಂಧನ್ ತೊರೆದು 2024ರ ಜನವರಿ 28ರಂದು ರಾಜೀನಾಮೆ ನೀಡಿದ್ದ ನಿತೀಶ್‌ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದರು. “ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇನೆ. ನಾನು ಎಲ್ಲರಿಂದ ಸಲಹೆಗಳನ್ನು ಪಡೆದುಕೊಳ್ಳುತ್ತಿದ್ದರಿಂದ ಈ ಪರಿಸ್ಥಿತಿ ಬಂದಿದೆ. ಇಂದು ಸರ್ಕಾರ ವಿಸರ್ಜನೆಯಾಗಿದೆ” ಎಂದು ಹೇಳಿದ್ದರು.

ಅವರು ಅಂದು ಮಾತನಾಡಿದ್ದ ವಿಡಿಯೋವನ್ನು ಕ್ರಾಪ್‌ ಮಾಡಿ, ತಿರುಚಿ ಈಗ ನಿತೀಶ್‌ ಕುಮಾರ್ ಮತ್ತೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗಿನ ಮೈತ್ರಿಯಿಂದ ಹೊರಬಂದಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ.

ಆದರೆ, ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ಈಗ ಮತ್ತೆ ರಾಜೀನಾಮೆ ನೀಡಿಲ್ಲ. ಎನ್‌ಡಿಎ ಮೈತ್ರಿಯನ್ನೂ ತೊರೆದಿಲ್ಲ ಎಂಬುದು ಸತ್ಯ.

ಈ ವರದಿ ಓದಿದ್ದೀರಾ?: ಡೆಲ್ಲಿ ಪತ್ರಿಕೆಯಲ್ಲಿ ಮಂಡ್ಯದ ‘ಬಾಡೂಟ ಆಂದೋಲನ’ದ ಸದ್ದು-ಸುದ್ದಿ!

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...