ಫ್ಯಾಕ್ಟ್‌ಚೆಕ್ | 20 ವರ್ಷಗಳ ಕಾಲ ದೇಶದಲ್ಲಿ ಇವಿಎಂ ನಿಷೇಧ?

Date:

ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಅನ್ನು 20 ವರ್ಷಗಳ ಕಾಲ ನಿಷೇಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 2014ರ ನಂತರ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಹಲವು ರಾಜಕೀಯ ಪಕ್ಷಗಳೂ ಸೇರಿದಂತೆ ಜನಸಾಮಾನ್ಯರೂ ಕೂಡ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ಇದೀಗ, ಕರ್ನಾಟಕದಲ್ಲಿ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಈ ಪೋಸ್ಟ್‌ ಸತ್ಯವೋ-ನಕಲಿಯೋ ಎಂಬ ಬಗ್ಗೆ ಮತ್ತಷ್ಟು ಚರ್ಚೆಗಳಾಗುತ್ತಿವೆ. ವೈರಲ್‌ ಆಗಿರುವ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಮೂರು ತಿಂಗಳ ಹಿಂದೆ, ‘ಇಂಡಿಯಾ ಅಪ್‌ಡೇಟ್’ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋ ವರದಿ ಪ್ರಸಾರವಾಗಿತ್ತು. ‘ಅಂತಿಮವಾಗಿ, ‘ಇವಿಎಂಗಳನ್ನು 20 ವರ್ಷಗಳವರೆಗೆ ನಿಷೇಧಿಸಲಾಗಿದೆ. ದೇಶದಲ್ಲಿ ಇನ್ನು ಮುಂದೆ ನಡೆಯುವ ಎಲ್ಲ ಚುನಾವಣೆಗಳಲ್ಲಿ ಇವಿಎಂ ಬಳಕೆ ಇರುವುದಿಲ್ಲ’ ಎಂದು ವರದಿಯಲ್ಲಿ ವಿವರಿಸಲಾಗಿತ್ತು. ಅದನ್ನು ಆಧಾರವಾಗಿಟ್ಟುಕೊಂಡು ಹಲವರು ಕೆಲವು ಪೋಸ್ಟ್‌ಗಳನ್ನು ಸೃಷ್ಠಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅವುಗಳನ್ನು ನೆಟ್ಟಿಗರು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಸತ್ಯಾಂಶ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಹತ್ತಿರ ಬಂದಂತೆಲ್ಲ ವಿಪಕ್ಷಗಳು, ಸಾಮಾಜಿಕ ಕಾರ್ಯಕರ್ತರು, ತಜ್ಞರು ಇವಿಎಂಗಳ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಲೇ ಇದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತಾಸಕ್ತಿಯಲ್ಲಿ ಇವಿಎಂಗಳು ನಿಖರವಾಗಿರಬೇಕು ಮತ್ತು ಅವುಗಳ ಪರಿಣಾಮಕಾರಿತ್ವದ ಬಗ್ಗೆ ಇರುವ ಸಂದೇಹಗಳನ್ನು ಮುಖ್ಯ ಚುನಾವಣಾ ಆಯುಕ್ತರು ಪರಿಹರಿಸಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ಮಧ್ಯೆ, ಇವಿಎಂ ನಿಷೇಧವೇ ಆಗಿಬಿಟ್ಟಿದೆ ಎಂಬ ಸುದ್ದಿಯನ್ನೂ ಕೆಲವರು ಹರಿಬಿಟ್ಟಿದ್ದಾರೆ. ಇದು ನಕಲಿ ಸುದ್ದಿ ಎಂದು ಕೇಂದ್ರ ಸರ್ಕಾರದ ಅಡಿಯಲ್ಲಿರುವ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ (ಪಿಐಬಿ) ತಿಳಿಸಿದೆ.

‘ಇಂಡಿಯಾ ಅಪ್‌ಡೇಟ್’ ಎಂಬ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರವಾಗಿರುವ ಸುದ್ದಿಗೆ ಯಾವುದೇ ಆಧಾರ ಇಲ್ಲ. ಇವಿಎಂ ಬಳಕೆಯನ್ನು ನಿರ್ಬಂಧಿಸುವ ಕುರಿತಂತೆ ಯಾವುದೇ ರೀತಿಯ ಪ್ರಕಟಣೆ ಹೊರಬಿದ್ದಿಲ್ಲ ಎಂದು ಪಿಐಬಿ ಸ್ಪಷ್ಟಪಡಿಸಿದೆ. ಇಂತಹ ಆಧಾರ ರಹಿತವಾದ ಪೋಸ್ಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಜನರಲ್ಲಿ ಮನವಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ 20 ವರ್ಷಗಳವರೆಗೆ ಇವಿಎಂ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿರುವ ಪೋಸ್ಟ್‌ ಸುಳ್ಳು ಎಂದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ. ಹಲವಾರು ರಾಜಕೀಯ ಪಕ್ಷಗಳು ಹಾಗೂ ಪಕ್ಷಗಳ ಕಾರ್ಯಕರ್ತರು ತಮ್ಮ ನಾಯಕರನ್ನು ಅತ್ಯುತ್ತಮರೆಂದು ಬಿಂಬಿಸುವ ಉದ್ದೇಶದಿಂದ ಮತ್ತು ಇತರ ರಾಜಕಾರಣಿಗಳನ್ನು ಉತ್ತಮರಲ್ಲವೆಂದು ಪ್ರಚಾರ ಮಾಡಲು ಸುಳ್ಳು ಸುದ್ದಿಗಳು, ನಕಲಿ ಅಥವಾ ತಿರುಚಿದ ಚಿತ್ರಗಳನ್ನು ಹಂಚಿಕೊಳ್ಳುವುದು ಹೆಚ್ಚಾಗಿ ನಡೆಯುತ್ತದೆ. ಇಂತಹ ಸಮಯದಲ್ಲಿ ಸತ್ಯವನ್ನು ಅರಿಯುವುದು ಮುಖ್ಯ. ನಿಮಗೆ ಯಾವುದೇ ಸುಳ್ಳು ಸುದ್ದಿಗಳು ಕಂಡುಬಂದಲ್ಲಿ eedinastate@gmail.comಗೆ ಮೇಲ್‌ ಮಾಡಿ. ಸತ್ಯಶೋಧನೆಗೆ ಸಹಕರಿಸಿದೆ.

ಕೃಪೆ: ಏನ್‌ಸುದ್ದಿ.ಕಾಮ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...