ಕೋಲಾರ ಟಿಕೆಟ್‌ | ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ ಜೋರು, ಶಾಸಕರ ರಾಜೀನಾಮೆ ಬೆದರಿಕೆ

Date:

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ವಿಚಾರವಾಗಿ ಸಚಿವ ಕೆ ಎಚ್‌ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್ ಬಣದ ಬಡಿದಾಟ ತಾರಕಕ್ಕೇರಿದೆ.

ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಎಡಗೈ ಸಮುದಾಯಕ್ಕೆ ಟಿಕೆಟ್‌ ನೀಡಬೇಕು ಎಂದು ಆಹಾರ ಸಚಿವ ಮುನಿಯಪ್ಪ ಪಟ್ಟು ಹಿಡಿದಿದ್ದು, ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಇತ್ತ ರಮೇಶ್‌ ಕುಮಾರ್‌ ಬಣ ಕೂಡ ತಮ್ಮ ಅಭ್ಯರ್ಥಿಗೆ ಟಿಕೆಟ್‌ ಕೊಡಿಸಲು ಪಟ್ಟು ಹಿಡಿದಿದ್ದು, ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಕೆಲಸವೇ ಮಾಡುವುದಿಲ್ಲ ಎಂಬ ಎಚ್ಚರಿಕೆ ಸಂದೇಶ ಸಾರಿದ್ದಾರೆ. ಮುಂದುವರಿದು ರಮೇಶ್‌ ಕುಮಾರ್‌ ಬಣದ ಶಾಸಕರು ರಾಜೀನಾಮೆ ನೀಡುವ ಮಾತುಗಳನ್ನು ಕೂಡ ಆಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಧಾನ ಸಭೆ ನಡೆಸಿದರೂ, ನಾಯಕರ ನಡುವಿನ ಭಿನ್ನಮತ ಶಮನವಾಗಿಲ್ಲ. ಸಚಿವ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೇ ಜಿಲ್ಲೆಯ ಐವರು ಶಾಸಕರು ರಾಜಿನಾಮೆ ನೀಡುತ್ತೇವೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಬೆದರಿಕೆ ಹಾಕಿದ್ದಾರೆ.

ಮಾದಿಗ ಸಮುದಾಯಕ್ಕೆ ಸೇರಿದ ರಾಜ್ಯಸಭೆಯ ಮಾಜಿ ಸದಸ್ಯ ಡಾ ಎಲ್‌ ಹನುಮಂತಯ್ಯ ಅವರನ್ನು ಕಣಕ್ಕೆ ಇಳಿಸಬೇಕು ಎಂದು ರಮೇಶ್‌ ಕುಮಾರ್ ಬಣದವರು ಒತ್ತಡ ಹೇರಿದ್ದು, ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆ ತಮ್ಮದು ಎಂದು ಕೇಂದ್ರ ನಾಯಕರಿಗೆ ಭರವಸೆ‌ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಐವರು ಶಾಸಕರು ರಾಜೀನಾಮೆ!

ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್​ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ ಸಿ ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್​​​ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್​​ ರಾಜೀನಾಮೆ ನೀಡುತ್ತೇವೆ” ಎಂದರು.

ಮುನಿಯಪ್ಪ ಹೇಳುವುದೇನು?

ಸಚಿವ ಕೆ ಎಚ್ ಮುನಿಯಪ್ಪ ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿ, “ಇಂದು ಸಂಜೆ ಟಿಕೆಟ್ ಘೋಷಣೆ ಆಗಬಹುದು. ನಾನು ಕೋಲಾರದಲ್ಲಿ ಏಳು ಬಾರಿ ಗೆದ್ದಿದ್ದೇನೆ, ಅನುಭವ ಇದೆ. ಎಲ್ಲರಿಗೂ ಮನವಿ ಮಾಡಿದ್ದೇನೆ ಅವಕಾಶ ಮಾಡಿಕೊಡಿ ಅಂತ. ಟಿಕೆಟ್‌ ಸಿಗುವ ಆಶಾ ಭಾವನೆ ಇದೆ” ಎಂದರು.

ಕೆಲವು ಶಾಸಕರ ರಾಜೀನಾಮೆ ನೀಡುತ್ತೇವೆ ಎಂಬ ಬೆದರಿಕೆಯ ಕುರಿತು ಪ್ರತಿಕ್ರಿಯಿಸಿ, “ಅಭ್ಯರ್ಥಿ ಯಾರಾಗಬೇಕು ಎಂಬುದು ರಮೇಶ್ ಕುಮಾರ್ ಹಾಗೂ ಸಚಿವರ ಉಪಸ್ಥಿತಿಯಲ್ಲೇ ಆಗಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ರಮೇಶ್ ಕುಮಾರ್, ಮಾಲೂರು ನಂಜೇಗೌಡ ಎಲ್ಲರಿಗೂ ಮನವಿ ಮಾಡಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಯಾರಿಗೆ ಟಿಕೇಟ್ ಕೊಟ್ಟರೂ ಗೆಲ್ಲಿಸುತ್ತೇವೆ ಎಂದಿದ್ದೇವೆ. ಇದಕ್ಕೆ ಮುಂದಾಳತ್ವ ರಮೇಶ್ ಕುಮಾರ್ ಅವರದೇ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...