Fact Check | ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ಅಕ್ರಮವಾಗಿ ಬಂಗಲೆ ಖರೀದಿಸಿಲ್ಲ!

Date:

ಲೋಕಸಭಾ ಚುನಾವಣೆಯ ಸಮಯದಲ್ಲಿ ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿರುವ ಪ್ರಿಯಾಂಕಾ ಗಾಂಧಿ ಅವರ ಬಂಗಲೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪ್ರಿಯಾಂಕಾ ಗಾಂಧಿ ಅವರು ಈ ಬಂಗಲೆಯನ್ನು ಕಾನೂನುಬಾಹಿರವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಿಯಾಂಕಾ ಅವರ ಬಂಗಲೆಯ ಚಿತ್ರವನ್ನು ಹಂಚಿಕೊಂಡಿರುವ ಬಿಜೆಪಿ ಬೆಂಬಲಿಗ ಮಿ. ಸಿನ್ಹಾ (ಮೋದಿ ಫ್ಯಾಮಿಲಿ) ಎಂಬವರು, “ಶಿಮ್ಲಾದ ಈ ಬೃಹತ್ ಬಂಗಲೆ ಪ್ರಿಯಾಂಕಾ ವಾದ್ರಾ ಅವರಿಗೆ ಸೇರಿದ್ದು. ಈ ಕಣಿವೆಯಲ್ಲಿ ಯಾವುದೇ ಹೊರಗಿನವರಿಗೆ ಮನೆ ನಿರ್ಮಿಸಲು ಅವಕಾಶವಿಲ್ಲ. ಆದರೂ, ರಾಜಮನೆತನದ ನಿಯಮಗಳು ಯಾವಾಗಲೂ ವಿಭಿನ್ನವಾಗಿರುತ್ತವೆ. ಹೇಗಾದರೂ ಸರಿ, ಸಂಪತ್ತಿನ ಪುನರ್‌ ವಿತರಣೆ ಯೋಜನೆಯಡಿ ನನಗೆ ಈ ಬಂಗಲೆ ಬೇಕು. ಪ್ರಿಯಾಂಕಾಗಾಂಧಿ ತಪ್ಪು ತಿಳಿಯುವುದಿಲ್ಲವೆಂದು ಭಾವಿಸುತ್ತೇವೆ” ಎಂದಿದ್ದಾರೆ.

 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿನ್ಹಾ ಮಾಡಿರುವ ಆರೋಪ ಸತ್ಯಾಸತ್ಯತೆಗಳೇನು ನೋಡೋಣ..

ಪ್ರತಿಪಾದನೆ: ಹಿಮಾಚಲ ಪ್ರದೇಶದ ಛರಾಬ್ರಾದಲ್ಲಿ ಅಕ್ರಮವಾಗಿ ಪ್ರಿಯಾಂಕಾ ಗಾಂಧಿ ಬಂಗಲೆ ಖರೀದಿಸಿದ್ದಾರೆ.
ಸತ್ಯ: ಮನೆಯು ಅಕ್ರವಾಗಿದೆ ಎಂಬ ಆರೋಪ ಸುಳ್ಳು. ಅಲ್ಲಿ ಪ್ರಿಯಾಂಕಾ ಖರೀದಿಸಿದ ಭೂಮಿ ಕಾನೂನುಬಾಹಿರವಲ್ಲ…!

ಪ್ರಿಯಾಂಕಾ ಅವರ ಬಂಗಲೆಯು ಕಾನೂನುಬಾಹಿರವಾಗಿದೆ ಎಂಬ ಹೇಳಿಕೆಗಳು ಕಾಂಗ್ರೆಸ್‌ ಪ್ರಣಾಳಿಕೆಯನ್ನು ಅಪಹಾಸ್ಯ ಮಾಡುವ ಉದ್ದೇಶವನ್ನು ಹೊಂದಿವೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ‘ಸಂಪತ್ತನ್ನು ಪುನರ್ ವಿತರಣೆ’ ಮಾಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ ಎಂದು ಭಾವಿಸಿ, ಕೆಲವರು ಇಂತಹ ಹೇಳಿಕೆಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ. ಆದರೆ, ವಾಸ್ತವ ಏನೆಂದರೆ, ಕಾಂಗ್ರೆಸ್‌ ‘ಸಂಪತ್ತು ಪುನರ್‌ ವಿತರಣೆ’ಯ ಬಗ್ಗೆ ಯಾವುದೇ ಭರವಸೆಯನ್ನೂ ತನ್ನ ಪ್ರಣಾಳಿಕೆಯಲ್ಲಿ ನೀಡಿಲ್ಲ.

ಹಿಮಾಚಲದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಖರೀದಿಸಿದ ಭೂಮಿ ಕಾನೂನುಬಾಹಿರವಲ್ಲ. ಈ ಬಗ್ಗೆ ನ್ಯೂಸ್‌ಚೆಕರ್ 2020ರ ಸೆಪ್ಟೆಂಬರ್ 14ರಲ್ಲಿಯೇ ಫ್ಯಾಕ್ಟ್‌ಚೆಕ್ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಭೂಮಿ ಖರೀದಿಯ ಕೆಲವು ನಿಮಯಗಳನ್ನು ಸಡಿಲಿಸಲಾಗಿದೆ. ಹೀಗಾಗಿ, ಕಾನೂನಾತ್ಮಕವಾಗಿಯೇ ಅಲ್ಲಿ ಪ್ರಿಯಾಂಕಾ ಬಂಗಲೆಯನ್ನು ಖರೀದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...