‘ಭಾರತೀಯ ರಾಜ್ಯದ ವಿರುದ್ಧ ಹೋರಾಟ’ ಹೇಳಿಕೆ; ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲು

Date:

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿದೆ. ನಾವೀಗ ಭಾರತೀಯ ರಾಜ್ಯದ ವಿರುದ್ಧವೇ ಹೋರಾಡುತ್ತಿದ್ದೇವೆ” ಎಂಬ ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ.

ಗುವಾಹಟಿಯ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜನವರಿ 15ರಂದು ದೆಹಲಿಯ ಕೋಟ್ಲಾ ರಸ್ತೆಯಲ್ಲಿ ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿಯ ಉದ್ಘಾಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ ಜಾತಿ ಸಮೀಕ್ಷೆ ನಕಲಿ, ದೇಶಾದ್ಯಂತ ಗಣತಿ ನಡೆಯಬೇಕಿದೆ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹೇಳಿಕೆ ವಿರುದ್ಧ “ಭಾರತದ ಸಾರ್ವಭೌಮತ್ವ ಏಕತೆ ಮತ್ತು ಸಮಗ್ರತೆಗೆ ಅಪಾಯ ಉಂಟು ಮಾಡುವ ಕೃತ್ಯಗಳು” ಎಂಬ ಬಿಎನ್‌ಎಸ್‌ನ ಸೆಕ್ಷನ್ 152 ಮತ್ತು 197(1)ಡಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದು ಜಾಮೀನು ರಹಿತ ಪ್ರಕರಣವಾಗಿದೆ.

“ರಾಹುಲ್ ಗಾಂಧಿ ಹೇಳಿಕೆಯು ವಾಕ್ ಸ್ವಾತಂತ್ರ್ಯದ ಮಿತಿಯನ್ನು ಮೀರಿದೆ. ಸಾರ್ವಜನಿಕ ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆಯನ್ನು ಒಡ್ಡಿದೆ” ಎಂದು ದೂರುದಾರರಾದ ಮಂಜಿತ್ ಚೆಟಿಯಾ ಆರೋಪಿಸಿದ್ದಾರೆ.

“ರಾಹುಲ್ ಹೇಳಿಕೆ ರಾಜ್ಯದ ಅಧಿಕಾರವನ್ನು ಕಿತ್ತುಕೊಳ್ಳುವ ಪ್ರಯತ್ನವಾಗಿದೆ. ಅಶಾಂತಿ ಮತ್ತು ಪ್ರತ್ಯೇಕತಾವಾದಿ ಭಾವನೆಗಳನ್ನು ಕೆರಳಿಸುವ ಅಪಾಯಕಾರಿ ಸನ್ನಿವೇಶವನ್ನು ಸೃಷ್ಟಿಸುತ್ತದೆ. ತಮ್ಮ ಹೋರಾಟವು ‘ಭಾರತೀಯ ರಾಜ್ಯ’ದ ವಿರುದ್ಧ ಎಂದು ಘೋಷಿಸುವ ಮೂಲಕ ಅವರು ಪ್ರಜ್ಞಾಪೂರ್ವಕವಾಗಿ ಜನರಲ್ಲಿ ವಿಧ್ವಂಸಕ ಚಟುವಟಿಕೆಗಳು ಮತ್ತು ದಂಗೆಯನ್ನು ಪ್ರಚೋದಿಸಿದ್ದಾರೆ” ಎಂದು ದೂರುದಾರರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ ಎಂ ಬಿ ಪಾಟೀಲ್

ಪದೇ ಪದೇ ಚುನಾವಣೆಯಲ್ಲಿ ಸೋತು ರಾಹುಲ್ ಗಾಂಧಿ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಗಾಂಧಿ ಹೊಂದಿದ್ದಾರೆ. ಆದರೆ ಸುಳ್ಳು ಹರಡುತ್ತಿದ್ದಾರೆ ಎಂದಿದ್ದಾರೆ.

ಪ್ರಸ್ತುತ ದೇಶದಲ್ಲಿ ಯಾವುದೇ ಸಂಸ್ಥೆಯಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ ಹಿಡಿತವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಹೇಳಿಕೆಯನ್ನು ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...