ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13ರಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಈ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣ ರಾಜ್ಯದ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ಇಂಟರ್ನೆಟ್ ಸೇವೆ, ಬಲ್ಕ್ ಎಸ್ಎಂಎಸ್ ಮತ್ತು ಮೊಬೈಲ್ ನೆಟ್ವರ್ಕ್ ಕಂಪೆನಿಗಳು ಒದಗಿಸುವ ಎಲ್ಲಾ ಡಾಂಗಲ್ ಸೇವೆಗಳನ್ನು ಸ್ಥಗಿತಗೊಳಿಸಲು ಮುಂದಾಗಿದೆ.
Farmers’ protest | Mobile internet services, bulk SMS and all dongle services etc provided on mobile networks, except the voice calls in the jurisdiction of districts Ambala, Kurukshetra, Kaithal, Jind, Hisar, Fatehabad and Sirsa of Haryana State suspended. The order will be in… pic.twitter.com/HiDAvqXnBP
— ANI (@ANI) February 10, 2024
ಈ ಬಗ್ಗೆ ಹರಿಯಾಣದ ಬಿಜೆಪಿ ಸರ್ಕಾರವು ಆದೇಶ ಹೊರಡಿಸಿದ್ದು, ಈ ಆದೇಶವು ಫೆಬ್ರವರಿ 11ರ ಬೆಳಗ್ಗೆ 6 ರಿಂದ ಫೆಬ್ರವರಿ 13ರ ರಾತ್ರಿ 12ರವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಸೋಷಿಯಲ್ ಮೀಡಿಯಾಗಳ ಮೂಲಕ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡುವುದನ್ನು ತಡೆಯಲು ಈ ಕ್ರಮ ಕೈಗೊಂಡಿರುವುದಾಗಿ ಬಿಜೆಪಿ ಸರ್ಕಾರ ಆದೇಶದಲ್ಲಿ ಸಮಜಾಯಿಷಿ ನೀಡಿದೆ.
Shambu Border sealed by the Haryana Police with big stones and barricades, security being enhanced in Ambala in view of farmers’ call for a march to Delhi scheduled for 13th February. #ShambuBorder #FarmersProtest pic.twitter.com/ikCqmZHQzg
— Gagandeep Singh (@Gagan4344) February 10, 2024
ಯಾಕೆ ದೆಹಲಿ ಚಲೋ ಅಂದೋಲನ?
ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾನೂನಿಗೆ ಮತ್ತು ಸ್ವಾಮಿನಾಥನ್ ಶಿಫಾರಸುಗಳ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 13ರಂದು ದೆಹಲಿ ಚಲೋ ಅಂದೋಲನ ಹಮ್ಮಿಕೊಳ್ಳಲಾಗಿದೆ.
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಈ ಚಳವಳಿಗೆ ಕರೆ ನೀಡಿದೆ. ದೆಹಲಿ ಚಲೋ ಆಂದೋಲನದಲ್ಲಿ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುವ ಸಾಧ್ಯತೆಯಿದೆ.
#WATCH | Haryana | Barricading by Police and local administration being done, security being enhanced in Ambala in view of farmers’ call for march to Delhi, scheduled for 13th February. pic.twitter.com/zeo2pFFrlE
— ANI (@ANI) February 10, 2024
ಹರಿಯಾಣ ಪೊಲೀಸರಿಂದ ಎಚ್ಚರಿಕೆ
ರೈತರ ಪ್ರತಿಭಟನೆಗೆ ಯಾರೂ ಅನುಮತಿ ಪಡೆದಿಲ್ಲ. ಅನುಮತಿಯಿಲ್ಲದೆ ಯಾವುದೇ ವ್ಯಕ್ತಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಿದ್ದಲ್ಲಿ ಸಾರ್ವಜನಿಕ ಅಸ್ತಿ ಹಾನಿ ತಡೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅಂಬಾಲಾ ಎಸ್ಪಿ ಜಶನ್ದೀಪ್ ಸಿಂಗ್ ರಾಂಧವಾ ಎಚ್ಚರಿಕೆ ನೀಡಿದ್ದಾರೆ.
ಹರಿಯಾಣ ಪೊಲೀಸರು ರೈತರು ದೆಹಲಿಗೆ ಪ್ರವೇಶಿಸದಂತೆ ತಡೆಯಲು ಭಾರೀ ಕಸರತ್ತು ನಡೆಸುತ್ತಿದ್ದು, ರಸ್ತೆಗೆ ಅಡ್ಡಲಾಗಿ ಟ್ರಕ್ ಮತ್ತು ಕ್ರೇನ್ಗಳನ್ನು ಬಳಸಿಕೊಂಡು ಸಿಮೆಂಟ್ನ ಬ್ಯಾರಿಕೇಡ್ಗಳನ್ನು ಅಳವಡಿಸುತ್ತಿದ್ದಾರೆ.





