ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಆತಂಕಕಾರಿ, ಕೇಂದ್ರ ನೀತಿ ರೂಪಿಸಬೇಕು: ಶರದ್ ಪವಾರ್ ಆಗ್ರಹ

Date:

ಮಹಾರಾಷ್ಟ್ರದ ಮರಾಠವಾಡ ಮತ್ತು ವಿದರ್ಭದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಅಧಿಕವಾಗುತ್ತಿದ್ದು, ಈ ಬಗ್ಗೆ ಶನಿವಾರ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಕೃಷಿಕರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಹೊಸ ನೀತಿಯನ್ನು ರೂಪಿಸಬೇಕು ಎಂದು ಶರದ್ ಪವಾರ್ ಆಗ್ರಹಿಸಿದ್ದಾರೆ.

2024ರಲ್ಲಿ ಮಹಾರಾಷ್ಟ್ರದಲ್ಲಿ 2,635 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಪರಿಹಾರ ಮತ್ತು ಪುನರ್ವಸತಿ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಈ ಹಿನ್ನೆಲೆ ಶರದ್ ಪವಾರ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ವಿಪಕ್ಷಗಳು ಒಟ್ಟಾಗಿ ಕಣಕ್ಕೆ: ಶರದ್ ಪವಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಮರಾಠವಾಡ ಮತ್ತು ವಿದರ್ಭದಲ್ಲಿ ರೈತರ ಆತ್ಮಹತ್ಯೆ ಬಗ್ಗೆ ಬಂದಿರುವ ಮಾಹಿತಿಯು ಆತಂಕಕಾರಿಯಾಗಿದೆ. ನಾವು ವಿವಿಧ ಸ್ಥಳಗಳಿಂದ ನಿಖರವಾದ ಡೇಟಾವನ್ನು ಸಂಗ್ರಹಿಸುತ್ತೇವೆ. ರೈತರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರವು ನೀತಿಯನ್ನು ಸಿದ್ಧಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲೇ ಎನ್‌ಸಿಪಿ (ಎಸ್‌ಪಿ) ನಾಯಕ ಜಯಂತ್ ಪಾಟೀಲ್ ಅವರು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರುತ್ತಾರೆ ಎಂಬ ಸುದ್ದಿಯ ಬಗ್ಗೆಯೂ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. “ಈ ವದಂತಿ ಬಗ್ಗೆ ಈಗಾಗಲೇ ಜಯಂತ್ ಪಾಟೀಲ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ” ಎಂದು ಹೇಳಿದ್ದಾರೆ. ಎನ್‌ಸಿಪಿ (ಎಸ್‌ಪಿ) ರಾಜ್ಯ ಅಧ್ಯಕ್ಷ ಪಾಟೀಲ್ ವದಂತಿ ಬಗ್ಗೆ ಸ್ಪಷ್ಟಣೆ ನೀಡಿದ್ದರು. “ನಾನು ಅಸಮಾಧಾನಗೊಂಡಿಲ್ಲ, ನನ್ನ ಹೇಳಿಕೆಯಿಂದ ಸಣ್ಣ ಭಾಗವನ್ನು ತಿರುಚಿ ಸುದ್ದಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...