ಮುಸ್ಲಿಮರ ಓಟು ಸಾಕು‌; ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ಹರಿಬಿಟ್ಟ ಕಿಡಿಗೇಡಿಗಳು

Date:

“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ಶೀರ್ಷಿಕೆ ಜೊತೆಗೆ ಪತ್ರಿಕಾ ವರದಿಯನ್ನು ಹೋಲುವ ನಕಲಿ ಸುದ್ದಿಯ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ” ಎಂದು ಹೇಳಿದ್ದಾರೆ. ಬಿಜೆಪಿ-ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಆ ಸಭೆಯ ಚಿತ್ರವನ್ನು ಬಳಸಿಕೊಂಡು, ಅದು ಕಾಂಗ್ರೆಸ್‌ ಕಾರ್ಯಕರ್ತರ ಸಭೆಯೆಂದು ಬಿಂಬಿಸಿ ಸುದ್ದಿ ಪತ್ರಿಕೆಯನ್ನೇ ಹೋಲುವ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಸೃಷ್ಠಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಸಿದ್ದರಾಮಯ್ಯ ಅವರು ‘ನಮಗೆ ಹಿಂದುಗಳ ಅಗತ್ಯವಿಲ್ಲ. ಮುಸ್ಲಿಮರ ಓಟು ಸಾಕು’ ಎಂದಿದ್ದಾರೆ ಎಂದು ನಕಲಿ ಸುದ್ದಿಯನ್ನು ಹರಿಬಿಡಲಾಗಿದೆ.

ಆ ಸುದ್ದಿಯ ತುಣುಕು ಸುಳ್ಳೆಂದು ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, “ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು” ಎಂದಿದ್ದಾರೆ.

 

“ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...