ಮಹಾರಾಷ್ಟ್ರದಲ್ಲಿ ನಕಲಿ ಮತದಾನ? ‘ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ದರು’; ಮಹಿಳೆ ಹೇಳಿಕೆ

Date:

ಮಹಾರಾಷ್ಟ್ರದಲ್ಲಿ ಜನವರಿ 15ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ, ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ಯಲಾಗಿತ್ತು. ಅಲ್ಲಿ, ನಿರ್ದಿಷ್ಟ ಪಕ್ಷಕ್ಕೆ ಮತ ಚಲಾಯಿಸುಂತೆ ನನ್ನ ಮೇಲೆ ಒತ್ತಡ ಹೇರಲಾಯಿತು ಎಂದು ಮಹಿಳೆಯೊಬ್ಬರು ಹೇಳಿಕೊಂಡಿದ್ದಾರೆ. ಮಹಾರಾಷ್ಟ್ರದ ಬೀಡ್‌ ಜಿಲ್ಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬೀಡ್‌ ಜಿಲ್ಲೆಯ ಗೆವ್ರಾಯ್ ತಾಲೂಕಿನ ನಿವಾಸಿಯಾಗಿರುವ ಮಹಿಳೆ ತನ್ನ ದೂರಿನಲ್ಲಿ, “ನನಗೆ ಮತದಾನ ಪ್ರಕ್ರಿಯೆಯ ಬಗ್ಗೆ ಗೊತ್ತಿರಲಿಲ್ಲ. ನನ್ನನ್ನೂ ಸೇರಿದಂತೆ ಹಲವಾರು ಮಹಿಳೆಯರನ್ನು ಪುಣೆ ಜಿಲ್ಲೆಯ ಜೆಜುರಿಯಲ್ಲಿರುವ ಸ್ವ-ಸಹಾಯ ಗುಂಪಿನ ಸಭೆ ಮತ್ತು ಖಂಡೋಬಾ ದೇವಸ್ಥಾನಕ್ಕೆ ಕರೆದೊಯ್ಯುತ್ತೇವೆಂದು ಹೇಳಿ ಬಸ್‌ನಲ್ಲಿ ಕರೆದುಕೊಂಡು ಹೋದರು. ಆದರೆ, ಪುಣೆ ಬದಲಿಗೆ ಪಿಂಪ್ರಿ ಚಿಂಚ್‌ವಾಡ್‌ಗೆ ಕರೆದೊಯ್ದು, ಅಲ್ಲಿ ನಿರ್ದಿಷ್ಟ ಪಕ್ಷಕ್ಕೆ ಮತ ಚಲಾಯಿಸುವಂತೆ ಒತ್ತಾಯ ಮಾಡಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಬೀಡ್ ಜಿಲ್ಲೆಯ ಹಲವಾರು ಮಹಿಳೆಯರನ್ನು ನಾಲ್ಕು ಬಸ್‌ಗಳಲ್ಲಿ ಪಿಂಪ್ರಿ ಚಿಂಚ್‌ವಾಡ್‌ಗೆ ಕರೆದೊಯ್ಯಲಾಯಿತು. ನಾವು ಅಲ್ಲಿ ಮತ ಚಲಾಯಿಸಿದ್ದೇವೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಒಬ್ಬ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದೇನೆ. ನನಗೆ ಅವರು ಮೋಸ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರನ್ನು ವಿನಂತಿಸಿದ್ದೇನೆ. ನಾನು ಆರೋಪಿ ಮಹಿಳೆಯಿಂದ ಯಾವುದೇ ಹಣ ಸ್ವೀಕರಿಸಿಲ್ಲ” ಎಂದು ಅವರು ಹೇಳಿವುದಾಗಿ ತಿಳಿದುಬಂದಿದೆ.

ಬೀಡ್ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಕನ್ವತ್ ಅವರು ದೂರು ಸ್ವೀಕರಿಸಿರುವುದನ್ನು ದೃಢಪಡಿಸಿದರು. “ಮುಂದಿನ ಕ್ರಮಕ್ಕಾಗಿ ನಾವು ಪುಣೆ ಕಲೆಕ್ಟರ್‌ಗೆ ದೂರನ್ನು ವರ್ಗಾಯಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಪಿಂಪ್ರಿ ಚಿಂಚವಡ್ ಮಹಾನಗರ ಪಾಲಿಕೆ ಒಟ್ಟು 128 ಸ್ಥಾನಗಳ ಪೈಕಿ ಬಿಜೆಪಿ 83 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿದೆ. ಎನ್‌ಸಿಪಿ (ಅಜಿತ್) 36, ಶಿವಸೇನೆ (ಶಿಂಧೆ) 7 ಸ್ಥಾನಗಳನ್ನು ಗೆದ್ದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...