‘ಆತ್ಮಹತ್ಯೆಗೈದ ವ್ಯಕ್ತಿ ಗುತ್ತಿಗೆದಾರ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಟೀಲ್ ವಿರುದ್ಧ ಕಾಂಗ್ರೆಸ್ ದೂರು

Date:

  • ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ
  • ‘ಗುತ್ತಿಗೆದಾರನ ಆತ್ಮಹತ್ಯೆ’ ಎಂದು ಟ್ವೀಟ್‌ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌

ಬೆಂಗಳೂರಿನಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡದ್ದನ್ನು ‘ಗುತ್ತಿಗೆದಾರನ ಆತ್ಮಹತ್ಯೆ’ ಎಂದು ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಣತಾಣದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಕಾಂಗ್ರೆಸ್‌ನ ನಿಯೋಗವೊಂದು ಪೊಲೀಸರಿಗೆ ದೂರು ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ ಜನತೆಗೆ ಸುಳ್ಳು ಅಪಪ್ರಚಾರ, ಆಧಾರ ರಹಿತ ಆರೋಪಗಳ ಮೂಲಕ ವದಂತಿಯನ್ನು ರವಾನಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗುತ್ತಿಗೆದಾರ, ಇದಕ್ಕೆ ಸರ್ಕಾರವೇ ಕಾರಣ ಎಂದು ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಇವರ ವಿರುದ್ದ ಕೂಡಲೇ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದ ನಿಯೋಗವು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ.

manavi

ಆ.10ರಂದು ಅತ್ತಿಗುಪ್ಪೆ ವ್ಯಾಪ್ತಿಯಲ್ಲಿ ಒಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈತ ಗುತ್ತಿಗೆದಾರ ಅಲ್ಲ ಎಂದು ಅವರ ಕುಟುಂಬಸ್ಥರೇ ಸ್ಪಷ್ಟಪಡಿಸಿದ್ದಾರೆ, ಆದರೂ ಕೂಡ ನಳಿನ್ ಕುಮಾರ್ ಕಟೀಲ್ ರವರು ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಧ್ಯಮಗಳ ಮೂಲಕ ಸರ್ಕಾರದ ವಿರುದ್ಧ ಆಧಾರರಹಿತ ಆರೋಪವನ್ನು ಮಾಡುವ ಮೂಲಕ ಸುಳ್ಳು ವದಂತಿಗಳನ್ನು ಹಬ್ಬಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಜನರ ಶಾಂತಿಗೆ ಭಂಗ ತರುವ ಪ್ರಯತ್ನ ಮಾಡಿದ್ದಾರೆ ಎಂದು ದೂರಿನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ಅಪಪ್ರಚಾರ ಮಾಡಿರುವ ಹಾಗೂ ಸುಳ್ಳು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಇವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 191ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಏನಿದು ಘಟನೆ?
ನಿನ್ನೆ ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ದೊಡ್ಡಯ್ಯ ಅವರ ಪುತ್ರ ಗೌತಮ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಂಜೆ ಟ್ವೀಟ್ ಮಾಡಿದ್ದ ನಳಿನ್ ಕುಮಾರ್ ಕಟೀಲ್, ಇದು ಜೀವ ತೆಗೆಯುವ ಸರ್ಕಾರ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರೈತರ, ನೌಕರನ ಆತ್ಮಹತ್ಯೆ ಎಂದು ಪ್ರತಿ ದಿನ ಕೇಳುತ್ತಲೇ ಇದ್ದೇವೆ. ಇಂದು ಬಿಬಿಎಂಪಿ ಗುತ್ತಿಗೆದಾರನ ಆತ್ಮಹತ್ಯೆ. ಕಾಮಗಾರಿಯ ಬಿಲ್ ಕೇಳಿದ್ದಕ್ಕೆ ಬೇಜವಾಬ್ದಾರಿಯ ಮಾತನಾಡಿದ ಡಿಕೆ ಶಿವಕುಮಾರ್ ಅವರೇ ಇದಕ್ಕೆ ನೇರ ಹೊಣೆ. ಕಾಂಗ್ರೆಸ್ಸಿಗರೇ, ಇನ್ನೆಷ್ಟು ಬಲಿ ಬೇಕು? ಎಂದು ಮಾಧ್ಯಮವೊಂದರಲ್ಲಿ ಬಂದಿದ್ದ ವಿಡಿಯೋ ಹಾಕಿದ್ದರು.

ಆದರೆ ಆತ ಗುತ್ತಿಗೆದಾರ ಆಗಿರಲಿಲ್ಲ ಎಂದು ಗೌತಮ್ ತಂದೆ ದೊಡ್ಡಯ್ಯನವರು ಹೇಳಿಕೆ ನೀಡಿದ್ದಾರೆ. ‘ಆತ ಯಾವುದೇ ಕಂಟ್ರಾಕ್ಟರ್​ ಕೆಲಸ ಮಾಡುತ್ತಿರಲಿಲ್ಲ. ಕಳೆದ 3-4 ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ನಮಗೂ ಗೊತ್ತಿಲ್ಲ’ ಎಂದು ಸ್ಪಷ್ಟೀಕರಣ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...